ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಒಂದೇ ದಿನದಲ್ಲಿ 1 ಕೋಟಿ ಲಸಿಕೆ ನೀಡುವಲ್ಲಿ ಯಶಸ್ವಿ ಕಾರ್ಯಕ್ರಮ ಮಾಡಿದ ಪ್ರಧಾನಮಂತ್ರಿಗಳಿಗೆ ವಿನಾಯಕ ನಗರ ನಿವಾಸಿಗಳ ಸಂಘದ ಅಧ್ಯಕ್ಷ ಡಿ.ಎಸ್. ಅರುಣ್ ಅಭಿನಂದನೆ ಸಲ್ಲಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಇಂದು ನಗರದ ವಿನಾಯಕನಗರ ನಿವಾಸಿಗಳ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಲಸಿಕೆ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಲು ಕರೆ ನೀಡಿದರು.
ಎರಡನೇ ಅಲೆಯ ಪ್ರಭಾವವನ್ನು ಕಡಿತಗೊಳಿಸಿದ್ದು ಲಸಿಕೆ ಮತ್ತು ಮಾಸ್ಕ್ ಧರಿಸುವುದರಿಂದ ಮುಂಬರುವ ಬಿಂಬಿತ 3ನೇ ಅಲೆಯನ್ನು ಸಹ ಲಸಿಕೆ ಮತ್ತು ಮಾಸ್ಕ್ ನಿಂದ ತಡೆಯಬಹುದಾಗಿದೆ ಎಂದು ಲಸಿಕೆಯ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳಿಗೆ ಕೇಂದ್ರದ ಆರೋಗ್ಯ ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯದ ಆರೋಗ್ಯ ಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ, ಶಾಸಕರು, ಸಂಸದರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್, ಬಾಲಕೃಷ್ಣ, ಸಂತೋಷ್, ರಾಜೇಂದ್ರ ಶಿವಾನಂದ್ ಹಾಗೂ ಕೋಟೆ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಸರಸ್ವತಿ ಹಾಗೂ ಅವರ ತಂಡದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post