ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಘೋಷಣೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಗೆ Kimmane Rathnakar ಟಿಕೆಟ್ ನೀಡಲಾಗಿದ್ದು, ಇನ್ನೂ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಯ ಹೆಸರು ಘೋಷಣೆಯ ಕುತೂಹಲ ಮುಂದುವರೆದಿದೆ.
ಇಂದು ಎಐಸಿಸಿಯಿಂದ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಪ್ರಕಟಿಸಿದ್ದಂತ ಮೊದಲ 124 ಕ್ಷೇತ್ರಗಳ ಪಟ್ಟಿಯಲ್ಲಿ, ಸೊರಬ ಕ್ಷೇತ್ರಕ್ಕೆ ಮಧು ಬಂಗಾರಪ್ಪ, ಸಾಗರ ಕ್ಷೇತ್ರಕ್ಕೆ ಬೇಳೂರು ಗೋಪಾಲಕೃಷ್ಣ ಹಾಗೂ ಭದ್ರಾವತಿ ಕ್ಷೇತ್ರಕ್ಕೆ ಬಿ.ಕೆ ಸಂಗಮೇಶ್ವರಗೆ ಟಿಕೆಟ್ ನೀಡಲಾಗಿತ್ತು.
ಇನ್ನೂ ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ, ಶಿವಮೊಗ್ಗ, ಶಿಕಾರಿಪುರ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಬೇಕಿದೆ. ಈ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Also read: ವಿಟಿಯು ಯೂಥ್ ಫೆಸ್ಟ್: ಪಿಇಎಸ್ ವಿದ್ಯಾರ್ಥಿಗಳಿಗೆ 6 ಪದಕ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post