No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಇಂದಿನ ಸುದ್ಧಿಗಳು| ಎ.8ರಂದು ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ನಾಟಕ ಪ್ರದರ್ಶನ

ಎ.13ರಂದು ಶಶಿಕುಮಾರ್ ಗೌಡ ನಾಮಪತ್ರ ಸಲ್ಲಿಕೆ | ಎಡಿಟರ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಶಿ.ಜು. ಪಾಶಾ ಆಯ್ಕೆ | ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿ: ಕಲೀಂ ಪಾಶಾ ಒತ್ತಾಯ | ಯುವಧ್ವನಿ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ: ಹೆಚ್.ಪಿ. ಗಿರೀಶ್ ವಿಶ್ವಾಸ

kalpa News by kalpa News
April 3, 2023
in ಶಿವಮೊಗ್ಗ
0
ಶಿವಮೊಗ್ಗದ ಇಂದಿನ ಸುದ್ಧಿಗಳು| ಎ.8ರಂದು ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ನಾಟಕ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  |

ಬೆಂಗಳೂರಿನ ಪ್ರವರ ಥಿಯೇಟರ್ ತಂಡವು ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಕಾರದೊಂದಿಗೆ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ `ಅಣ್ಣನ ನೆನಪು’ ನಾಟಕ ಪ್ರದರ್ಶನವನ್ನು ಏ.8ರ ಸಂಜೆ 6:30ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಾಟಕದ ನಿರ್ದೇಶಕ ಹಾಗೂ ವಿನ್ಯಾಸಕ ಹನು ರಾಮಸಂಜೀವ ತಿಳಿಸಿದರು.

ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ `ಅಣ್ಣನ ನೆನಪು’ ಕೃತಿ ಮಹಾಕವಿ ಕುವಂಪುರವರ ಜೀವನದ ಹಲವು ಮಹತ್ವದ ಅಧ್ಯಾಯಗಳು ಈ ನಾಟಕದಲ್ಲಿ ಪ್ರದರ್ಶನಗೊಳ್ಳಿವೆ ಎಂದರು.

ಈ ನಾಟಕದಲ್ಲಿ ತೇಜಸ್ವಿಯವರು ಹುಟ್ಟಿದಲ್ಲಿಂದ ಇಲ್ಲಿಯವರೆಗೂ ಕುವೆಂಪುರವರ ಕಥೆ, ಹಾಗೆಯೇ ಇದು ತೇಜಸ್ವಿಯವರ ಆತ್ಮಕತೆಯ ಹಲವು ಅಧ್ಯಾಯಗಳಿವೆ . ಇದೆಲ್ಲದರ ಜೊತೆಗೆ ಇದೊಂದು ಅತಿ ಸುಂದರ ಕಾದಂಬರಿಯಂತಹ ಕಲಾಕೃತಿ. ಇದರಲ್ಲಿ ಚಿತ್ರಿತವಾಗಿರುವ ಕುವೆಂಪುರವರ ವ್ಯಕ್ತಿತ್ವ ಮತ್ತು ಅವರ ಸುತ್ತ ಅರಳಿರುವ ಅನೇಕ ಪಾತ್ರಗಳು ಕನ್ನಡ ಸಾಹಿತ್ಯದಲ್ಲಿನ ಅನನ್ಯ ದಾಖಲೆಗಳಾಗಿವೆ ಎಂದರು.

ಈ ನಾಟಕವು ಬೆಂಗಳೂರಿನಲ್ಲಿ ನಾಲ್ಕು ಹಾಗೂ ಮೈಸೂರಿನಲ್ಲಿ ಎರಡು ಪ್ರದರ್ಶನಗೊಂಡಿದ್ದು, ಅಭೂತಪೂರ್ವ ಬೆಂಬಲ ಸಿಕ್ಕಿದೆ. ಈ ನಾಟಕವನ್ನು ಕುವೆಂಪು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಒಚಿದು ಗಂಟೆ 50 ನಿಮಿಷದ ಈ ನಾಟಕದಲ್ಲಿ ಒಟ್ಟು 35 ಕಲಾವಿದರ ತಂಡವಿದೆ. ಪ್ರವೇಶ ಶುಲ್ಕ 50ರೂ. ಇದ್ದು, ಹೆಚ್ಚಿನ ಮಾಹಿತಿಗಾಗಿ 9686869676ರಲ್ಲಿ ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ತಂಡದ ಸದಸ್ಯರಾದ ಬಿ.ಇ. ಭರತ್ , ಹರ್ಷ ಶಾಸ್ತ್ರಿ ಉಪಸ್ಥಿತರಿದ್ದರು.
ಎ.13ರಂದು ಶಶಿಕುಮಾರ್ ಗೌಡ ನಾಮಪತ್ರ ಸಲ್ಲಿಕೆ
ಶಿವಮೊಗ್ಗ ಮುಂಬರುವ ಚುನಾವಣೆಯಲ್ಲಿ ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಯನ್ನಾಗಿ ಪಕ್ಷ ಘೋಷಣೆ ಮಾಡಿದ್ದು ಏ.13ರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಸಂಯುಕ್ತ ಜನತಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್ ಗೌಡ ತಿಳಿಸಿದರು.

ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ ಇದು ಮೂರನೇ ಬಾರಿಯ ಸ್ಪರ್ಧೆಯಾಗಿದೆ. ಮೂರು ಲೋಕಸಭಾ, ಒಂದು ವಿಧಾನ ಪರಿಷತ್ ಚುನಾವಣೆಯಲ್ಲಿ ಸಹ ಸ್ಪರ್ಧಿಸಿದ್ದೆ ಎಂದರು.

ಕಳೆದ 15 ವರ್ಷಗಳಿಂದ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕಾಗಿ ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ಅದರಲ್ಲೂ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಸಮಾಜವಾದ ಸಿದ್ಧಾಂತ ಹಾಗೂ ಮೌಲ್ಯ ಕುರಿತು ಪಕ್ಷ ಹೋರಾಟ ಮಾಡುತ್ತಿದೆ ಎಂದರು.

ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಚುನಾವಣಾ ಪ್ರಚಾರಕ್ಕಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಕುಮಾರ್ ರಾಜ್ಯಕ್ಕೆ ಭೇಟಿನೀಡಲಿದ್ದು, ಆ ಸಮಯದಲ್ಲಿ ಭದ್ರಾವತಿ ಹಾಗೂ ಶಿವಮೊಗ್ಗಕ್ಕೂ ಆಗಮಿಸಿ ಪ್ರಚಾರ ಮಾಡಲಿದ್ದಾರೆ ಎಂದರು.

ಚುನಾವಣೆಯಲ್ಲಿ ಸುಧಾರಣೆ ಆಗಬೇಕು ಎಂಬುದು ಪಕ್ಷದ ಉದ್ದೇಶವಾಗಿದೆ ಎಂದ ಅವರು ನಾನು ನಾಮಪತ್ರ ಸಲ್ಲಿಸುವ ದಿನದಂದು ಪಕ್ಷದ ರಾಜ್ಯಾಧ್ಯಕ್ಷರಾದ ಮಹಿಮಾ ಪಟೇಲ್ ಹಾಜರಿರುವರು ಎಂದರು.

ಜಿಲ್ಲಾಧ್ಯಕ್ಷ ದೇವರಾಜ್ ಸಿಂಧ್ಯೆ ಮಾತನಾಡಿ, ಚುನಾವಣೆಯಲ್ಲಿ ಸ್ಪರ್ಧಿಸುವವರು ಏ.೮ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಅರ್ಜಿ ಸಲ್ಲಿಸಿದವರ ಮಾಹಿತಿ ಅನುಸರಿಸಿ ಅಭ್ಯರ್ಥಿಗಳನ್ನು ಘೋಷಿಸಲಾಗುವುದು. ತಮಗೂ ಸಹ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಟಿಕೆಟ್ ಸಿಗುವ ಸಂಭವವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಗದೀಶ್ ಪಟೇಲ್, ದಿವ್ಯಶ್ರೀ ಶಶಿಕುಮಾರ್ ಗೌಡ ಉಪಸ್ಥಿತರಿದ್ದರು.
ಎಡಿಟರ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಶಿ.ಜು. ಪಾಶಾ ಆಯ್ಕೆ
ಕರ್ನಾಟಕ ಪತ್ರಿಕಾ ಸಂಪಾದಕರ ಅಡಿಯಲ್ಲಿ ನಡೆಯುತ್ತಿರುವ ಶಿವಮೊಗ್ಗ ಎಡಿಟರ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಮಲೆನಾಡು ಎಕ್ಸ್‌ಪ್ರೆಸ್ ಸಂಪಾದಕ ಶಿ.ಜು. ಪಾಶಾ ಅವರನ್ನು ಆಯ್ಕೆ ಮಾಡಲಾಗಿದೆ.

ಕ್ಲಬ್‌ನ ಪ್ರಧಾನ ಕಾರ್ಯದರ್ಶಿಯಾಗಿ ರಾಜಋಷಿ ಸಂಪಾದಕ ಎ. ಭರತೇಶ್ ಉಪಾಧ್ಯಕ್ಷರಾಗಿ ಉಷಾಮಹಿ ಪತ್ರಿಕೆಯ ಸಂಪಾದಕರಾದ ಕಣ್ಣಪ್ಪ ಈ ಪತ್ರಿಕೆಯ ಸಂಪಾದಕ ಸಂಪಾದಕರಾದ ಎಚ್‌ಕೆ. ರಘುರಾಜ್ ನಿರ್ದೇಶಕರಾಗಿ ಎಸ್.ಆರ್. ರಂಜಿತ್ ಎಸ್.ಕೆ. ಗಜೇಂದ್ರ ಸ್ವಾಮಿ ಗಾರ ಶ್ರೀನಿವಾಸ್ ಜಿ. ಪಪದ್ಮನಾಭ್, ಜಿ. ಚಂದ್ರಶೇಖರ, ಹೆಚ್.ಎನ್.ಮಂಜುನಾಥ್, ಆರ್. ಹಾಲೇಶ್, ಆರ್. ಅಭಿನಂದನಾ ಆಯ್ಕೆಯಾಗಿದ್ದಾರೆ.
Kalahamsa Infotech private limitedಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿ: ಕಲೀಂ ಪಾಶಾ ಒತ್ತಾಯ
ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶೀಘ್ರವೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಬೇಕು ಮತ್ತು ಪಕ್ಷದಿಂದ ಅರ್ಜಿ ಸಲ್ಲಿಸಿದವರಿಗೇ ಟಿಕೆಟ್ ನೀಡಬೇಕು ಎಂದು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಂ ಪಾಶಾ ಹೇಳಿದರು.

ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಒಂದಷ್ಟು ಗೊಂದಲಗಳಿವೆ. ರಾಜ್ಯ ಹೈಕಮಾಂಡ್ ಕೂಡಲೇ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು. ಇದರಿಂದ ಪ್ರಚಾರಕ್ಕೆ ಅನುಕೂಲವಾಗುತ್ತದೆ. ಈಗಗಲೇ ಪಕ್ಷದಿಂದ ಹನ್ನೊಂದು ಜನರು ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಈ ಹನ್ನೊಂದರಲ್ಲಿಯೇ ಒಬ್ಬರಿಗೆ ಟಿಕೆಟ್ ನೀಡಬೇಕು ಯಾವುದೇ ಕಾರಣಕ್ಕೂ ಹೊರಗಿನಿಂದ ಬಂದವರಿಗೆ ಮಣೆ ಹಾಕಬಾರದು. ಮತ್ತು ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಬಾರದು ಎಂದರು.

ಈಗಾಗಲೇ ರಾಜ್ಯ ಮುಖಂಡರ ಗಮನಕ್ಕೆ ಈ ವಿಷಯವನ್ನು ತಂದಿದ್ದೇನೆ ಅವರು ಭರವಸೆ ನೀಡಿದ್ದಾರೆ. ಅರ್ಜಿ ಸಲ್ಲಿಸಿದವರಿಗೇ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸ ನಮ್ಮದು. ಯಾರಿಗೇ ಟಿಕೆಟ್ ಸಿಕ್ಕರೂ ಕಾಂಗ್ರೆಸ್ ಗೆಲ್ಲಿಸಲು ಶ್ರಮಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮುಜಾಮಿಲ್ ಪಾಶಾ, ಚಂದ್ರಶೇಖರ್, ವಿನಯ್, ಮಧು, ರೆಹಮಾನ್, ರಾಜಶೇಖರ್, ಎನ್.ಡಿ. ಪ್ರವೀಣ್‌ಕುಮಾರ್, ತಿಮ್ಮರಾಜ ಸೇರಿದಂತೆ ಮುಂತಾದವರಿದ್ದರು.
ಯುವಧ್ವನಿ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ: ಹೆಚ್.ಪಿ. ಗಿರೀಶ್ ವಿಶ್ವಾಸ
ಶಿವಮೊಗ್ಗ: ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಯುವಶಕ್ತಿ ಶ್ರಮಿಸುತ್ತದೆ. ಯುವಧ್ವನಿ ಮೂಲಕ ಅಧಿಕಾರಕ್ಕೆ ಬರುತ್ತದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಗಿರೀಶ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯಲಿದೆ. ಪಕ್ಷದ ಪ್ರಣಾಳಿಕೆ ಕೂಡ ಯುವಕರಿಗೆ ಅದರಲ್ಲೂ ವಿದ್ಯಾವಂತ ಯುವಕರಿಗೆ ಹಲವು ಯೋಜನೆಗಳನ್ನು ಪ್ರಕಟಿಸಿದೆ. ಮುಖ್ಯವಾಗಿ ಪದವೀಧರರಿಗೆ ತಿಂಗಳಿಗೆ ಮೂರು ಸಾವಿರ ಹಾಗೂ ಡಿಪ್ಲಮೋ ಪಡೆದವರಿಗೆ ತಿಂಗಳಿಗೆ ಒಂದೂವರೆ ಸಾವಿರ ಉತ್ತೇಜನ ಮಾಶಾಸನ ನೀಡುತ್ತದೆ ಇದು ಯುವಕರಲ್ಲಿ ಹೊಸ ಭರವಸೆ ಹುಟ್ಟಿಸಿದೆ ಎಂದರು.

ಬಿಜೆಪಿ ಸರ್ಕಾರದಲ್ಲಿ ಉದ್ಯೋಗಗಳ ಅವಕಾಶಗಳು ಒಂದು ಕಡೆ ಇರಲಿ. ಇರುವ ಉದ್ಯೋಗಗಳನ್ನೇ ಕಸಿದುಕೊಳ್ಳಲಾಗಿದೆ. ಯುವಕರು ಭ್ರಮಾಶೀಲರಾಗಿದ್ದಾರೆ. ಆತಂಕದಲ್ಲಿದ್ದಾರೆ. ಯುವಶಕ್ತಿ ದೇಶದ ಶಕ್ತಿಯಾಗಿದೆ. ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಯುವಕರನ್ನೇ ಪ್ರಮುಖವಾಗಿ ಇಟ್ಟುಕೊಂಡಿದೆ. ಅನೇಕ ಕಡೆಗಳಲ್ಲಿ ಯುವಕರಿಗೆ ಟಿಕೆಟ್ ನೀಡಿದೆ ಎಂದರು.

ಒಬ್ಬ ಸಾಮಾನ್ಯಕಾರ್ಯರ್ತನಿಗೂ ಕಾಂಗ್ರೆಸ್‌ನಲ್ಲಿ ಸ್ಥಾನಮಾನ ನೀಡಲಾಗಿದೆ. ಇದಕ್ಕೆ ಉದಾಹರಣೆ ಎಂದರೆ ನಾವುಗಳೇ. ಹಾಗಾಗಿ ಈ ಬಾರಿಯ ಚುನಾವಣೆಯನ್ನು ಯುವಶಕ್ತಿ ಸವಾಲಾಗಿ ತೆಗೆದುಕೊಂಡಿದೆ. ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೂಲಕ ಯುವಕರಲ್ಲಿ ಹೊಸ ಭರವಸೆಯನ್ನು ನಾವು ಮೂಡಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ಪ್ರಮುಖರಾದ ಎಸ್. ಕುಮರೇಶ್, ಆರ್ ಕಿರಣ್, ಟಿ.ವಿ. ರಂಜಿತ್, ಎನ್. ರಾಹುಲ್, ಇಮ್ರಾನ್ ಖಾನ್, ನದೀಮ್, ಆದಿಲ್ ಭಾಷಾ, ಸುಹಾಸ್ ಗೌಡ, ಸದ್ದಾಂ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

CVIGIL Citizen App ಬಳಸಿ ಚುನಾವಣಾ ಆಕ್ರಮ ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ

Next Post

ಡಾ. ಗಂಜಿಹಾಳ, ಡಾ. ಹಂಡಿಗಿ ಅವರಿಗೆ ಸಾರ್ವಭೌಮ ಪ್ರಶಸ್ತಿ

kalpa News

kalpa News

Next Post
ಡಾ. ಗಂಜಿಹಾಳ, ಡಾ. ಹಂಡಿಗಿ ಅವರಿಗೆ ಸಾರ್ವಭೌಮ ಪ್ರಶಸ್ತಿ

ಡಾ. ಗಂಜಿಹಾಳ, ಡಾ. ಹಂಡಿಗಿ ಅವರಿಗೆ ಸಾರ್ವಭೌಮ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL