ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಜಾಬ್ ವಿವಾದ ಶಾಲಾ-ಕಾಲೇಜುಗಳು ಮಾತ್ರವಲ್ಲದೆ ಸಾರ್ವಜನಿಕ ಸಮಾಜದ ಸ್ವಾಸ್ಥ್ಯ ಕದಡತ್ತಿದೆ. ಇದನ್ನು ಕೂಡಲೇ ಗಂಭೀರವಾಗಿ ಪರಿಗಣಿಸಿ ಈ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾಗಿರುವ ಕಾಣದ ಕೈಗಳನ್ನು ಪತ್ತೆಹಚ್ಚಿ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ನೇತೃತ್ವದಲ್ಲಿ ಜಿಲ್ಲ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕೆಲವು ದಿನಗಳಿಂದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ವಿವಾದ ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ನಡೆಯುತ್ತಿದ್ದು, ಈಗಾಗಲೇ ರಾಜ್ಯ ಸರ್ಕಾರವು ಆಯಾ ಶಾಲಾ-ಕಾಲೇಜಿನ ಆಡಳಿತ ಮಂಡಳಿಯು ಸೂಚಿಸಿರುವ ಸಮವಸ್ತ್ರಗಳನ್ನು ಧರಿಸಿ ಬರಲು ಸುತ್ತೋಲೆ ಆದೇಶವನ್ನು ಹೊರಡಿಸಿ ಎಲ್ಲಾ ಶಿಕ್ಷಣ ಇಲಾಖೆಗೆ ತಲುಪಿಸಿದೆ. ಈ ಸುತ್ತೋಲೆಯಲ್ಲಿನ ಪ್ರಕಾರ ಶಾಲಾ-ಕಾಲೇಜು ಆಡಳಿತ ಮಂಡಳಿಯು ಸೂಕ್ತ ಕ್ರಮವಹಿಸಿ ನಿರ್ವಹಿಸುತ್ತಿದೆ. ಆದರೂ ಈ ವಿವಾದ ನಿಯಂತ್ರಣಕ್ಕೆ ಬರುತ್ತಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಲು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲದ ಕೆಲವು ಹೊರಗಿನ ಅನ್ಯಕೋಮಿನ ಯುವಕರು ತರಗತಿಗಳು ಆರಂಭವಾಗುವುದಕ್ಕಿಂತ ಮುಂಚೆಯೇ ವಿದ್ಯಾರ್ಥಿಗಳಂತೆಯೇ ಶಾಲಾ ಕೊಠಡಿಗಳಗೆ ನುಗ್ಗಿ ದಾಂಧಲೆ ನಡೆಸಿ, ಕಲ್ಲು ತೂರಾಟ ಮಾಡುತ್ತಿದ್ದಾರೆ. ಹಾಗೂ ಪಾಕಿಸ್ಥಾನ ಧ್ವಜ ಹಿಡಿದು ಘೋಷಣೆ ಕೂಗಿ, ಶಾಲಾ ಕಾಲೇಜಿನ ಆಸ್ತಿ-ಪಾಸ್ತಿಗಳಿಗೆ ಹಾನಿಯನ್ನುಂಟು ಮಾಡುತ್ತಿರುವುದು ಕಂಡುಬಂದಿದೆ. ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣವನ್ನು ಸೃಷ್ಠಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ, ವಾಟ್ಸಾಪ್ ಗ್ರೂಪ್‌ಗಳಲ್ಲಿ ಹಿಂದೂಗಳ ವಿರುದ್ಧ ಅವಾಚ್ಯ ಶಬ್ಧಗಳಿಂದ ಬಯ್ಯುವುದು, ಪಾಕಿಸ್ಥಾನ ಧ್ವಜದ ಲೋಗೋ, ಅವಾಚ್ಯ ಶಬ್ಧಗಳನ್ನು ಪೋಸ್ಟ್ ಮಾಡುವ ಈ ಕುಕೃತ್ಯಗಳು ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಯಿಂದಾಗಿ ಶಾಲಾ-ಕಾಲೇಜುಗಳಲ್ಲದೇ, ಸಾರ್ವಜನಿಕ ಸಮಾಜದ ಸ್ವಾಸ್ಥ್ಯ ಕದಡುತ್ತಿದೆ. ಆದ್ದರಿಂದ, ತಾವು ಇದನ್ನು ಕೂಡಲೇ ಗಂಭೀರವಾಗಿ ಪರಿಗಣಿಸಿ ಮೇಲ್ಕಂಡ ಎಲ್ಲಾ ಕೃತ್ಯದಲ್ಲಿ ಭಾಗಿಯಾಗಿರುವ ಹಾಗೂ ಇದರ ಹಿಂದಿರುವ ಸಮಾಜ ಘಾತುಕ ಕಾಣದ ಕೈಗಳನ್ನು ಕೂಡಲೇ ಪತ್ತೆ ಹಚ್ಚಿ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮವನ್ನು ಜರುಗಿಸಿ, ಶಾಲಾ-ಕಾಲೇಜುಗಳಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಮತ್ತು ಈಗಾಗಲೇ ಪರೀಕ್ಷಾ ಸಮಯ ಸಮೀಪಿಸುತ್ತಿರುವುದರಿಂದ ತುರ್ತು ಅಗತ್ಯ ಕ್ರಮ ಜರುಗಿಸಿ ವಿದ್ಯಾರ್ಥಿಗಳ ಹಿತದೃಷ್ಠಿ ಮತ್ತು ಭವಿಷ್ಯ ಕಾಪಾಡಲು ಪೋಲೀಸ್ ಭದ್ರತೆಯನ್ನು ಕಲ್ಪಿಸಬೇಕಾಗಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್, ಸಣ್ಣ ಕೈಗಾರಿಕಾ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ಆರ್. ಮಧುಸೂದನ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶ್ರೀನಾಥ್, ಶಿವರಾಜು, ಧರ್ಮ ಪ್ರಸಾದ್, ನಗರ ಬಿಜೆಪಿ ಅಧ್ಯಕ್ಷ ಎನ್. ಪಿ. ಜಗದೀಶ್, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್. ಎನ್. ಚನ್ನಬಸಪ್ಪ, ಜಿಲ್ಲಾ ಕಾರ್ಯದರ್ಶಿ ಹೃಷಿಕೇಶ್ ಪೈ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post