No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಬಿ ಗ್ರಾಮ್ ಜಿ ಕಾಯ್ದೆ ಮೂಲಕ ಕಾರ್ಮಿಕರ ಬದುಕಿನ ಹತ್ಯೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2026
in ಶಿವಮೊಗ್ಗ
0
ವಿಬಿ ಗ್ರಾಮ್ ಜಿ ಕಾಯ್ದೆ ಮೂಲಕ ಕಾರ್ಮಿಕರ ಬದುಕಿನ ಹತ್ಯೆ: ಡಿಸಿಎಂ ಡಿ.ಕೆ. ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

“ಕೇಂದ್ರ ಬಿಜೆಪಿ ಸರ್ಕಾರ ವಿಬಿ ಗ್ರಾಮ್ ಜಿ ನೂತನ ಕಾಯ್ದೆ #VB Gram G Act ಮೂಲಕ ಮಹಾತ್ಮ ಗಾಂಧಿ ಹಾಗೂ ಕಾರ್ಮಿಕರ ಬದುಕನ್ನು ಸಾಯಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ #DCM D K Shivakumar ಅವರು ತಿಳಿಸಿದರು.

ಶಿವಮೊಗ್ಗ ಸರ್ಕಿಟ್ ಹೌಸ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಗುರುವಾರ ಮಾತನಾಡಿದರು.
ಮನರೇಗಾ ವಿಚಾರದ ಹೋರಾಟ ಮುಂದುವರಿಯುವುದೇ ಎಂದು ಕೇಳಿದಾಗ, ಖಂಡಿತವಾಗಿ ಮನರೇಗಾ ವಿಚಾರದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ. ರೈತರ ವಿಚಾರದಲ್ಲಿ ಕಾಯ್ದೆಗಳನ್ನು ಯಾವ ರೀತಿ ಹಿಂಪಡೆದರೋ ಅದೇ ರೀತಿ ಇದನ್ನು ಹಿಂಪಡೆಯಬೇಕು. 6-7 ಸಾವಿರ ಕೋಟಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುತ್ತಿತ್ತು. ಕಾರ್ಮಿಕರಿಗೆ ಉದ್ಯೋಗದ ಹಕ್ಕು ನೀಡಲಾಗಿತ್ತು, ಪಂಚಾಯ್ತಿ ಸದಸ್ಯರೇ ತಮ್ಮ ವ್ಯಾಪ್ತಿಯಲ್ಲಿ ಯಾವ ಕೆಲಸ ಆಗಬೇಕು ಎಂದು ತೀರ್ಮಾನ ಮಾಡುತ್ತಿದ್ದರು. ರೈತರು ತಮ್ಮ ಸ್ವಂತ ಜಮೀನಿನಲ್ಲಿ ಕೆಲಸ ಮಾಡಿದರೆ ಅವರಿಗೆ ವೇತನ ನೀಡುವ ಅವಕಾಶ ಕಲ್ಪಿಸಲಾಗಿತ್ತು. ಆಶ್ರಯ ಮನೆ, ಜಮೀನು ಮಟ್ಟ ಮಾಡುವ, ಇಂಗುಗುಂಡಿ ನಿರ್ಮಾಣಕ್ಕೆ ಕೂಲಿ ನೀಡಲಾಗುತ್ತಿತ್ತು. ಈ ಹಕ್ಕುಗಳನ್ನು ಕಸಿದು, ಇನ್ನು ಮುಂದೆ ದೆಹಲಿಯಿಂದ ಯಾವ ಕೆಲಸ ಆಗಬೇಕು ಎಂದು ತೀರ್ಮಾನಿಸಲಾಗುವುದು. ಮನರೇಗಾ ಯೋಜನೆ ಮೂಲಕ ನನ್ನ ಕ್ಷೇತ್ರದಲ್ಲಿ 54 ಸಾವಿರಕ್ಕೂ ಹೆಚ್ಚು ದನದ ಕೊಟ್ಟಿಗೆ ಕಟ್ಟಿಸಿದ್ದೇನೆ. ಒಂದೇ ವರ್ಷ 250 ಕೋಟಿ ವೆಚ್ಚ ಮಾಡಲಾಗಿದೆ. ನೂರಾರು ಚೆಕ್ ಡ್ಯಾಂ ನಿರ್ಮಿಸಲಾಗಿದೆ. ನಾನು ಹಣ ಹೊಡೆದಿದ್ದೇನೆ ಎಂಬ ಅನುಮಾನದ ಮೇಲೆ ಕೇಂದ್ರ ಸರ್ಕಾರ ದೆಹಲಿಯಿಂದ ತಂಡ ಕಳುಸಿಹಿ ತನಿಖೆ ಮಾಡಿಸಿತ್ತು. ನಂತರ ಈಶ್ವರಪ್ಪನವರೇ ಶಿಫಾರಸ್ಸು ಮಾಡಿ ನಮ್ಮ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರನ್ನು ದೆಹಲಿಗೆ ಕರೆಸಿ ಈ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ತಂದ ಕ್ಷೇತ್ರ ಎಂದು ಪ್ರಶಸ್ತಿ ನೀಡಿದರು ಎಂದರು.

ಹೊಸ ಕಾಯ್ದೆಯಿಂದ ಕಾರ್ಮಿಕರಿಗೆ ಸಂಕಷ್ಟ ಎದುರಾಗಲಿದ್ದು, ರಾಜ್ಯ ಸರ್ಕಾರ ಕಾರ್ಮಿಕರಿಗೆ ಯಾವ ಭರವಸೆ ನೀಡಲಿದೆ ಎಂದು ಕೇಳಿದಾಗ, “ನಾವು ಈ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಯೋಜನೆಗೆ ರಾಜ್ಯ ಸರ್ಕಾರ ಅನುದಾನ ನೀಡಲು ಆಗುವುದಿಲ್ಲ, ಕೇಂದ್ರ ಸರ್ಕಾರವೇ ಭರಿಸಬೇಕು. ಈ ಕಾಯ್ದೆ ಅನುಸಾರ ಯಾವ ಮಾರ್ಗಸೂಚನೆ ನೀಡುತ್ತಾರೆ ಕಾದು ನೋಡಬೇಕು” ಎಂದು ತಿಳಿಸಿದರು.
ರಾಜ್ಯದ ತೆರಿಗೆ ಹಣವನ್ನು ಜಾಹೀರಾತಿನ ಮೂಲಕ ದುಂದುವೆಚ್ಚ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಜಾಹೀರಾತು ನೀಡಿರುವುದರಲ್ಲಿ ತಪ್ಪೇನಿದೆ? ಮನರೇಗಾ ಯೋಜನೆ ಹೇಗೆ ಪ್ರಯೋಜನವಾಗುತ್ತಿತ್ತು, ಈಗ ನೂತನ ಕಾಯ್ದೆಯಿಂದ ಆಗುವ ಅನಾನುಕೂಲಗಳ ಬಗ್ಗೆ ನಮ್ಮದೇ ಆದ ಶೈಲಿಯಲ್ಲಿ ಜನರಿಗೆ ತಿಳಿಸುತ್ತೇವೆ. ನಾನು ರಂಗೋಲಿ ಸ್ಪರ್ಧೆಯನ್ನು ವೀಕ್ಷಣೆ ಮಾಡುವಾಗ ಗಣೇಶ ಚಿತ್ರದ ಮೇಲೆ ಸಾಗಿದೆ ಎಂದು ಬಿಜೆಪಿ ದಳದವರು ಟ್ರೋಲ್ ಮಾಡುತ್ತಿದ್ದಾರೆ. ಆ ಟ್ರೋಲ್ ಮಾಡಲು ಅವರದ್ದೂ ಒಂದೆರಡು ರೂಪಾಯಿ ಖರ್ಚಾಗಿರುತ್ತದೆಯಲ್ಲವೇ? ಒಬ್ಬೊಬ್ಬರು ಒಂದೊಂದು ವಿಚಾರದಲ್ಲಿ ಪ್ರಚಾರ ಮಾಡುತ್ತಾರೆ” ಎಂದರು.

ಆಡಳಿತದಲ್ಲಿ ಯತ್ರೀಂದ ಹಸ್ತಕ್ಷೇಪ ನೋಡಿಲ್ಲ

ಕೆ.ಜೆ. ಜಾರ್ಜ್ ಅವರು ಸಿಎಂ ಅವರಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಆರೋಪ ಮಾಡಿದ್ದಾರೆ ಎಂದು ಕೇಳಿದಾಗ, “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಜಾರ್ಜ್ ಅವರು ಬಹಳ ಹಿರಿಯ ಮಂತ್ರಿಗಳು. ಸ್ವಾಭಿಮಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ನನಗೆ ಯಾವ ಸಮಸ್ಯೆ ಕಂಡಿಲ್ಲ. ನಮಗೆ ಈ ವಿಚಾರ ಮಾಧ್ಯಮಗಳ ಮೂಲಕ ನನಗೆ ಈಗ ತಿಳಿಯಿತು. ವಿರೋಧ ಪಕ್ಷದವರು ಏನಾದರೂ ಹೇಳುತ್ತಿರುತ್ತಾರೆ. ಅವರು ಹೇಳುವುದೆಲ್ಲ ಸತ್ಯ ಎಂದು ತಿಳಿಯಲು ಆಗುವುದಿಲ್ಲ” ಎಂದು ತಿಳಿಸಿದರು.

ಯತೀಂದ್ರ ಅವರ ಹಸ್ತಕ್ಷೇಪ ವಿಚಾರವಾಗಿ ಕೇಳಿದಾಗ, “ಕಾರ್ಯಕರ್ತರು ಬಂದು ಮನವಿ ಕೊಟ್ಟಾಗ ಅಧಿಕಾರಿಗಳಿಗೆ ಕರೆ ಮಾಡಿ ಮನವಿ ಮಾಡಿಕೊಂಡಿರುತ್ತಾರೆ. ಕಾರ್ಯಕರ್ತರಿಗೆ ಒಳ್ಳೆಯದಾಗಲಿ ಎಂದು ಕೇಳುವುದರಲ್ಲಿ ತಪ್ಪೇನಿಲ್ಲ. ನನ್ನ ಬಳಿ ಎಲ್ಲಾ ಇಲಾಖೆಗೆ ಸಂಬಂಧಿಸಿದಂತೆ ಮನವಿ ನೀಡುತ್ತಾರೆ. ನಾನು ಎಲ್ಲಾ ಇಲಾಖೆ ಜೊತೆ ಮಾತನಾಡುತ್ತೇನೆ. ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಅವರು ಆಡಳಿತ ವಿಚಾರದಲ್ಲಿ ಯಾವ ಹಸ್ತಕ್ಷೇಪ ಮಾಡುವುದನ್ನು ನಾನು ನೋಡಿಲ್ಲ” ಎಂದರು.

ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದೂಡಿಕೆ ಬಗ್ಗೆ ಕೇಳಿದಾಗ, “ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದೂಡಿಲ್ಲ, ಯಾರೂ ಅರ್ಜಿ ಹಾಕಿಲ್ಲ. ಪಕ್ಷ ತೀರ್ಮಾನ ಮಾಡುತ್ತದೆ” ಎಂದರು.
ಗುತ್ತಿಗೆದಾರರ ಸಂಘದವರು ಏಳು ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ ಎಂದು ಕೇಳಿದಾಗ, “ಗುತ್ತಿಗೆದಾರ ಸಂಘದವರು ಏನು ಮಾತನಾಡಿದ್ದಾರೆ ಗೊತ್ತಿಲ್ಲ. ಅವರು ನನ್ನ ಬಳಿ ಬಂದು ಹೇಳಿಕೊಂಡ ಸಮಸ್ಯೆಗಳನ್ನು ನಾನು ಬಗೆಹರಿಸಿದ್ದೇನೆ” ಎಂದರು.

ಬೆಳಗಾವಿಯಲ್ಲಿ 400 ಕೋಟಿ ನಾಪತ್ತೆಯಾಗಿದ್ದು, ಇದು ಕಾಂಗ್ರೆಸ್ ಹಣ ಎಂಬ ಆರೋಪದ ಬಗ್ಗೆ ಕೇಳಿದಾಗ, “ವಿರೋಧ ಪಕ್ಷಗಳ ಕೈಯಲ್ಲೇ ಸಿಬಿಐ ಇದೆಯಲ್ಲಾ ತನಿಖೆ ಮಾಡಿಸಲಿ. ಯಾರ ಹಣ, ಯಾವ ಹಣ ನಮಗೆ ಈ ವಿಚಾರ ಗೊತ್ತಿಲ್ಲ. ತನಿಖೆ ಮಾಡಿ ಹೇಳಲಿ. ಸುಮ್ಮನೆ ಆರೋಪ ಮಾಡಿದರೆ ನಗೆಪಾಟಲಿಗೆ ಒಳಗಾಗಬೇಕಾಗುತ್ತದೆ” ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆ ವಿಚಾರವಾಗಿ ಕೇಳಿದಾಗ, “ನಾವು ಸ್ಥಳೀಯ ಸಂಸ್ಥೆ ಚುನಾವಣೆ ಮಾಡುತ್ತೇವೆ. ನಾಳೆ ಅಥವಾ ನಾಡಿದ್ದು ಈ ಚುನಾವಣೆಗಳ ಮೀಸಲಾತಿ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ಇದೆ. ನಾವು ಪಂಚಾಯ್ತಿ ನಾಯಕರಿಗೆ ಸಿದ್ಥತೆ ಮಾಡಿಕೊಳ್ಳಲು ಹೇಳಿದ್ದೇವೆ. ರಾಜ್ಯ ಚುನಾವಣಾ ಆಯೋಗ ಕೂಡ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮತಪತ್ರ ಬಳಸಲು ತೀರ್ಮಾನಿಸಿದ್ದಾರೆ. ಸಮಯ ನಿಗದಿಯಾಗಬೇಕು ಅಷ್ಟೇ. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ರಕ್ಷಣೆಗೆ ಪಂಚಾಯ್ತಿ, ಪಾಲಿಕೆಗಳ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ” ಎಂದರು.

ನೀವು ಎಲ್ಲಾ ಕಾರ್ಯಕ್ರಮಕ್ಕೆ ಹೋದರೂ ನಿಮ್ಮ ಅಭಿಮಾನಿಗಳು ನೀವು ಸಿಎಂ ಆಗಬೇಕು ಎಂದು ಕೂಗುತ್ತಿದ್ದಾರೆ ಎಂದು ಕೇಳಿದಾಗ, “ಈಗ ಆ ವಿಚಾರ ಚರ್ಚೆ ಬೇಡ, ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದೇನೆ. ನಮಗೆ ಪಕ್ಷ ಯಾವ ಜವಾಬ್ದಾರಿ ನೀಡಿದೆಯೋ ನಾನು ಆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ” ಎಂದರು.

ಸಿಎಂ ಆಗಲು ನಿಮ್ಮ ಪ್ರಯತ್ನ ಎಂದು ಕೇಳಿದಾಗ, “ನಾವು ನಮ್ಮ ಕಾರ್ಯಕರ್ತರು ಶ್ರಮಿಸಿದ ಕಾರಣಕ್ಕೆ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾರ್ಯಕರ್ತರೇ ನಮ್ಮ ಆಧಾರಸ್ತಂಭ” ಎಂದು ತಿಳಿಸಿದರು.

ನಿಗಮ ಮಂಡಳಿ ಅಧಿಕಾರ ಮುಂದುವರಿಸುವ ಬಗ್ಗೆ ಕೇಳಿದಾಗ, “ಶಾಸಕರಿಗೆ ನೇಮಕ ಮಾಡುವಾಗ 2 ವರ್ಷ ಅಥವಾ ಮುಂದಿನ ಆದೇಶ ಬರುವವರೆಗೆ ಎಂದು ಆದೇಶ ಮಾಡಲಾಗಿತ್ತು. ಅದರಂತೆ ಮುಂದಿನ ಆದೇಶ ಬಂದಾಗ ನೋಡೋಣ” ಎಂದರು.

http://kalpa.news/wp-content/uploads/2024/04/VID-20240426-WA0008.mp4

ಬಹಳ ವರ್ಷಗಳ ಆಹ್ವಾನಗಳ ನಂತರ ಈ ಬಾರಿ ತರಳಬಾಳು ಹುಣ್ಣಿಮೆಯಲ್ಲಿ ಭಾಗಿ

“ಬಹಳ ವರ್ಷಗಳ ನಂತರ ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ನಡೆಯುತ್ತಿದೆ. ಅನೇಕ ವರ್ಷಗಳಿಂದ ನನಗೆ ಆಹ್ವಾನ ನೀಡಲಾಗಿತ್ತಾದರೂ ಕಾರಣಾಂತರಗಳಿಂದ ನಾನು ಬರಲು ಆಗಿರಲಿಲ್ಲ. ಈ ಬಾರಿ ಬರಲು ಒಪ್ಪಿಕೊಂಡೆ. ಈ ಬಾರಿಯೂ ನನಗೆ ವಿಶೇಷ ಅಧಿವೇಶನ ಹಾಗೂ ನನ್ನ ಕ್ಷೇತ್ರದಲ್ಲಿ ಕನಕೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಆದರೂ ಇವುಗಳ ಮಧ್ಯೆ ಇಲ್ಲಿಗೆ ಬಂದಿದ್ದೇನೆ” ಎಂದರು.

“ಕನಕೋತ್ಸವ ಇಡೀ ರಾಜ್ಯಕ್ಕೆ ಮಾದರಿಯ ಉತ್ಸವವಾಗಿದೆ. ಗ್ರಾಮೀಣ ಭಾಗದ ಕಲಾವಿರು, ಜನರು ತಮ್ಮ ಪ್ರತಿಭೆ ತೋರಿಸುವ ಉತ್ಸವವಾಗಿದೆ. ಐದು ಗ್ಯಾರಂಟಿ ಯೋಜನೆಗಳ ಕುರಿತು ಮನೆಗೊಂದು ರಂಗೋಲಿ ಎಂದು ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ 73 ಸಾವಿರ ಜನ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸುಮಾರು 11 ಸಾವಿರ ಮುಸಲ್ಮಾನ ಬಾಂಧವರು ಮೆಹಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಂದು ಸಾವಿರಾರು ಮಕ್ಕಳು ಚಿತ್ರಕಲೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಸುಮಾರು 4300 ಜನ ವಚನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಯೋಗಾಭ್ಯಾಸ ಮಾಡಿದ್ದಾರೆ. ಈ ಮಧ್ಯೆ ನಾನು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ” ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: DCM D K ShivakumarKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsVB Gram G Actಡಿಸಿಎಂ ಡಿ.ಕೆ. ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ

Next Post

ಎತ್ತ ಸಾಗುತ್ತಿದೆ ಸಮಾಜ? 6 ವರ್ಷದ ಬಾಲಕಿ ಮೇಲೆ 10,13, 14 ವರ್ಷದ ಬಾಲಕರಿಂದ ಅತ್ಯಾಚಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎತ್ತ ಸಾಗುತ್ತಿದೆ ಸಮಾಜ? 6 ವರ್ಷದ ಬಾಲಕಿ ಮೇಲೆ 10,13, 14 ವರ್ಷದ ಬಾಲಕರಿಂದ ಅತ್ಯಾಚಾರ

ಎತ್ತ ಸಾಗುತ್ತಿದೆ ಸಮಾಜ? 6 ವರ್ಷದ ಬಾಲಕಿ ಮೇಲೆ 10,13, 14 ವರ್ಷದ ಬಾಲಕರಿಂದ ಅತ್ಯಾಚಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

February 19, 2026
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಲೈಂಗಿಕ ದೌರ್ಜನ್ಯ ಆರೋಪ | ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್‌ ಬಂಧನ

February 19, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ | ಕುಂಸಿ, ಅರಸಾಳು ರೈಲು ಪ್ರಯಾಣಿಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

February 19, 2026
ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

February 19, 2026
ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

February 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL