No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ್ಯೂಮೋನಿಯಾದಿಂದ ಮಕ್ಕಳನ್ನು ರಕ್ಷಿಸಲು ಪಿಸಿವಿ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಶಿವಕುಮಾರ್

kalpa News by kalpa News
November 11, 2021
in ಶಿವಮೊಗ್ಗ
0
ನ್ಯೂಮೋನಿಯಾದಿಂದ ಮಕ್ಕಳನ್ನು ರಕ್ಷಿಸಲು ಪಿಸಿವಿ ಲಸಿಕೆ ಹಾಕಿಸಿ:  ಜಿಲ್ಲಾಧಿಕಾರಿ ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಾರ್ವತ್ರಿಕ ಲಸಿಕಾಕರಣಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ‘ನ್ಯುಮೊಕಾಕಲ್ ಕಾಂಜುಗೇಟ್ ಲಸಿಕೆ’(ಪಿಸಿವಿ) ಯನ್ನು ಎಲ್ಲ ಅರ್ಹ ಮಕ್ಕಳಿಗೆ ನೀಡುವ ಮೂಲಕ ಈ ಲಸಿಕಾಕರಣವನ್ನು ಯಶಸ್ವಿಗೊಳಸಿಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನುಡಿದರು.

ಇಂದು ತುಂಗಾನಗರ ನಗರ ಪ್ರಸೂತಿ ಆರೋಗ್ಯ ಕೇಂದ್ರದಲ್ಲಿ ನ್ಯೂಮೊಕಾಕಲ್ ಕಾಂಜುಗೇಟ್ ಲಸಿಕೆ(ಪಿಸಿವಿ) ನೀಡಿಕೆ ಕುರಿತು ಏರ್ಪಡಿಸಲಾಗಿದ್ದ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನ್ಯೂಮೋನಿಯಾದಂತಹ ಕಾಯಿಲೆಯಿಂದ ಮಕ್ಕಳನ್ನು ರಕ್ಷಿಸುವ ಪಿಸಿವಿ ಲಸಿಕೆಯನ್ನು ಎಲ್ಲ ಮಕ್ಕಳಿಗೆ ನೀಡುವ ಮೂಲಕ ಆರೋಗ್ಯವಂತ ದೇಶ ಮಾಡುವಲ್ಲಿ ಎಲ್ಲರೂ ಸಹಕರಿಸಬೇಕೆಂದರು.

ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಪಿಸಿವಿ ಒಂದು ವರದಾನವಾಗಿ ಬಂದಿದೆ. ಮಕ್ಕಳನ್ನು ಉಸಿರಾಟ ಸಂಬಂಧಿ ಕಾಯಿಲೆಯಿಂದ ರಕ್ಷಿಸುವ ಈ ಲಸಿಕೆ ದರ ಖಾಸಗಿಯಾಗಿ ದುಬಾರಿಯಾಗಿದ್ದು ಭಾರತ ಸರ್ಕಾರ ಇದೀಗ ಉಚಿತವಾಗಿ ಮೂರು ಡೋಸ್‍ಗಳಲ್ಲಿ ನೀಡುತ್ತಿದೆ. ಮೂರೂ ಡೋಸ್‍ಗಳನ್ನು ಪೋಷಕರು ಸಕಾಲದಲ್ಲಿ ಮಕ್ಕಳಿಗೆ ಹಾಕಿಸುವ ಮೂಲಕ ಈ ಲಸಿಕಾಕರಣದ ಸದುಪಯೋಗ ಪಡೆಯಬೇಕೆಂದು ಹೇಳಿದರು.

ಡಬ್ಲ್ಯುಹೆಚ್‍ಓ ಸಲಹೆಗಾರ ಡಾ.ಸತೀಶ್‍ಚಂದ್ರ ಮಾತನಾಡಿ, ಭಾರತ ಸರ್ಕಾರದ ಸಾರ್ವತ್ರಿಕ ಲಸಿಕೆಯಲ್ಲಿ ಇದು 12 ನೇ ಲಸಿಕೆಯಾಗಿ ಸೇರ್ಪಡೆಗೊಂಡಿದೆ. ಇದು ಸ್ಟ್ರೆಪ್ಟೋಕೋಕಸ್ ನ್ಯುಮೋನಿಯಾ(ನ್ಯುಮೊಕಾಕಲ್) ಎಂದು ಕರೆಯಲ್ಪಡುವ ಬ್ಯಾಕ್ಟೀರಿಯಾದಿಂದ ಉಂಟಾಗುವ ರೋಗಗಳ ಒಂದು ಗುಂಪು. ನ್ಯುಮೋಕಾಕಲ್ ರೋಗಾಣು ಶರೀರದ ಬೇರೆ ಬೇರೆ ರೀತಿಯ ರೋಗಗಳಿಗೆ ಕಾರಣವಾಗಬಹುದಾಗಿದ್ದು ಐದು ವರ್ಷದ ಒಳಗಿನ ಮಕ್ಕಳಲ್ಲಿ ಈ ಬ್ಯಾಕ್ಟೀರಿಯಾಗಳಿಂದ ಉಂಟಾಗುವ ನ್ಯೂಮೋನಿಯಾಗೆ ಸ್ಪ್ರೆಪ್ಟೋಕೋಕಸ್ ನ್ಯೂನಿಯಾ ಪ್ರಮುಖ ಕಾರಣವಾಗಿದೆ.

ನ್ಯುಮೊಕಾಕಲ್ ನ್ಯುಮೋನಿಯಾ ಕಡಿಮೆ ಅವಧಿಯ ಉಸಿರಾಟ ಸಂಬಂಧಿಯ ತೀವ್ರ ಪ್ರಮಾಣದ ಸೋಂಕಾಗಿದ್ದು ಈ ಸೋಂಕಿನಿಂದ ಶ್ವಾಸಕೋಶಗಳಲ್ಲಿ ಉರಿಯೂತ ಹಾಗೂ ದ್ರವಗಳ ಶೇಖರಣೆ ಉಂಟಾಗುತ್ತದೆ. ಇದರಿಂದಾಗಿ ಸರಾಗವಾಗಿ ಉಸಿರಾಡಲು ಆಗದೆ ಒಳ ಹೋಗುವ ಆಮ್ಲಜನಕ ಪ್ರಮಾಣ ಕಡಿಮೆ ಆಗುತ್ತದೆ. ಮಕ್ಕಳಿಗೆ ಪಿಸಿವಿ ಲಸಿಕೆ ನೀಡಿದರೆ ಈ ಕಾಯಿಲೆಯಿಂದ ಉಂಟಾಗುವ ತೊಂದರೆ ಮತ್ತು ಸಾವನ್ನು ತಡೆಗಟ್ಟಬಹುದು.

ಮಗು ಹುಟ್ಟಿದ ಮೊದಲ ವರ್ಷದಲ್ಲಿ ಗಂಭೀರ ನ್ಯುಮೊಕಾಕಲ್ ಕಾಯಿಲೆ ಕಂಡುಬರುವ ಸಾಧ್ಯತೆ ಹೆಚ್ಚಾಗಿರುತ್ತದೆಯಾದರೂ ಎರಡು ವರ್ಷಗಳವರೆಗೂ ಇದರ ಸಾಧ್ಯತೆ ಹೆಚ್ಚಾಗಿಯೇ ಇರುತ್ತದೆ. ಉಸಿರಾಡುವಾಗ, ಕೆಮ್ಮುವಾಗ ಅಥವಾ ಸೀನುವಾಗ ವ್ಯಕ್ತಿಯ ಬಾಯಿ ಅಥವಾ ಮೂಗಿನಿಂದ ಹೊರಬೀಳುವ ತುಂತುರುಗಳಿಂದ ಈ ರೋಗ ಹರಡುತ್ತದೆ.

ಸಾಮಾನ್ಯವಾಗಿ ಆರೋಗ್ಯವಂತ ಮಕ್ಕಳು ತಮ್ಮ ರೋಗನಿರೋಧಕ ಶಕ್ತಿಯಿಂದ ಈ ಸೋಂಕಿನ ವಿರುದ್ದ ಹೋರಾಡಬಹುದು. ಐದು ವರ್ಷದ ಒಳಗಿನ ವಿಶೇಷವಾಗಿ ಎರಡು ವರ್ಷದೊಳಗಿನ ಮಕ್ಕಳು ಈ ರೋಗಕ್ಕೆ ಸಿಲುಕಿ ಬಲಿಯಾಗುವ ಸಾಧ್ಯತೆ ಹೆಚ್ಚಿದ್ದು ಶೇ.15 ರಿಂದ 17 ರಷ್ಟು 02 ವರ್ಷದೊಳಗಿನ ಮಕ್ಕಳು ಈ ರೋಗಕ್ಕೆ ಬಲಿಯಾಗುತ್ತಿದ್ದಾರೆ.

ಪಿಸಿವಿ ಲಸಿಕೆಯು ಚಿಕ್ಕ ಮಕ್ಕಳನ್ನು ನ್ಯುಮೋನಿಯಾ ಕಾಯಿಲೆಯಿಂದ ರಕ್ಷಿಸುತ್ತದೆ. ಈ ಲಸಿಕೆ ಸುರಕ್ಷಿತವಾಗಿದ್ದು ಈಗಾಗಲೇ ಜಗತ್ತಿನ 146 ದೇಶಗಳಲ್ಲಿ ನೀಡಲಾಗುತ್ತಿದೆ. 2017 ರಿಂದ ನಮ್ಮ ದೇಶದ 5 ರಾಜ್ಯಗಳಲ್ಲಿ ಈ ಲಸಿಕೆ ನೀಡಲಾಗುತ್ತಿದ್ದು ಈ ರಾಜ್ಯಗಳಲ್ಲಿ ಮಕ್ಕಳಲ್ಲಿ ನ್ಯುಮೋನಿಯಾ ಪ್ರಕರಣಗಳು ಅತ್ಯಂತ ಕಡಿಮೆ ಇದೆ.

ಸುಮಾರು 20 ವರ್ಷಗಳಿಂದ ಖಾಸಗಿಯಾಗಿ ಈ ಲಸಿಕೆ ಲಭ್ಯವಿದ್ದು ಇದರ ವೆಚ್ಚ ಸುಮಾರು 4 ರಿಂದ 6 ಸಾವಿರ ಆಗಲಿದೆ. ಆದರೆ ಭಾರತ ಸರ್ಕಾರ ಇದೀಗ ಸಾರ್ವತ್ರಿಕ ಲಸಿಕಾಕರಣದಲ್ಲಿ ಈ ಲಸಿಕೆಯನ್ನು ಸೇರ್ಪಡೆಗೊಳಿಸಿದ್ದು ಸಂಪೂರ್ಣ ಉಚಿತವಾಗಿ ಮಗುವಿಗೆ ಒಂದೂವರೆ ತಿಂಗಳಿಗೆ, ಮೂರೂವರೆ ತಿಂಗಳಿಗೆ ಮತ್ತು ಒಂಭತ್ತು ತಿಂಗಳಿಗೆ(ಬೂಸ್ಟರ್ ಡೋಸ್) ಹೀಗೆ ಮೂರು ಡೋಸ್‍ಗಳಲ್ಲಿ ನೀಡುತ್ತಿದೆ.

ಆರ್‌ಸಿಹೆಚ್‍ಓ ಡಾ .ನಾಗರಾಜ ನಾಯ್ಕ, ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ 2021-22 ನೇ ಸಾಲಿಗೆ ಒಟ್ಟು 24,284 ಮಕ್ಕಳಿಗೆ ಸಾರ್ವತ್ರಿಕ ಲಸಿಕಾಕರಣದಲ್ಲಿ ಈ ಲಸಿಕೆ ನೀಡಲಾಗುವುದು. ಕೋವಿಡ್ 19 ಲಸಿಕೆ ಅಭಿಯಾನ ಮುಂದುವರೆಯುವುದರ ಜೊತೆಗೆ ಆರೋಗ್ಯ ಇಲಾಖೆ ಪಿಸಿವಿ ಅಭಿಯಾನಕ್ಕೆ ಸಿದ್ದತೆ ನಡೆಸಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ಮಕ್ಕಳಿಗೆ(ಐದು ವರ್ಷದೊಳಗಿನ) ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದರು.

ತುಂಗಾನಗರ ನಗರ ಆರೋಗ್ಯ ಕೇಂದ್ರದಲ್ಲಿ ಇಂದು ಮೊದಲನೇ ಡೋಸ್ ಪಿಸಿವಿ ಲಸಿಕೆಯನ್ನು ಮಕ್ಕಳಿಗೆ ನೀಡಲಾಯಿತು. ಈ ವೇಳೆ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಓ.ಮಲ್ಲಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ಡಾ.ಭೀಮಪ್ಪ, ಹಿರಿಯ ಆರೋಗ್ಯ ನಿರೀಕ್ಷಕ ಎಂ.ಎ. ಅಕ್ತಾರ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರತಿಮಾ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPCV VaccinePneumoniaShimogaShivamoggaShivamogga DC ShivamoggaShivamogga Newsಜಿಲ್ಲಾಧಿಕಾರಿ ಶಿವಕುಮಾರ್ನ್ಯೂಮೋನಿಯಾಪಿಸಿವಿ ಲಸಿಕೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ನ.13ರಂದು ಶಿವಮೊಗ್ಗ ಕೆಲವು ಬಡಾವಣೆಗಳಲಿ ವಿದ್ಯುತ್ ಇರುವುದಿಲ್ಲ

Next Post

ಜನಪರ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ: ಮುಖ್ಯಮಂತ್ರಿ ಬೊಮ್ಮಾಯಿ

kalpa News

kalpa News

Next Post
ಜನಪರ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ: ಮುಖ್ಯಮಂತ್ರಿ ಬೊಮ್ಮಾಯಿ

ಜನಪರ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ: ಮುಖ್ಯಮಂತ್ರಿ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL