ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೀವನ ಅನೇಕ ಅನುಭವಗಳನ್ನು ನೀಡಲಿದ್ದು, ಹಣದ ಹಿಂದೆ ಹೋಗದೆಯೆ ಬದುಕಿನ ಅನುಭವಗಳಿಗಾಗಿ ಕಲಿಯಲು ಪ್ರಯತ್ನಿಸಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಹೇಳಿದರು.
ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ #NESPharmacyCollege ವತಿಯಿಂದ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ‘ಕಲಾ ಸಂಭ್ರಮ – 2023’ ಉದ್ಘಾಟಿಸಿ ಮಾತನಾಡಿದರು.

ಮಾನವೀಯ ಸಂಬಂಧಗಳನ್ನು ಉಳಿಸಿಕೊಳ್ಳಬೇಕಿದೆ. ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳಿಗೆ, ಸಂಬಂಧಗಳಿಗೆ, ಸಂಪರ್ಕಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕಿದೆ. ಪಠ್ಯ ಜ್ಞಾನವನ್ನು ನೀಡಿದರೆ ಪಠ್ಯೇತರ ಚಟುವಟಿಕೆ ಮೌಲ್ಯವನ್ನು ನೀಡುತ್ತದೆ ಎಂದು ಹೇಳಿದರು.

ಹಾಸ್ಯ ಕಲಾವಿದರಾದ ಮಿಮಿಕ್ರಿ ಗೋಪಿ ಮಾತನಾಡಿ, ಪೋಷಕರು ನಮಗಾಗಿ ಅನೇಕ ಕಷ್ಟಗಳನ್ನು ಅನುಭವಿಸಿರುತ್ತಾರೆ. ಅವರಿಗೆ ಪ್ರೀತಿ ಗೌರವ ಮತ್ತು ಉತ್ತಮ ವ್ಯಕ್ತಿತ್ವದ ಮೂಲಕ ಋಣ ತೀರಿಸಲು ಪ್ರಯತ್ನಿಸಿ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post