ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ನಲ್ಲಿದ್ದ ತಂದೆ ಹಾಗೂ ಮಗಳು ಗಾಯಗೊಂಡ ಘಟನೆ ನಗರದ ಹೊರವಲಯ ಶ್ರೀರಾಂಪುರ ಸಮೀಪದ ರಾಷ್ಟ್ರೀಯ ಹೆದ್ಧಾರಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಕರೆದೊಯ್ಯುವಾಗ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತಂದೆ ಮತ್ತು ಮಗಳು ಇಬ್ಬರೂ ಗಾಯಗೊಂಡಿದ್ದಾರೆ.
ಬೈಕ್ ಆಯನೂರು ಕಡೆಯಿಂದ ಶಿವಮೊಗ್ಗದೆಡೆಗೆ ತೆರಳುತ್ತಿತ್ತು. ಟಿಪ್ಪರ್ ಲಾರಿ ಚಾಲಕ ಮಿತಿಮೀರಿದ ವೇಗ ಹಾಗೂ ಅಜಾಗರೂಕವಾಗಿ ಚಾಲನೆ ಮಾಡಿಕೊಂಡು ಬಂದು, ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post