ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಉಡುಪಿ |
ನೈಋತ್ಯ ಪದವೀಧರರ ಚುನಾವಣೆಯ #Southwestern Graduate Constituency ಮೈತ್ರಿ ಅಭ್ಯರ್ಥಿಗಳ ಪರವಾಗಿ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ನಡೆಸಲಾಯಿತು.
ಉಡುಪಿ: ಶಾಸಕ ಸುರೇಶ್ ಶೆಟ್ಟಿ ಪ್ರಚಾರ
ಮೈತ್ರಿಯ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, #Dr. Dhananjaya Sarji ಶಿಕ್ಷಕರ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಭೋಜೇಗೌಡರ ಪರವಾಗಿ ಕಾಪು ಶಾಸಕ ಸುರೇಶ್ ಶೆಟ್ಟಿ ಪ್ರಚಾರ ನಡೆಸಿದರು.

ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಪ್ರಾಂಶುಪಾಲರು ಹಾಗೂ ಕಾಪು ಮಂಡಲ ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇನ್ನು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ಮತಯಾಚನೆ ಮಾಡಿದರು.
Also read: ಗುಡ್ ನ್ಯೂಸ್ | ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ | ಎಷ್ಟು ಕಡಿಮೆಯಾಗಿದೆ?
ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಲ್ಲಾಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನಲೆ ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್ ಶುಕ್ರವಾರ ಭದ್ರಾವತಿಯ ವಿವಿಧ ಶಿಲ್ಲಾಣ ಸಂಸ್ಥೆಗಳು , ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಮೈತ್ರಿ ಕೂಟದ ಅಭ್ಯರ್ಥಿಗಳನ್ನು ಬೆಂಬಲಿಸಿ ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮತಯಾಚಿಸಿದರು.
ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರು , ಕಾರ್ಯಕರ್ತರು ಉಪಸ್ಥಿತರಿದ್ದರು.

ಮೂಡಬಿದರೆ ಶಾಸಕ ಉಮಾನಾಥ್ ಕೋಟ್ಯಾನ್ ಮೈತ್ರಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜು ಹಾಗೂ ಪ್ರಥಮ ದರ್ಜೆ ಕಾಲೇಜು ಮತ್ತು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜು, ಕೆಂಜಾರುವಿನಲ್ಲಿ ಮೂಡಬಿದರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರನ್ನು ಮತಯಾಚಿಸಿದರು.
ಈ ವೇಳೆ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್, ಮುಖಂಡರುಗಳಾದ ಈಶ್ವರ್ ಕಟೀಲು,ಕೇಶವ ಕರ್ಕೇರ,ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರು ಹಾಗೂ ಚುನಾವಣಾ ಸಂಚಾಲಕರಾದ ಅಭಿಲಾಷ್ ಶೆಟ್ಟಿ ಕಟೀಲು, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಶೆಟ್ಟಿಗಾರ್ ಉಪಸ್ಥಿತರಿದ್ದರು.

ಇನ್ನು, ಮೈತ್ರಿ ಅಭ್ಯರ್ಥಿಗಳ ಪರವಾಗಿ ಮಂಗಳೂರು ಉತ್ತರ ಶಾಸಕ ಡಾ ಭರತ್ ಶೆಟ್ಟಿ ಮತಯಾಚನೆ ಮಾಡಿದರು.
ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಶುಕ್ರವಾರ ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ಶಿಕ್ಷಕರ ಹಾಗೂ ಪದವೀಧರ ಕುರಿತು ಮಾತನಾಡಿದರು.
ರಾಜ್ಯದ ಮೇಲ್ಮನೆಯಲ್ಲಿ ಅಸಂಬದ್ಧ ಕಾನೂನು ತರುವುದನ್ನು ತಡೆಯಲು ಬಿಜೆಪಿಗೆ ಬೆಂಬಲದ ಅಗತ್ಯವಿದೆ. ಶಿಕ್ಷಕರ ಪದವೀಧರ ಸಮಸ್ಯೆಗಳನ್ನ ಸಂಪೂರ್ಣ ಬಗೆಹರಿಸಲು ಒಂದೇ ಬಾರಿಗೆ ಸಾಧ್ಯವಿಲ್ಲವಾದರೂ, ಹಂತ ಹಂತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ನಡೆಸಲಾಗುವುದು ಎಂದು ಭರವಸೆಯನ್ನು ನೀಡಿ ನಮ್ಮ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮತಯಾಚಿಸಿದರು.
ಈ ಸಂದರ್ಭ ಬಿಜೆಪಿ ಮುಖಂಡರು, ಮಹಾನಗರ ಪಾಲಿಕೆಯ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post