ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ, ಜು. 21 ರ ಮಂಗಳವಾರ, ನಾಳೆ ಬೆಳಿಗ್ಗೆ 10 ಗಂಟೆಗೆ ಪತ್ರಕರ್ತರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಗುರುತಿನ ಚೀಟಿ, ಕೊರೋನಾ ಸಂದರ್ಭದಲ್ಲಿ ಅನುಕೂಲವಾಗುವ ರೋಗ ನಿರೋಧಕ ಶಕ್ತಿ ವೃದ್ಧಿಗಾಗಿ, ಆಯುರ್ವೇದ ಔಷಧಗಳ ಆಯುಷ್ ಕಿಟ್ ಹಾಗೂ ಮಾಸ್ಕ್‌ಗಳ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸಂಸದ ಬಿ. ವೈ. ರಾಘವೇಂದ್ರ ರವರು ಉದ್ಘಾಟಿಸಲಿದ್ದು, ಕಿಟ್‌ಗಳನ್ನು ವಿತರಿಸಲಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಕೆ. ಎಂ. ಶಾಂತರಾಜ್, ಮಹಾನಗರ ಪಾಲಿಕೆಯ ಮೇಯರ್ ಸುವರ್ಣ ಶಂಕರ್ ಉಪ ಮೇಯರ್ ಸುರೇಖಾ ಮುರಳೀಧರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ, ಹಿರಿಯ ವಾತಾ೯ಧಿಕಾರಿ ಶಫಿ ಸಾದುದ್ದೀನ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ಪತ್ರಕರ್ತರನ್ನು ಗೌರವಿಸಲಾಗುತ್ತಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ವಿ. ಶಿವಕುಮಾರ್ ವಹಿಸಲಿದ್ದಾರೆ.
ಕೊರೋನಾದ ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನ ಕಾಯ೯ದಶಿ೯ ವೈದ್ಯ, ನಗರ ಕಾಯ೯ದಶಿ೯ ವಿ. ಟಿ. ಅರುಣ್ ಕೋರಿದ್ದಾರೆ.
Get In Touch With Us info@kalpa.news Whatsapp: 9481252093







Discussion about this post