ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಸಾಗರ ಅರಣ್ಯ ವಿಭಾಗದ ಬೈರಾಪುರದ ಅಂಬಲಿಗೊಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹದ #Tiger Dead body ಪತ್ತೆಯಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಅವರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ ಗುಂಡಿನ (ಪೆಲೆಟ್) ಗಾಯವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ೧೦ ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.
Also Read: ಮಾ.1-20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ | ಸಿದ್ಧತೆ ಹೇಗಿದೆ?
ಹುಲಿ ಮೃತದೇಹ ಪತ್ತೆಯಾದ ಪ್ರದೇಶದಲ್ಲಿ ಇದುವರೆಗೆ ಹುಲಿ ಕಾಣಿಸಿಕೊಂಡಿಲ್ಲದ ಕಾರಣ, ಇದನ್ನು ಬೇರೆಡೆ ಕೊಂದು ಇಲ್ಲಿ ಬಿಸಾಡಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿರುವ ಬಗ್ಗೆಯೂ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಖಂಡ್ರೆ, ಈ ಬಗ್ಗೆಯೂ ತನಿಖೆಗೆ ಸೂಚನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post