ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಕುಂಸಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ತುಪ್ಪೂರು ಗ್ರಾಮ ಪಂಚಾಯತಿಯ ಸನ್ನಿವಾಸ ಗ್ರಾಮದಲ್ಲಿ 20 ಲಕ್ಷ ರೂಗಳಲ್ಲಿ ನಿರ್ಮಿಸಲಾಗುತ್ತಿರುವ. ಶ್ರೀ ಶನೇಶ್ವರ ಸ್ಬಾಮಿ ದೇವಸ್ಥಾನದ ಸಮುದಾಯ ಭವನದ ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಭಾಗದ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಾಗೂ ತಮ್ಮ ಅವಧಿಯಲ್ಲಿ ಆದಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸೂಡೂರು ಸುಧಾಕರ್, ಉಮೇಶ್, ಅರುಣ್, ಅಣ್ಣಪ್ಪ, ಗ್ರಾಮ ಪಂಚಾಯತಿ ಪ್ರತಿನಿಧಿಗಳು. ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಜಲ ಜೀವನ್ ಮಿಷನ್ ಪ್ರಚಾರ ಅಭಿಯಾನಕ್ಕೆ ಜಗದೀಶ್ ಚಾಲನೆ
ಮಾ.14ರಂದು ಜಿಲ್ಲಾ ಪಂಚಾಯಿತಿ ಶಿವಮೊಗ್ಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಶಿವಮೊಗ್ಗ ಮತ್ತು ಚೈತನ್ಯ ರೂರಲ್ ಡೆವೆಲಪ್ ಮೆಂಟ್ ಸೊಸೈಟಿ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಅನುಷ್ಟಾನಗೊಳ್ಳುತ್ತಿರುವ ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರನ್ನು ಒದಗಿಸುವ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಇಂದು ಯೋಜನೆಯ ಬಗ್ಗೆ ಮಾಹಿತಿ ನೀಡಲು ಅಟೋ ಪ್ರಚಾರವನ್ನು ಕೈಗೊಳ್ಳಲಾಗಿದ್ದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಶಿವಮೊಗ್ಗದ ಕಾರ್ಯಪಾಲಕ ಅಭಿಯಂತರಾದ ಜಗದೀಶ್ ಬಿ.ಸಿ ಉದ್ಘಾಟಿಸಿ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ISRA ತಂಡದ ನಾಯಕರಾದ ದಿನಕರ ಜಾಧವ್, ಸಹಾಯಕ ಇಂಜಿನಿಯರ್ ಆದ ಶ್ಯಾಮ್ ತಾಂಬ್ಲೆ, ಜಿಲ್ಲಾ IMS ಸಂಯೋಜಕರಾದ ಗಿರೀಶ್ ಪಾಟೀಲ್ ಮತ್ತು ಮಹೇಶ್ವರಪ್ಪ ಇಲಾಖೆಯ ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಶಾಸಕ ಈಶ್ವರಪ್ಪ ಕಾನೂನು ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ
ಅಲ್ಲಾಹು ಬಗ್ಗೆ ಹಾಗೂ ಆಜಾನ್ ವಿರುದ್ಧ ಅವಹೇಳನ ಮಾತುಗಳನ್ನು ಆಡಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಿವಮೊಗ್ಗ ನಗರ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್‌ಡಿಪಿಐ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮುಸ್ಲಿಂ ಸಮುದಾಯದ ಬಗ್ಗೆ ಧಾರ್ಮಿಕ ನಿಂದನೆ ಮಾಡಿ ಶಾಸಕ ಕೆ.ಎಸ್.ಈಶ್ವರಪ್ಪನವರು ಮಂಗಳೂರಿನ ಕಾವೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಆಜಾನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ದೈನಂದಿನ ಸಮಯಕ್ಕೆ ತಕ್ಕಂತೆ ಮಸೀದಿಯಲ್ಲಿ ಆಜಾನ್ ಕೂಗಿದಾಗ ರಾಜಕೀಯ ಹಾಗೂ ಕೋಮುದ್ವೇಷದ ಉದ್ದೇಶದಿಂದ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಒಂದು ಸಮುದಾಯವನ್ನು ಎತ್ತುಕಟ್ಟುವಂತಹ ಕೆಲಸ ಮಾಡಿದ್ದಾರೆ. ರಾಜ್ಯದ ಶಾಂತಿ ಸುವ್ಯವಸ್ಥೆ ಹಾಳುಮಾಡುವ ಪ್ರಯತ್ನ ಮಾಡಿದ್ದು, ಅವರ ಮೇಲೆ ಕಾನೂನು ರೀತಿಯ ಕ್ರಮಕೈಗೊಳ್ಳಬೇಕೆಂದು ಎಸ್‌ಡಿಪಿಐ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್, ರಾಜ್ಯ ಸಮಿತಿ ಸದಸ್ಯರಾದ ಸಲೀಂಖಾನ್, ಜಿಲ್ಲಾ ಕಾರ್ಯದರ್ಶಿ ಖಲೀಂ, ಜಿಲ್ಲಾ ಸಮಿತಿ ಸದಸ್ಯರಾದ ಫೈರೋಜ್, ಜೀಲಾನ್, ಇಸಾಕ್, ರಹೀಂ ಮತ್ತಿತರರಿದ್ದರು.
ಮಾ. 17ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಜಯಕರ್ನಾಟಕ ಸಂಘಟನೆ ಜಿಲ್ಲಾ ಸಮಿತಿಯಿಂದ ಮಾ. 17ರಂದು ಜ್ಯುಯೆಲ್ ರಾಕ್ ಹೋಟೆಲ್ ಸಭಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ವಿ. ಸುರೇಶ್ ಶೆಟ್ಟಿ ಹೇಳಿದರು.
ಅವರು ಇಂದು ಮೀಡಿಯಾ ಹೌಸ್ ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಅನುಕೂಲವಾಗುವ ಹಿನ್ನಲೆಯಲ್ಲಿ ಈ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಸರ್ಜಿ ಆಸ್ಪತ್ರೆ ನಮ್ಮ ಜೊತೆಗಿರುತ್ತದೆ. ನುರಿತ ವೈದ್ಯರು ತಪಾಸಣೆ ಮಾಡುತ್ತಾರೆ. ಮೂಳೆ ರೋಗ, ದಂತ, ಮಕ್ಕಳ, ಕಣ್ಣು, ಹಾಗೂ ಸ್ತ್ರೀ ರೋಗ ತಜ್ಞರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ಮಾಡುತ್ತಾರೆ. ಉಚಿತವಾಗಿ ಮಧುಮೇಹ ಮತ್ತು ರಕ್ಷ ಪರೀಕ್ಷೆ ಮಾಡಲಾಗುವುದು ಎಂದರು.
ಶಿಬಿರ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ ೩ ಗಂಟೆಯವರೆಗೆ ನಡೆಯಲಿದೆ. ರಕ್ತದ ತಪಾಸಣೆ ಮಾಡಿಸಿಕೊಳ್ಳುವವರು ಖಾಲಿ ಹೊಟ್ಟೆಯಲ್ಲಿ ಬರಬೇಕು. ಲಘು ಉಪಾಹಾರದ ವ್ಯವಸ್ಥೆ ಇರುತ್ತದೆ. ತಪಾಸಣೆ ಮತ್ತು ವೈದ್ಯರ ಸಲಹೆ ಪಡೆಯಬಹುದು. ಆರ್ಥಿಕವಾಗಿ ತುಂಬ ಬಡವರಾದರೆ ನಮ್ಮ ಸಂಘಟನೆಯೆ ಹೆಚ್ಚಿನ ಚಿಕಿತ್ಸೆಗೆ ನೆರವು ನೀಡುತ್ತದೆ. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕು. ಹೆಚ್ಚಿನ ವಿವರಗಳಿಗೆ 86603 63565 ಸಂಪರ್ಕಿಸಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಪರಶುರಾಮ್, ಜಿ.ಆರ್. ತ್ಯಾಗರಾಜ್, ಟಿ. ನಾಗರಾಜ್, ಮೋಹನ್ ದೇವರಾಜ್, ನಾಜೀಮಾ, ಪ್ರೇಮಾ ಎನ್. ಶೆಟ್ಟಿ, ಎಂ. ನಾಗರಾಜ್, ರವಿ, ರಮೇಶ್ ಮುಂತಾದವರಿದ್ದರು.
ಕಾಂಗ್ರೆಸ್ ನ ಮಹತ್ವಾಕಾಂಕ್ಷಿ ಪ್ರಣಾಳಿಕೆಯಾದ ಗ್ಯಾರಂಟಿ ಕಾರ್ಡ್ ವಿತರಣೆ
ಕಾಂಗ್ರೆಸ್ ನ ಮಹತ್ವಾಕಾಂಕ್ಷಿ ಪ್ರಣಾಳಿಕೆಯಾದ ಗ್ಯಾರಂಟಿ ಕಾರ್ಡ್ ವಿತರಣೆಯನ್ನು ಇಂದು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬೇಡರಹೊಸಹಳ್ಳಿಯಲ್ಲಿ ವಿತರಿಸಲಾಯಿತು
ಈ ಸಂದರ್ಭದಲ್ಲಿ ಮಾತನಾಡಿದ ಎನ್. ರಮೇಶ್ ಅವರು, ಕಾಂಗ್ರೆಸ್ ಪಕ್ಷ ಜನರಿಗೆ ಆತ್ಮ ವಿಶ್ವಾಸ ತುಂಬುತ್ತಿದೆ ಎನ್ನುವುದಕ್ಕೆ ಗ್ಯಾರಂಟಿ ಕಾರ್ಡ್ ನೀಡಿರುವುದೇ ಉದಾಹರಣೆಯಾಗಿದೆ. ಬಡವರ ಬದುಕು ದಿನೇ ದಿನೇ ದುಸ್ತರವಾಗುತ್ತಿದೆ. ಆದ್ದರಿಂದಲೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ, ಕುಟುಂಬ ನಿರ್ವಹಣೆ ಮಾಡುವ ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೆರವು, ಹಾಗೂ ಬಡವರು, ಶ್ರೀಮಂತರೆಂಬ ಬೇಧವಿಲ್ಲದೇ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಲದೇವಕೃಷ್ಣ, ಎಸ್. ರವಿಕುಮಾರ್, ಜಿ. ಪಲ್ಲವಿ, ದೇವಿಕುಮಾರ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post