ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೇಡರ ಹೊಸಳ್ಳಿ ಕೆರೆಯ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಅಪಘಾತದಲ್ಲಿ ಓಮ್ನಿ ಚಾಲಕನ ಕಾಲು ಮುರಿದಿದ್ದು, ಜೊತೆಯಲ್ಲಿದ್ದ ಮಹಿಳೆಗೂ ತೀವ್ರತರವಾದ ಗಾಯಗಳಾಗಿವೆ.
ಬೇಡರ ಹೊಸಳ್ಳಿ ಕೆರೆಯ ಏರಿಯ ಮೇಲೆ ಶಿವಮೊಗ್ಗ ಕಡೆಯಿಂದ ಹೊನ್ನಾಳಿ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಹೊನ್ನಾಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಐ20 ಕಾರು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರು ನುಜ್ಜುಗುಜ್ಜಾಗಿದೆ.
ಓಮ್ನಿ ಕಾರಿನ ಚಾಲಕ ಮತ್ತು ಮಹಿಳೆಗೆ ತೀವ್ರವಾದ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















