ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮೀ ಪ್ರಸಾದ್ ಅವರನ್ನು ರಾಜ್ಯಸರ್ಕಾರ ವರ್ಗಾವಣೆ ಮಾಡಿದ್ದು, ಇವರ ಜಾಗಕ್ಕೆ ಐಪಿಎಸ್ ಅಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರನ್ನು ನೇಮಿಸಲಾಗಿದೆ.
ರಾಜ್ಯಸರ್ಕಾರ ಇಂದು ಸಂಜೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಬೆಂಗಳೂರು ಸಿಐಡಿ ಎಸ್‌ಪಿ ಆಗಿದ್ದ ಮಿಥುನ್ ಕುಮಾರ್ ಅವರನ್ನು ಶಿವಮೊಗ್ಗ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಶಿವಮೊಗ್ಗದಿಂದ ವರ್ಗಾವಣೆಗೊಂಡಿರುವ ಲಕ್ಷ್ಮೀ ಪ್ರಸಾದ್ ಅವರಿಗೆ ಸದ್ಯ ಸ್ಥಳ ತೋರಿಸಿಲ್ಲ. 2016ರ ಬ್ಯಾಚ್‌ನಲ್ಲಿ 130ನೇ ರ್‍ಯಾಂಕ್ ಪಡೆದು ಐಪಿಎಸ್ ಅಧಿಕಾರಿಯಾಗಿರುವ ಮಿಥುನ್ ಕುಮಾರ್ ಸಿಐಡಿ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಕಡೆ ಸೇವೆ ಸಲ್ಲಿಸಿದ್ದಾರೆ.
ನೂತನ ಎಸ್‌ಪಿ ನಾಳೆ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ.
Also read: ಎಲ್ಲಿ ಸಂಸ್ಕೃತವೊ ಅಲ್ಲಿ ಸಂಸ್ಕೃತಿ: ಪಟ್ಟಾಭಿರಾಮ್ ಅಭಿಪ್ರಾಯ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















