ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಮುಂದುವರೆದಿರವಂತೆಯೇ ಶಿವಮೊಗ್ಗದಲ್ಲೂ ಸಹ ಜೂನ್ 14ರವರೆಗೂ ಕಠಿಣ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಸೋಂಕು ಕಡಿಮೆಯಾಗುತ್ತಿದ್ದರೂ ಇನ್ನಷ್ಟು ತಗ್ಗಿಸುವ ದೃಷ್ಠಿಯಿಂದ ಕಠಿಣ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ದಿನಸಿ ಚಿಲ್ಲರೆ ಅಂಗಡಿಗಳು ಬೆಳಿಗ್ಗೆ 6 ರಿಂದ 8 ರ ವರೆಗೆ ತೆರೆಯಲಿದ್ದು ಹೋಲ್ ಸೇಲ್ ದಿನಸಿ ಅಂಗಡಿಗಳಿಗೆ ಬುಧವಾರ ಮತ್ತು ಶನಿವಾರ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗಿದೆ ಎಂದಿದ್ದಾರೆ.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜೂ.7 ರಿಂದ ಪ್ರತಿದಿನವೂ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಲಾಗುವುದು ಹಾಗೂ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗುವುದು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post