ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾರಿನಲ್ಲಿ ಗಾಂಜಾ Marijuana ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಅಶೋಕ ಪಿ. (28) ಮತ್ತು ರಾಕೇಶ್ (20) ಬಂಧಿತ ಆರೋಪಿಗಳು. ರಾಜೀವ್ ಗಾಂಧಿ ಬಡಾವಣೆಯ ಕಂಟ್ರಿ ಕ್ಲಬ್ ರಸ್ತೆಯಲ್ಲಿ ಖಚಿತ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಧಿತರಿಂದ ಸುಮಾರು ಒಂದು ಲಕ್ಷ ರೂ. ಮೌಲ್ಯದ 1,067 ಗ್ರಾಂ ಗಾಂಜಾ ಮತ್ತು ಗಾಂಜಾ ಪ್ಯಾಕ್ ಮಾಡಲು ಇಟ್ಟುಕೊಂಡಿದ್ದ 18 ಸಣ್ಣ ಜಿಪ್ ಲಾಕ್ ಕವವರ್‌ಗಳು, ಎಲೆಕ್ಟ್ರಾನಿಕ್ ತೂಕದ ಯಂತ್ರ ಹಾಗೂ 3,290 ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಆರೋಪಿಗಳ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















