ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾಲೇಜುಗಳ ಮಧ್ಯವಲಯದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪಿಇಎಸ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ.
ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 14 ತಂಡಗಳು, 175 ಕ್ರೀಡಾಪಟುಗಳು ಭಾಗವಹಿಸಿದ್ದು, ಶಿವಮೊಗ್ಗದ ಜೆಎನ್‌ಎನ್‌ಸಿಇ ಕ್ರೀಡಾಪಟುಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ ಇವರಿಗೆ ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟಿನ ಆಡಳಿತ ಮಂಡಳಿರವರು, ಹಾಗೂ ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ, ಪ್ರಾಂಶುಪಾಲ ಡಾ. ಯುವರಾಜು ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















