ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತಗಳು ಸಂಭವಿಸಿದ್ದು, ಒಟ್ಟು ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ನಡೆದಿದೆ.
ಅಪಘಾತ – 1: ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಮೃತರಾದ ದುರ್ದೈವಿಗಳನ್ನು ಅಸಾದುಲ್ಲಾ ( 50), ಸಾದಿಕ್ ( 30), ಮತ್ತು ಫಿರೋಜ್ ( 22) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗೂಡ್ಸ್ ವಾಹನವು ಜಖಂಗೊಂಡಿದ್ದು, ಚಾಲಕ ಇಮ್ರಾನ್’ಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಬೆನ್ನಲ್ಲೆ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ – 2 :
ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ನಡೆದಿದ್ದು, ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ಯುವಕನನ್ನು ಪುನೀತ್(22) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.
ವೇಗವಾಗಿ ಬಂದ ಲಾರಿ ಬೈಕ್’ಗೆ ಬಲವಾಗಿ ಡಿಕ್ಕಿ ಹೊಡೆದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಯುವಕ ರಾಜೀವ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post