No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

`ಬಿಎಸ್‍ವೈ ಅಭಿಮಾನೋತ್ಸವ’ಕ್ಕೆ ಅಭೂತಪೂರ್ವ ಬೆಂಬಲ: ಸಂಸದ ರಾಘವೇಂದ್ರ ಅಭಿನಂದನೆ

kalpa News by kalpa News
May 12, 2026
in ಶಿವಮೊಗ್ಗ
1
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಯಶಸ್ವಿಯಾಗಿ ಸಂಪನ್ನಗೊಂಡ ಅಭೂತಪೂರ್ವ, ಐತಿಹಾಸಿಕ `ಬಿಎಸ್‍ವೈ ಅಭಿಮಾನೋತ್ಸವ’ಕ್ಕೆ BSY Abhimanothsava ಬೆಂಬಲ ನೀಡಿದ ಎಲ್ಲಾ ಪರಮಪೂಜ್ಯ ಸ್ವಾಮೀಜಿಗಳಿಗೆ, ಹರ ಗುರು ಚರ ಮೂರ್ತಿಗಳಿಗೆ, ಎಲ್ಲಾ ಗಣ್ಯರಿಗೆ, ನಾಡಿನ ಅಭಿಮಾನಿ ಜನತೆಗೆ, ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಂಸದ ಬಿ.ವೈ.ರಾಘವೇಂದ್ರ MP Raghavendra ತಿಳಿಸಿದ್ದಾರೆ.

ಕೋಟಿ ಕೋಟಿ ಅಭಿಮಾನಿಗಳ ಹಾರೈಕೆಗಳೊಂದಿಗೆ, ನಾಡಿನ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಿತ್ರದುರ್ಗದಲ್ಲಿ ಜರುಗಿದ ಐತಿಹಾಸಿಕ `ಬಿಎಸ್ ವೈ ಅಭಿಮಾನೋತ್ಸವ’, ಅಭೂತಪೂರ್ವ, ಯಶಸ್ವಿ ಕಾರ್ಯಕ್ರಮವಾಗಿ ಮಾತ್ರವಲ್ಲದೆ, ಅದೊಂದು ನಾಡಿನ ಅಭಿಮಾನದ `ಸಾಂಸ್ಕೃತಿಕ ಜನೋತ್ಸವ’ವಾಗಿ ಚರಿತ್ರೆಯ ಪುಟ ಸೇರಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಅಭಿಮಾನೋತ್ಸವದ ಯಶಸ್ವಿ ಆಯೋಜನೆ ಕುರಿತಂತೆ ಅತ್ಯಂತ ವಿನಮ್ರವಾಗಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಸಂಸದ ರಾಘವೇಂದ್ರ, ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಕೃತಜ್ಞತಾಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ.
ಜನಸಾಗರದ ಪ್ರೀತಿಗೆ ಸಾಷ್ಟಾಂಗ ನಮನ : ಬಿ.ಎಸ್.ಯಡಿಯೂರಪ್ಪನವರ ಮೇಲಿರುವ ಅಚಲವಾದ ಪ್ರೀತಿ, ಅಭಿಮಾನ ಮತ್ತು ವಿಶ್ವಾಸದಿಂದ, ದೂರವನ್ನಾಗಲಿ, ಸುಡುವ ಬಿಸಿಲನ್ನಾಗಲಿ ಲೆಕ್ಕಿಸದೆ ನಾಡಿನ ಮೂಲೆ ಮೂಲೆಗಳಿಂದ ಚಿತ್ರದುರ್ಗಕ್ಕೆ ಬಂದ ಅಭಿಮಾನಿಗಳು, ಕಾರ್ಯಕರ್ತರು, ಸ್ವಯಂಸೇವಕರು, ತಾಯಂದಿರು, ಸೋದರಿಯರು, ಶ್ರೀಸಾಮಾನ್ಯರ ಜನಸಾಗರದ ಸಂಪೂರ್ಣ ಸಹಕಾರದಿಂದ ತಮ್ಮ ನಾಯಕನ ಅಭಿಮಾನೋತ್ಸವ, ನಾಡಿನ ಜನೋತ್ಸವವಾಗಿ ಮಾರ್ಪಟ್ಟಿತು. ಪೂಜ್ಯ ತಂದೆಯವರ ಮೇಲೆ ಜನರ ಅತಿಶಯವಾದ ಪ್ರೀತಿ, ವಿಶ್ವಾಸಗಳಿಗೆ ಪ್ರತಿಯಾಗಿ ನಾವು ಏನು ಹೇಳುವುದು ಸಾಧ್ಯ, ಆಗಮಿಸಿದ ಪ್ರತಿಯೊಬ್ಬ ಅಭಿಮಾನಿಗಳಿಗೂ, ಅತ್ಯಂತ ವಿನೀತ ಭಾವದಿಂದ ಹೃದಯತುಂಬಿ ಸಾಷ್ಟಾಂಗ ನಮನಗಳನ್ನು ಸಲ್ಲಿಸುತ್ತೇನೆ ಎಂದು ಅಭಿಮಾನೋತ್ಸವ ಸಮಿತಿಯ ಸಂಚಾಲಕರೂ ಆಗಿರುವ ಸಂಸದ ರಾಘವೇಂದ್ರ ಅವರು ಭಾವಪರವಶರಾಗಿ ನುಡಿದಿದ್ದಾರೆ.

ಮಠಾಧೀಶರ ಆಶೀರ್ವಾದ-ಅಭಿಮಾನ ಮಂಟಪದ ಸ್ಮರಣೆ : ನಾಡಿನ ಎಲ್ಲ ಅಗ್ರಮಾನ್ಯ ಸ್ವಾಮೀಜಿಗಳೂ ಸೇರಿದಂತೆ ಸಮಾವೇಶದಲ್ಲಿ ಭಾಗವಹಿಸಿದ್ದ ಎಲ್ಲಾ ಮಠಾಧೀಶರು, ಹರ ಗುರು ಚರ ಮೂರ್ತಿಗಳು, ಧರ್ಮಗುರುಗಳಿಗೆ ಶಿರಸಾಷ್ಟಾಂಗ ನಮನಗಳ ಪೂರ್ವಕ ಸಂಸದ ರಾಘವೇಂದ್ರ, ಆಗಮಿಸಿ ಆಶೀರ್ವದಿಸಿದ ಎಲ್ಲಾ ಗುರುಗಳಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಎಲ್ಲ ಪರಮಪೂಜ್ಯರ ದಿವ್ಯ ಉಪಸ್ಥಿತಿ ಮತ್ತು ಆಶೀರ್ವಚನಗಳು `ಅನುಭವ ಮಂಟಪ’ದ ಪರಿಕಲ್ಪನೆಯನ್ನು ಸ್ಮರಿಸುವಂತೆ ಅಭಿಮಾನೋತ್ಸವ, ‘ಅಭಿಮಾನ ಮಂಟಪ’ವಾಗಿತ್ತು ಎಂದು ಭಕ್ತಿಪೂರ್ವಕವಾಗಿ ಸ್ಮರಿಸಿದ್ದಾರೆ.
ರಾಷ್ಟ್ರೀಯ ನಾಯಕತ್ವಕ್ಕೆ ಕೃತಜ್ಞತೆ: ಸಂದೇಶ ಕಳುಹಿಸಿ ಹಾರೈಸಿದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ, ತಮ್ಮ ಬಿಡುವಿಲ್ಲದ ಕಾರ್ಯಗಳ ಒತ್ತಡದ ನಡುವೆಯೂ, ಕಾರ್ಯಕ್ರಮವನ್ನು ಉದ್ಘಾಟಿಸಿ ಉತ್ಸವದ ಗರಿಮೆ ಹೆಚ್ಚಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ ಅವರಿಗೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ರಾಧಾ ಮೋಹನ್ ಅಗರ್ವಾಲ್, ಸುಧಾಕರ್ ರೆಡ್ಡಿ ಸೇರಿದಂತೆ ಆಗಮಿಸಿದ ಎಲ್ಲ ಕೇಂದ್ರ ಸಚಿವರುಗಳಿಗೆ, ರಾಷ್ಟ್ರೀಯ  ನಾಯಕರುಗಳಿಗೆ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರುಗಳಾದ ಆರ್.ಅಶೋಕ್, ಶ್ರೀ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ರಾಜ್ಯದ ಎಲ್ಲಾ ನಾಯಕರಿಗೆ, ಮುಖಂಡರಿಗೆ, ಪದಾಧಿಕಾರಿಗಳಿಗೆ, ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ರಾಘವೇಂದ್ರ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಅಭಿಮಾನೋತ್ಸವ ಸಮಿತಿ, ಬಿ.ಎಸ್.ವೈ ಅಭಿಮಾನಿಗಳು ಹಾಗೂ ಹಾರ್ಯಕರ್ತರಿಗೆ ಯಶಸ್ಸಿನ ಶ್ರೇಯಸ್ಸು ಸಲ್ಲುತ್ತದೆ: ಹಾಗೆಯೇ, ಅಭಿಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಗೋವಿಂದ ಕಾರಜೋಳ ಹಾಗೂ ಸಮಿತಿಯ ಪ್ರಮುಖರಾದ ಶ್ರೀ ಪ್ರಭಾಕರ್ ಕೋರೆ, ಶ್ರೀ ಶ್ರೀರಾಮುಲು, ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ಸಮಿತಿಯ ಮಾರ್ಗದರ್ಶನವನ್ನು, ಪರಿಶ್ರಮವನ್ನು ಸಂಸದರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಪಕ್ಷದ ಪದಾಧಿಕಾರಿಗಳು, ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು, ಸ್ವಯಂಸೇವಕರು, ಅಭಿಮಾನಿಗಳು ಹಾಗೂ ಚಿತ್ರದುರ್ಗದ ಸ್ಥಳೀಯ ಪುರ ಪ್ರಮುಖರ ಸಹಕಾರ ಸಮಾವೇಶದ ಯಶಸ್ಸಿನ ಹಿಂದಿನ ಶಕ್ತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕೆಗಳಲ್ಲಿ  ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ಲೇಖನಗಳನ್ನು, ಅನಿಸಿಕೆಗಳನ್ನು ಬರೆದು, ಜಾಹೀರಾತು ನೀಡಿ, ವಿಡಿಯೋಗಳ ಮೂಲಕ ಅನಿಸಿಕೆಗಳನ್ನು ಹಂಚಿಕೊಂಡು, ಹಿಂದಿನ ದಿನದ ಪುರಪ್ರವೇಶ ಹಾಗೂ ನಂತರದ ಅಭಿಮಾನೋತ್ಸವದ ಯಶಸ್ಸಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಸಂಸದ ರಾಘವೇಂದ್ರ ನಮಸ್ಕಾರಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಮಾಧ್ಯಮಗಳ ಸಹಕಾರಕ್ಕೆ ಧನ್ಯವಾದ: ಈ ಐತಿಹಾಸಿಕ ಕ್ಷಣವನ್ನು ಕೋಟ್ಯಂತರ ಜನರಿಗೆ ತಲುಪಿಸಿದ ಮಾಧ್ಯಮ ಮಿತ್ರರ ಸಹಕಾರ ಕೂಡ ಅತ್ಯಂತ  ಸ್ಮರಣೀಯ. ಇದೊಂದು ರಾಜಕೀಯ ಸಮಾವೇಶವಾಗಿ ಉಳಿಯದೆ, ನಾಡಿನ ಜನರ ಸಾಂಸ್ಕೃತಿಕ ಹಬ್ಬವಾಗಿ, ಜನೋತ್ಸವಾಗಿ ಮಾರ್ಪಟ್ಟಿದ್ದು ನಿಜಕ್ಕೂ ಹೆಮ್ಮೆ ಹಾಗೂ ಸಂತೃಪ್ತಿಯನ್ನು ನೀಡಿದೆ ಎಂದಿರುವ ಸಂಸದ ರಾಘವೇಂದ್ರ, ಅಭಿಮಾನೋತ್ಸವದ ಆಯೋಜನೆಯ ಹಿಂದೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ಅವರು ಅತ್ಯಂತ ಆತ್ಮೀಯವಾಗಿ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

 

Tags: BSY AbhimanothsavaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP RaghavendraNews in KannadaNews KannadaShimogaShivamoggaNewsಬಿಎಸ್‍ವೈ ಅಭಿಮಾನೋತ್ಸವಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

Next Post

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

kalpa News

kalpa News

Next Post
ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

Comments 1

  1. Pingback: ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL