ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ದೇಶದ ನಾಲ್ಕು ಸದನಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿರುವ ಹಾಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಗೂ ಜಿಲ್ಲೆಯ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗಳ ನೇತಾರ ಎಸ್. ರುದ್ರೇಗೌಡ ಇಬ್ಬರಿಗೂ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಪ್ರೊತ್ಸಾಹಿಸಬೇಕೆಂದು ಶಿವಮೊಗ್ಗ ಗ್ರಾಮಾಂತರ ಲಿಂಗಾಯಿತ ವೀರಶೈವ ಸಮಾಜ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಗ್ರಹಿಸಿದೆ.
ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟಿರುವ ಪ್ರಾಮಾಣಿಕ ಬಿ.ಎಸ್. ಯಡಿಯೂರಪ್ಪ ಅವರ ತವರು ಜಿಲ್ಲೆ ಹಾಗೂ ರಾಜ್ಯದಲ್ಲಿ ಲಿಂಗಾಯತ ಸಮಾಜದ ಪ್ರಭರ ನೇತಾರರೂ ಆಗಿರುವ ಆಯನೂರು ಮಂಜುನಾಥ್ ಮತ್ತು ಎಸ್. ರುದ್ರೇಗೌಡ ಅವರ ಸೇವಾ ಮನೋಭೂಮಿಕೆ ಹಿನ್ನಲೆಯಲ್ಲಿ ಸಚಿವ ಸ್ಥಾನ ನೀಡುವಂತೆ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಡಿ.ಬಿ. ವಿಜಯ್‌ಕುಮಾರ್, ಗೌರವಾಧ್ಯಕ್ಷ ಎಸ್.ಎಂ. ಲೋಕೇಶಪ್ಪ, ಕಾರ್ಯದರ್ಶಿ ಮಹೇಶ್ವರಪ್ಪ, ಹಾಗೂ ಉಪಾಧ್ಯಕ್ಷ ಪಿ.ಡಿ. ಮಂಜಪ್ಪ, ಸಹಕಾರ್ಯದರ್ಶಿ ಎಸ್.ಪಿ. ದಿನೇಶ್, ಗಂಗಾಧರ, ಖಜಾಂಚಿ ಬಿ.ಟಿ. ಈಶ್ವರಪ್ಪ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post