No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕರೋನಾ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಉನ್ನತೀಕರಣ: ಸಚಿವ ಈಶ್ವರಪ್ಪ

kalpa News by kalpa News
April 17, 2021
in ಶಿವಮೊಗ್ಗ
0
ಕರೋನಾ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಉನ್ನತೀಕರಣ: ಸಚಿವ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳು, ಮಾನವ ಸಂಪನ್ಮೂಲ ಹಾಗೂ ಹಣಕಾಸು ವ್ಯವಸ್ಥೆ ಕಲ್ಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಅವರು ಇಂದು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಎದುರಿಸಲು ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೆಗ್ಗಾನ್‌ಗೆ ಹೆಚ್ಚುವರಿಯಾಗಿ ಅಗತ್ಯವಿರುವ 50 ನರ್ಸ್‌ಗಳು ಹಾಗೂ ಡಿ ಗ್ರೂಪ್ ನೌಕರರನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ಪಡೆದುಕೊಳ್ಳಲಾಗಿದೆ. ಪ್ರಸ್ತುತ ಇರುವ ಆಕ್ಸಿಜನ್ ಬೆಡ್‌ಗಳ ಲಭ್ಯತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಅನುದಾನವನ್ನು ಎಸ್‌ಡಿಆರೆಫ್ ಅಡಿಯಲ್ಲಿ ಪಡೆದುಕೊಳ್ಳುವ ಕುರಿತು ಪ್ರಯತ್ನಿಸಲಾಗುತ್ತಿದೆ. ಮೆಗ್ಗಾನ್‌ಗೆ ಪಾಲಿಕೆಯಿಂದ ಹೆಚ್ಚುವರಿಯಾಗಿ ಅಂಬುಲೆನ್ಸ್ ನೀಡಲು ಸೂಚನೆ ನೀಡಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಕಳೆದ ಸೆಪ್ಟಂಬರ್‌ನಲ್ಲಿ ಕರೋನಾ ಅತ್ಯಂತ ಹೆಚ್ಚಾಗಿದ್ದ ಸಂದರ್ಭದಲ್ಲಿ ರಚಿಸಲಾಗಿದ್ದ ವೈದ್ಯಕೀಯ ತಂಡಗಳನ್ನೇ ಈಗಲೂ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಕಳೆದ ಬಾರಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಕರೋನಾ ಸೋಂಕಿತರ ಪ್ರಾಥಮಿಕ ತಪಾಸಣೆ ನಡೆಸಲಾಗುತ್ತಿತ್ತು. ಪ್ರಸ್ತುತ ಮೆಗ್ಗಾನ್‌ನಲ್ಲಿ ಮಾಡಲಾಗುತ್ತಿದ್ದು, ಇದನ್ನು 24×7 ಮಾಡಲಾಗುವುದು. ಮೆಗ್ಗಾನ್‌ನಲ್ಲಿ ಚಿಕಿತ್ಸೆ ಅಗತ್ಯವಿದ್ದವರನ್ನು ಮಾತ್ರ ದಾಖಲು ಮಾಡಿ ಉಳಿದವರನ್ನು ಹೋಂ ಐಸೋಲೇಷನ್ ಮಾಡಲಾಗುವುದು. ಅಗತ್ಯ ಬಿದ್ದರೆ ಕರೋನಾ ಕೇರ್ ಸೆಂಟರ್ ಆರಂಭಿಸಲಾಗುವುದು. ತಾಲೂಕು ಆಸ್ಪತ್ರೆಗಳಲ್ಲಿ ಸಹ ಕರೋನಾ ಪೀಡಿತರನ್ನು ದಾಖಲು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದರು.
ಪ್ರಸ್ತುತ ಮೆಗ್ಗಾನ್ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೈಪ್‌ಲೈನ್ ಸೌಲಭ್ಯ ಸೇರಿದಂತೆ ಒಟ್ಟು 613 ಆಕ್ಸಿಜನ್ ಪಾಯಿಂಟ್ ಸೌಲಭ್ಯ ಕಲ್ಪಿಸಲಾಗಿದೆ. ಇನ್ನೂ 500 ಆಕ್ಸಿಜನ್ ಪಾಯಿಂಟ್ ಕಲ್ಪಿಸುವುದರ ಕುರಿತು ಪ್ರಸ್ತಾವನೆಯನ್ನು ಅನುಮೋದನೆಗಾಗಿ ಸಲ್ಲಿಸಲಾಗಿದೆ. ಇದಕ್ಕೆ 1.20ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಕೆಎಸ್‌ಎಚ್‌ಆರ್‍ಡಿಪಿ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ರವಿಕಿರಣ್ ಅವರು ಮಾಹಿತಿ ನೀಡಿದರು. ಹೆಚ್ಚುವರಿ ಆಕ್ಸಿಜನ್ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆಗೆ ತಕ್ಷಣ ಅನುಮೋದನೆ ಪಡೆದುಕೊಂಡು ಕಾರ್ಯಾರಂಭ ಮಾಡುವಂತೆ ಸಚಿವರು ತಾಕೀತು ಮಾಡಿದರು.

ಲಸಿಕೆ ಕೊರತೆ ಇಲ್ಲ:
ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇರುವುದಿಲ್ಲ. ಸರ್ಕಾರದ ಮಾರ್ಗಸೂಚಿ ಪ್ರಕಾರ ಲಸಿಕೆ ನೀಡಲಾಗುತ್ತಿದ್ದು, ಅರ್ಹ ವ್ಯಕ್ತಿಗಳು ಆಸ್ಪತ್ರೆಗೆ ತೆರಳಿ ಆನ್‌ಲೈನ್‌ನಲ್ಲಿ ತಮ್ಮ ಮಾಹಿತಿ ನೋಂದಣಿ ಮಾಡಿಕೊಳ್ಳಬೇಕು. ಅವರಿಗೆ ಅಲ್ಲಿಯೇ ಲಸಿಕೆ ನೀಡಲಾಗುವುದು ಅಥವಾ ಲಸಿಕೆ ನೀಡುವ ದಿನಾಂಕವನ್ನು ತಿಳಿಸಲಾಗುವುದು. ಖಾಸಗಿ ಆಸ್ಪತ್ರೆಗಳು ಸಹ ಲಸಿಕೆಯನ್ನು ಪಡೆದುಕೊಳ್ಳಲು ಮುಂದೆ ಬರಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಎಂ.ಎಲ್, ಶಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ.ಶ್ರೀಧರ್, ಶಿಮ್ಸ್ ಆಡಳಿತ ಮಂಡಳಿ ನಿರ್ದೇಶಕರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Covid 2nd WaveCovid vaccinationKannada News WebsiteLatest News KannadaLocal NewsMalnad NewsMcgann hospital shimogaMinister KS EshwarappaShimogaShivamoggaShivamogga DC ShivakumarShivamogga Newsಕೋವಿಡ್ ಎರಡನೇ ಅಲೆಕೋವಿಡ್ ಲಸಿಕೆಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮಲೆನಾಡು_ಸುದ್ಧಿಮೆಗ್ಗಾನ್ ಆಸ್ಪತ್ರೆಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ಸೋಂಕು: ಮಾಜಿ ಮುಖ್ಯಮಂತಿಯವರಿಗೇ ಆಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲ…!

Next Post

ಶಿಕಾರಿಪುರ: ಹುಚ್ಚರಾಯಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ದಾಖಲೆ ಹಣ ಸಂಗ್ರಹ!

kalpa News

kalpa News

Next Post
ಒಂದೇ ದಿನ ಕರ್ನಾಟಕದ ಈ ಮೂರು ಕ್ಷೇತ್ರಕ್ಕೆ ಭೇಟಿ ನೀಡಿ, ಕಾಶಿ ಯಾತ್ರೆಯಷ್ಟು ಪುಣ್ಯ ಪಡೆಯಿರಿ

ಶಿಕಾರಿಪುರ: ಹುಚ್ಚರಾಯಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ದಾಖಲೆ ಹಣ ಸಂಗ್ರಹ!

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL