ಮೈಸೂರು ರಂಗಾಯಣದಿಂದ Mysore Rangayana ನ.18 ಮತ್ತು 19ರಂದು ಎರಡು ಹೊಸ ನಾಟಕಗಳನ್ನು ಶಿವಮೊಗ್ಗದ ಸುವರ್ಣ ಸಾಂಸ್ಕøತಿಕ ಭವನದಲ್ಲಿ ಪ್ರದರ್ಶಿಸಲಾಗುವುದು.
 ‘ಮುಟ್ಟಿಸಿಕೊಂಡವನು’ ನಾಟಕ ಪಿ. ಲಂಕೇಶ್ ಅವರ ಕಥೆ ಆಧಾರಿತವಾಗಿದ್ದು, ರಂಗಾಯಣದ ಹಿರಿಯ ಕಲಾವಿದರಾದ ನಂದಿನಿ, ಕೆ.ಆರ್., ಅವರು ನಿರ್ದೆಶಿಸಿದ್ದಾರೆ. ಈ ನಾಟಕದಲ್ಲಿ ಹಳ್ಳಿಗಾಡಿನ ರೈತಾಪಿ ಜನರಲ್ಲಿ ಸಹಜವಾಗಿಯೇ ಇರುವ ಒಳ್ಳೆಯತನ ಮತ್ತು ಮುಗ್ಧತೆಗಳು ಹೇಗೆ ನಮ್ಮ ಜಾತಿ ವ್ಯವಸ್ಥೆಯ ಕ್ರೂರ ಅನಿಷ್ಟಗಳ ಕೈಯಲ್ಲಿ ಸಿಕ್ಕು ನಲುಗುತ್ತವೆ ಎಂಬುದರ ಮೇಲೆ ಈ ಕತೆ ಬೆಳಕು ಚೆಲ್ಲುತ್ತದೆ.

`ಕಸಾಂದ್ರ ಮತ್ತು ಸತಿ’ ನಾಟಕ ಹೆಚ್.ಎಸ್. ಶಿವಪ್ರಕಾಶ್ ಅವರು ರಚಿಸಿದ್ದು, ಮೊದಲ ಬಾರಿಗೆ ಎರಡು ನಾಟಕಗಳನ್ನು ಸೇರಿಸಿ ಪ್ರದರ್ಶಿಸುತ್ತಿರುವ ಹೊಸ ರಂಗಪ್ರಯೋಗ ಇದಾಗಿದೆ. ಈ ನಾಟಕವನ್ನು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಶ್ರೀ ಬಿ.ಆರ್. ವೆಂಕಟರಮಣ ಐತಾಳ ಅವರು ನಿರ್ದೇಶನ ಮಾಡಿದ್ದಾರೆ.
 ಈ ಎರಡು ನಾಟಕಗಳು ಭಿನ್ನ ಭಿನ್ನ ರಂಗಪಯೋಗಗಳಾಗಿದ್ದು, ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ. ಆದ್ದರಿಂದ ತಾವು ದಯಮಾಡಿ ನಾಟಕಗಳ ಪ್ರದರ್ಶನಕ್ಕೆ ಹೆಚ್ಚಿನ ಪ್ರಚಾರ ನೀಡಿ, ಅಪಾರ ಸಂಖ್ಯೆಯಲ್ಲಿ ರಂಗಾಸಕ್ತರು ಬಂದು ಈ ರಂಗಪ್ರಯೋಗಗಳನ್ನು ವೀಕ್ಷಿಸುವಂತೆ ಮಾಡಿ, ನಾಟಕಗಳ ಪ್ರದರ್ಶನವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ರಂಗಾಯಣ ಉಪ ನಿರ್ದೇಶಕರು ಕೋರಿದ್ದಾರೆ.

Also read: ದೇಶ 21ನೇ ಶತಮಾನದಲ್ಲಿ ಮುಂದುವರೆದ ರಾಷ್ಟ್ರವಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ
 
 Loading ...
 Loading ... 
							
Discussion about this post