ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿಶ್ವವಿದ್ಯಾಲಯ, #Kuvempu University ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ 2019-20 ಮತ್ತು 2020-21 ನೇ ಸಾಲಿನ ವಿಶ್ವವಿದ್ಯಾಲಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಫೆ.25ರ ಬೆಳಿಗ್ಗೆ 10.30 ಕ್ಕೆ ಶಂಕರಘಟ್ಟದ ಕುವೆಂಪು ವಿವಿ ಯ ಪ್ರೊ.ಎಸ್.ಪಿ.ಹಿರೇಮಠ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
Also read: ಉತ್ತರಾಧಿ ಮಠದಿಂದ ಹರ್ಷ ಕುಟುಂಬಕ್ಕೆ ಆರ್ಥಿಕ ನೆರವು: ಸಾಂತ್ವಾನ
ಕುವೆಂಪು ವಿವಿ ಕುಲಪತಿಗಳಾದ ಪ್ರೊ.ಬಿ.ಪಿ ವೀರಭದ್ರಪ್ಪ ಅಧ್ಯಕ್ಷತೆ ವಹಿಸುವರು. ಕುಲಸಚಿವರಾದ ಅನುರಾಧ.ಜಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕುವೆಂಪು ವಿವಿ ಕುಲಸಚಿವರಾದ(ಮೌಲ್ಯಮಾಪನ) ಪ್ರೊ.ಸಿ.ಎಂ.ತ್ಯಾಗರಾಜ್, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಡಿ.ರೇವಣ್ಕರ್, ಕುವೆಂಪು ವಿವಿ ಹಣಕಾಸು ಅಧಿಕಾರಿ ಎಸ್.ರಾಮಕೃಷ್ಣ ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ಭಾರತ ಸರ್ಕಾರದ ರಾ.ಸೇ.ಯೋ ಪ್ರಾದೇಶಿಕ ನಿರ್ದೇಶನಾಲಯದ ನಿರ್ದೇಶಕ ಖಾದ್ರಿ ನರಸಿಂಹಯ್ಯ, ರಾ.ಸೇ.ಯೋ.ಕೋಶದ ರಾಜ್ಯ ಎನ್‍ಎಸ್‍ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post