ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಅಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.
ಈ ಕುರಿತಂತೆ ಆರ್’ಟಿಒ ಮುರಗೇಂದ್ರ ಬಿ. ಶಿರೋಲ್ಕರ್ ಮಾಹಿತಿ ನೀಡಿದ್ದು, 1990-91 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ ಶೇ.50 ರಷ್ಟು ದಂಡ ಪಾವತಿ ರಿಯಾಯ್ತಿ ವ್ಯಾಪ್ತಿಗೆ ಒಳಪಡುತ್ತವೆ.
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ಅವಧಿಯಲ್ಲಿ 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದ್ದು ಸಂಬಂಧಪಟ್ಟ ವಾಹನ ಮಾಲೀಕರು ಡಿ.12 ರೊಳಗೆ ರಿಯಾಯ್ತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿ ಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















