ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿಗೆ ಆದ್ಯತೆ ನೀಡಿದ್ದು, ಫೆ.22ರಂದು ಕೇಂದ್ರದ ಭೂ ಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ರವರು Union Minister Nitin Gadkari ಶಿವಮೊಗ್ಗಕ್ಕೆ ಆಗಮಿಸಲಿದ್ದು, ಸುಮಾರು 6168.41ಕೋಟಿ ರೂ. ವೆಚ್ಚದ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆಯನ್ನು ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೆಹರೂ ಕ್ರೀಡಾಂಗಣದಲ್ಲಿ ಮಧ್ಯಾಹ್ನ ಸುಮಾರು 2ಕ್ಕೆ ನಡೆಯುವ ಈ ಕಾರ್ಯಕ್ರಮದಲ್ಲಿ ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದಂತೆ 296.92 ಕಿ.ಮೀ. ಉದ್ದದ 18 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆ ನಡೆಯಲಿದೆ ಎಂದರು.
ಶಿವಮೊಗ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 139.41ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡ 4 ಕಾಮಗಾರಿಗಳನ್ನು ಲೋಕಾರ್ಪಣೆ ಮಾಡುವುದರ ಜೊತೆಗೆ ಈ ಗಾಗಲೇ ಟೆಂಡರ್ ಮುಗಿಸಿ, ಕಾಮಗಾರಿ ಪ್ರಾರಂಭಿಸುವ ಹಂತದಲ್ಲಿರುವ 2138.30 ಕೋಟಿ ರೂ. ವೆಚ್ಚದ 6 ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
Also read: ತಂತ್ರಜ್ಞಾನಗಳ ಸದ್ಭಳಕೆ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ: ಡಾ. ನಾಗರಾಜ್ ಅಭಿಪ್ರಾಯ
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ದೀನದಯಾಳ್, ಶಿವರಾಜ್, ವಿನ್ಸಟ್ ರೂಡ್ರಿಗಸ್, ಮೋಹನ್ ರೆಡ್ಡಿ, ಮಂಜುನಾಥ್ ನವುಲೆ, ಕೆ.ವಿ.ಅಣ್ಣಪ್ಪ, ಚಂದ್ರಶೇಖರ್ ಮೊದಲಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post