ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರೀ ಮಳೆಯಿಂದಾಗಿ ಆನಂದಪುರದ ಎನ್‌ಎಚ್-69ರ ಯಡೇಹಳ್ಳಿ ಪೆಟ್ರೋಲ್ ಬಂಕ್ ಬಳಿ ಹೆದ್ದಾರಿ ರಸ್ತೆಗೆ ಅಡ್ಡಲಾಗಿ ದೊಡ್ಡ ಮರ ಬಿದ್ದ ಪರಿಣಾಮ ಸಾಗರದಿಂದ ಶಿವಮೊಗ್ಗಕ್ಕೆ, ಶಿವಮೊಗ್ಗದಿಂದ ಸಾಗರಕ್ಕೆ ಸಂಚರಿಸುವ ವಾಹನಗಳಿಗೆ ಅಡಚಣೆ ಉಂಟಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಆನಂದಪುರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್ ಮನವಿ ಮಾಡಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮರ ತೆರವು ಕಾರ್ಯಾಚರಣೆಯಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ತಿಳಿಸಿದ್ದಾರೆ.
ಇಲ್ಲಿದೆ ಪರ್ಯಾಯ ಮಾರ್ಗ
ಶಿವಮೊಗ್ಗ ಕಡೆಗೆ ತೆರಳುವವರು ರಿಪ್ಪನ್‌ಪೇಟೆ-ಆಯನೂರು ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ. ಹಾಗೆಯೇ ಶಿವಮೊಗ್ಗದಿಂದ ಸಾಗರಕ್ಕೆ ತೆರಳುವವರು ಆಯನೂರು-ರಿಪ್ಪನ್‌ಪೇಟೆ-ಆನಂದಪುರ ಮಾರ್ಗವಾಗಿ ಸಂಚರಿಸುವಂತೆ ತಿಳಿಸಲಾಗಿದೆ.
ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ ಸಹಕರಿಸುವಂತೆ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















