ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಾರಾಂತ್ಯದ ಲಾಕ್‌ಡೌನ್ ಮುಗಿಯುತ್ತಿದ್ದಂತೆ ನಗರದ ಬಹುತೇಕ ಪ್ರಮುಖ ರಸ್ತೆಗಳಲ್ಲಿ ಬಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ನಿಯಂತ್ರಣಕ್ಕಾಗಿ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ಅವರೇ ಖುದ್ದು ಫೀಲ್ಡಿಗಿಳಿಯಬೇಕಾಯಿತು.
ಇಂದು ಮುಂಜಾನೆಯಿಂದಲೇ ಬಿ.ಹೆಚ್. ರಸ್ತೆ, ಗಾಂಧಿ ಬಜಾರ್, ದುರ್ಗಿಗುಡಿ, ಕುವೆಂಪು ರಸ್ತೆ, ನೆಹರೂ ರಸ್ತೆ, ಸವಳಂಗ ರಸ್ತೆ ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಇದು ಎಷ್ಟರಮಟ್ಟಿಗೆ ಎಂದರೆ ಕೆಲವೊಂದು ವೃತ್ತಗಳನ್ನು ಹಾದುಹೋಗಲು ಸುಮಾರು 15ರಿಂದ 20 ನಿಮಿಷಗಳ ಬೇಕಾಗಿತ್ತು.
ಮುಂಜಾನೆಯಿಂದ ಸಂಜೆ 5ಗಂಟೆಯವರೆಗೂ ಎಲ್ಲಾ ರೀತಿಯ ವ್ಯಾಪಾರ-ವಹಿವಾಟುಗಳಿಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜನರ ಓಡಾಟ ಹಾಗೂ ವಾಹನ ಸಂಚಾರ ಮಾಮೂಲಿಗಿಂತಲೂ ಅಧಿಕವಾಗಿಯೇ ಕಂಡುಬಂದಿತು.
ಒಂದು ಹಂತದಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾದ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಜಿಲ್ಲಾರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ಅವರೇ ಸ್ವತಃ ಕಾರ್ಯಾಚರಣೆಗಿಳಿದರು. ಮಧ್ಯಾಹ್ನದ ವೇಳೆಗೆ ವಾಹನ ದಟ್ಟಣೆ ಕೊಂಚಮಟ್ಟಿಗೆ ಕಡಿಮೆಯಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post