No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರಿ ಇಲಾಖೆಗಳ ಎಲ್ಲಾ ವೆಬ್‍ಸೈಟ್‍ಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಿ: ಟಿ.ಎಸ್. ನಾಗಾಭರಣ

kalpa News by kalpa News
September 7, 2022
in ಶಿವಮೊಗ್ಗ
0
ಪರಿಷ್ಕೃತ ಪಠ್ಯ ಪುಸ್ತಕ ವಿವಾದದಿಂದ ಸುಸಂಸ್ಕೃತ ಸಮಾಜದ ಘನತೆಗೆ ಧಕ್ಕೆ: ಟಿ.ಎಸ್. ನಾಗಾಭರಣ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸರ್ಕಾರಿ ಇಲಾಖೆಗಳ ಎಲ್ಲಾ ವೆಬ್‍ಸೈಟ್‍ಗಳಲ್ಲಿ ಮತ್ತು ತಂತ್ರಾಂಶಗಳಲ್ಲಿ ಕನ್ನಡ ಭಾಷೆಗೆ ಕಡ್ಡಾಯವಾಗಿ ಪ್ರಥಮ ಆದ್ಯತೆಯನ್ನು ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ನಡೆಸಿದರು.

ಕೆಲವು ಇಲಾಖೆಗಳ ವೆಬ್‍ಸೈಟ್‍ನಲ್ಲಿ ಮುಖಪುಟದಲ್ಲಿ ಕನ್ನಡ ಭಾಷೆ ಬಳಕೆ ಇದ್ದರೂ, ಮಾಹಿತಿಗಳು ಇಂಗ್ಲಿಷ್ ಭಾಷೆಯಲ್ಲಿವೆ. ವೆಬ್‍ಸೈಟ್‍ಗಳಲ್ಲಿ ಪ್ರತಿ ಮಾಹಿತಿ ಕೂಡಾ ಕನ್ನಡದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಇದೇ ರೀತಿ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸುವ ತಂತ್ರಾಂಶಗಳಲ್ಲಿ ಸಹ ಕಡ್ಡಾಯವಾಗಿ ಕನ್ನಡವನ್ನು ಅಳವಡಿಸಬೇಕು. ಜನಸಾಮಾನ್ಯರಿಗೆ ನೇರವಾಗಿ ಸೇವೆಯನ್ನು ಒದಗಿಸುವ ಇಲಾಖೆಗಳಲ್ಲಿ ಕನ್ನಡದ ಅನುಷ್ಟಾನ ಕಡ್ಡಾಯವಾಗಿ ಶೇ.100ರಷ್ಟು ಜಾರಿಯಾಗಬೇಕು ಎಂದು ಅವರು ಹೇಳಿದರು.
ಇದೇ ರೀತಿ ಬ್ಯಾಂಕ್, ಆರ್‌ಟಿಓ, ಮೆಸ್ಕಾಂ, ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸೇವೆಗಳನ್ನು ಕನ್ನಡದಲ್ಲಿಯೇ ಒದಗಿಸಬೇಕು. ಇಲ್ಲಿ ಅರ್ಜಿ ನಮೂನೆಗಳು, ಚಲನ್ ಇತ್ಯಾದಿಗಳು ಕನ್ನಡದಲ್ಲಿಯೂ ಇರುವಂತೆ ಖಾತ್ರಿಪಡಿಸಬೇಕು. ಎಲ್ಲಾ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು. ಸ್ಥಳೀಯ ಸಂಸ್ಥೆಗಳು ಅಂಗಡಿಗಳಿಗೆ ಪರವಾನಿಗೆ ನೀಡುವ ಸಂದರ್ಭದಲ್ಲಿ ಇದನ್ನು ಅನುಷ್ಟಾನಗೊಳಿಸಬೇಕು ಎಂದರು.

Also read: ಶಿಮುಲ್‍ಗೆ ಫುಡ್ ಸೇಫ್ಟಿ ಸಿಸ್ಟಂ ಸರ್ಟಿಫಿಕೇಟ್ ದೃಢೀಕರಣ ಪತ್ರ

ಬಹುತೇಕ ಇಲಾಖೆಗಳು ಕನ್ನಡದಲ್ಲಿಯೇ ಸೇವೆಯನ್ನು ಒದಗಿಸುತ್ತಿದ್ದರೂ, ಸಂಪೂರ್ಣ ಅನುಷ್ಟಾನ ಇನ್ನೂ ಆಗುತ್ತಿಲ್ಲ. ವೈದ್ಯರು ನೀಡುವ ಪೋಸ್ಟ್‍ಮಾರ್ಟಂ ವರದಿ, ಬ್ಯಾಂಕ್‍ಗಳ ಪತ್ರ ವ್ಯವಹಾರ, ಸಾರ್ವಜನಿಕ ಸೇವೆಗಳು, ಔಷಧಿಗಳ ಹೆಸರು ಇತ್ಯಾದಿಗಳು ಕನ್ನಡದಲ್ಲಿ ಸಹ ಇರುವಂತೆ ನೋಡಿಕೊಳ್ಳಬೇಕು. ವಿವಿಧ ಇಲಾಖೆಗಳು ಪ್ರಕಟಿಸುವ ಟೆಂಡರ್ ಅಧಿಸೂಚನೆಗಳು ಇನ್ನೂ ಇಂಗ್ಲಿಷ್‍ನಲ್ಲಿರುವುದನ್ನು ಗಮನಿಸಲಾಗಿದೆ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಟೆಂಡರ್ ಅಧಿಸೂಚನೆ ಪ್ರಕಟಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕನ್ನಡ ಅನುಷ್ಟಾನದಲ್ಲಿನ ಲೋಪಗಳ ಕುರಿತು ಪ್ರಾಧಿಕಾರಕ್ಕೆ ಬಂದಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಗೋಪಾಲಗೌಡ ಬಡಾವಣೆಯಲ್ಲಿರುವ ರಾಷ್ಟ್ರೀಯ ಬ್ಯಾಂಕ್‍ನಲ್ಲಿ ಅರ್ಜಿ ನಮೂನೆಗಳು ಕನ್ನಡದಲ್ಲಿ ಇಲ್ಲದ ಬಗ್ಗೆ ದೂರುಗಳು ಬಂದಿದ್ದು, ಇದನ್ನು ತಕ್ಷಣ ಸರಿಪಡಿಸಬೇಕು. ಶಿಕ್ಷಕರ ಕೊರತೆಯಿಂದ ಮುಚ್ಚಲಾಗಿರುವ ಸರ್ಕಾರಿ ಶಾಲೆಗಳ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲೆಗಳ ವಿವರಗಳನ್ನು ಒದಗಿಸಬೇಕು. ಕನ್ನಡ ಕಲಿಕಾ ಅಧಿನಿಯಮ 2017 ಅನ್ವಯ ಪ್ರತಿ ಶಾಲೆಗಳಲ್ಲಿ ಒಂದರಿಂದ 5ನೇ ತರಗತಿವರೆಗೆ ಕಡ್ಡಾಯವಾಗಿ ಕನ್ನಡವನ್ನು ಕಲಿಸಬೇಕಾಗಿದ್ದು, ಅದರ ಅನುಷ್ಟಾನ ಪರಿಶೀಲಿಸಬೇಕು. ಕನ್ನಡ ಅಂಕಿಗಳ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನವೆಂಬರ್ 1ರಿಂದ ಕನ್ನಡ ಅಂಕಿ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ವೇದಿಕಯಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಮುಲ್‍ಗೆ ಫುಡ್ ಸೇಫ್ಟಿ ಸಿಸ್ಟಂ ಸರ್ಟಿಫಿಕೇಟ್ ದೃಢೀಕರಣ ಪತ್ರ

Next Post

ಶಿವಮೊಗ್ಗ ಹೊಳೆ ಬಸ್ ನಿಲ್ದಾಣ ಬಳಿ ಸೇತುವೆ ಮೇಲೆ ಅಪಘಾತ: ಬೈಕ್ ಸವಾರರಿಗೆ ಗಾಯ

kalpa News

kalpa News

Next Post
ಶಿವಮೊಗ್ಗ ಹೊಳೆ ಬಸ್ ನಿಲ್ದಾಣ ಬಳಿ ಸೇತುವೆ ಮೇಲೆ ಅಪಘಾತ: ಬೈಕ್ ಸವಾರರಿಗೆ ಗಾಯ

ಶಿವಮೊಗ್ಗ ಹೊಳೆ ಬಸ್ ನಿಲ್ದಾಣ ಬಳಿ ಸೇತುವೆ ಮೇಲೆ ಅಪಘಾತ: ಬೈಕ್ ಸವಾರರಿಗೆ ಗಾಯ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL