ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯಥಿ, ಹಾಲಿ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಅವರು ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಕುರಿತಂತೆ ಸ್ವತಃ ಮಾಹಿತಿ ನೀಡಿರುವ ಅವರು, ನಾಳೆ ಬುಧವಾರ ಶಿಕಾರಿಪುರದ ಹುಚ್ಚರಾಯ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದೇನೆ. ಆನಂತರ ನಮ್ಮ ಕುಟುಂಬಸ್ಥರು ನಂಬಿಕೊಂಡಿರುವ ಮುಗುಳುಗೆರೆ ಬೀರಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದೇನೆ ಎಂದರು.

Also read: ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ, ಬಿಡಲ್ಲ: ಕೆ.ಎಸ್. ಈಶ್ವರಪ್ಪ ಗುಡುಗು
ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ 11.15ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು.

ಇನ್ನು, ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಸಮುದಾಯಗಳ ಮುಖಂಡರು ನನ್ನೊಂದಿಗೆ ಪಾಲ್ಗೊಳ್ಳಲಿದ್ದಾರೆ. ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post