ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾರ್ಚ್ 24 ರಂದು ನಗರದ ರಾಗಿಗುಡ್ಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ Union Minister Amith Shah ಅವರು ವರ್ಚುಯಲ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆಗಾಗಿ ಮಾನವ ಸಂಪನ್ಮೂಲ ಕೊಡಲು ಶಿವಮೊಗ್ಗದಲ್ಲಿ ದೇಶದಲ್ಲೇ ಎರಡನೇ ರಾಷ್ಟ್ರೀಯ ರಕ್ಷಾ ಮಹಾ ವಿದ್ಯಾಲಯ ಆಗುತ್ತಿರುವುದು ಹೆಮ್ಮೆಯ ವಿಷಯ. ಇದರಲ್ಲಿ ಅನೇಕ ವಿಭಾಗಗಳಿದ್ದು, ಡಿಪ್ಲೊಮಾ, ಪಿಜಿ ಹಾಗೂ ಒಂದು ವಾರದ ಕೋರ್ಸ್ ಸೇರಿದಂತೆ ರಕ್ಷಣಾಲಯಕ್ಕೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಅನೇಕ ಕೋರ್ಸ್ ಗಳನ್ನು ಪ್ರಾರಂಭಿಸುತ್ತಿದ್ದು, ಜೂನ್ ಅಥವಾ ಜುಲೈನಿಂದಲೇ ಮೊದಲ ಬ್ಯಾಚ್ ಪ್ರಾರಂಭವಾಗಲಿದೆ. 2000 ದಿಂದ 55 ಸಾವಿರದ ವರೆಗೆ ಶುಲ್ಕ ಕೂಡ ಈ ತರಬೇತಿಗೆ ಇದ್ದು, ನವುಲೆಯ ರಾಗಿಗುಡ್ಡದ 8 ಎಕರೆ ಜಾಗದಲ್ಲಿ ಅತ್ಯಾಧುನಿಕ ಸುಸಜ್ಜಿತ ಕ್ಯಾಂಪಸ್ ನಿರ್ಮಾಣವಾಗಲಿದೆ ಎಂದರು.

Also read: ಗೃಹಮಂತ್ರಿ ಅಮಿತ್ ಶಾ ಕರ್ನಾಟಕ ಪ್ರವಾಸ ರಾಜ್ಯದಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿಗೆ ಮುನ್ನುಡಿ ಬರೆಯಲಿವೆಯಾ?
ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, 6 ಕೋಟಿ ರೂ. ವೆಚ್ಚದ 3 ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ. ಪ್ರತಿ ಟಿಕೆಟ್ ಗೆ ರಾಜ್ಯ ಸರ್ಕಾರ 500 ರೂ. ಅನುದಾನವನ್ನು ಇಂಡಿಗೋ ಏರ್ ಲೈನ್ಸ್ ಗೆ ನೀಡುತ್ತಿದ್ದು, ಬೆಂಗಳೂರು-ಶಿವಮೊಗ್ಗ ಹಾರಾಟಕ್ಕೆ ಇಂಡಿಗೋ ವಿಮಾನಯಾನ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು.
ಮಾ. 25 ರಂದು ರಾಜ್ಯಕ್ಕೆ ಆಗಮಿಸುವ ಪ್ರಧಾನಿ ಮೋದಿ ದಾವಣಗೆರೆ ಕಾರ್ಯಕ್ರಮ ಮುಗಿಸಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇದು ವಿಮಾನ ನಿಲ್ದಾಣದ ಪ್ರಾಮುಖ್ಯತೆ ಸೂಚಿಸುತ್ತದೆ ಎಂದರು.











Discussion about this post