ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡಿನ ತೀರ್ಥಹಳ್ಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಹಲವು ಅವಾಂತರ ಸೃಷ್ಠಿಯಾಗಿದೆ.
ಅಬ್ಬರದ ಪುಷ್ಯ ಮಳೆಗೆ ನೀರು ತೋಟಗಳಿಗೆ ನುಗ್ಗಿದ ಘಟನೆ ನಡೆದಿದೆ.
ತೀರ್ಥಹಳ್ಳಿ ಶೃಂಗೇರಿ ಭಾಗಗಳಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಮಟ್ಟ ಮೀರಿಹರಿಯುತ್ತಿದೆ.
ನಿರಂತರ ಮಳೆಯಿಂದಾಗಿ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, 65 ಸಾವಿರ ಕ್ಯೂಸೆಕ್ ನೀರು ಕ್ರಸ್ಟ್ ಗೇಟ್ ಜಲಾಶಯದಿಂದ ಹೊರಕ್ಕೆ ಬಿಡಲಾಗಿದೆ.
ಶಿವಮೊಗ್ಗದ ಸಂಸ್ಕೃತ ನಗರ ಎಂದೇ ಖ್ಯಾತಿಯಾದ ಮತ್ತೂರಿನಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಅಡಿಕೆ ತೋಟಗಳಿಗೂ ನದಿ ನೀರು ನುಗ್ಗಿದ್ದು, ಅವಾಂತರ ಸೃಷ್ಠಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post