ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವೇತನ ಪರಿಷ್ಕರಣೆಯ ಬಾಕಿ ಹಣ ಬಿಡುಗಡೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ರಾಜ್ಯದಾದ್ಯಂತ ಕೆ.ಎಸ್.ಆರ್.ಟಿ.ಸಿ #KSRTC ಸೇರಿದಂತೆ ನಾಲ್ಕು ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಿದ್ದು, ಶಿವಮೊಗ್ಗದಲ್ಲಿ ಪ್ರಯಾಣಿಕರಿಗೆ ಬಿಸಿ ತಟ್ಟಿದೆ.
ಮೊದಲೇ ಸಾರ್ವಜನಿಕರಿಗೆ ಬಂದ್ ಮಾಹಿತಿ ಇದ್ದುದರಿಂದ ಬಹುತೇಕ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ವಿರಳವಾಗಿತ್ತು. ಕಾಯಂ ನೌಕರರು ಗೈರು ಹಾಜರಾಗಿದ್ದರೂ ಸಹ ಶೇಕಡ 40ರಷ್ಟು ಬಸ್ ಗಳು ಶಿವಮೊಗ್ಗ ಡಿಪೋದಿಂದ ಓಡಾಡಿದವು. ತರಬೇತಿ ಪಡೆಯುತ್ತಿರುವ ಚಾಲಕರು ಮತ್ತು ನಿರ್ವಾಹಕರು ಹಾಗೂ ಖಾಸಗಿ ಬಸ್ ಚಾಲಕರನ್ನು ಬಳಸಿಕೊಂಡು ನಿಗಮದ ಅಧಿಕಾರಿಗಳು ಬಸ್ ಓಡಿಸುತ್ತಿರುವುದು ಕಂಡು ಬಂದಿತು.

ವಿವಿಧ ಊರುಗಳಿಗೆ ತೆರಳು ಬಂದಿದ್ದವರಿಗೆ ಬಸ್ ಇಲ್ಲದೇ ತೊಂದರೆಯಾಗಿದ್ದು, ಬೇರೆ ವ್ಯವಸ್ಥೆ ಇಲ್ಲದ ಕಾರಣ ಮನೆಗೆ ವಾಪಸ್ ಆಗಿದ್ದಾರೆ. ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್ ಓಡಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post