ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಬಿ.ಶಿವರಾಜ್ ಆಯ್ಕೆಯಾಗಿದ್ದಾರೆ ಎಂದು ಗೌರವಾಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್ ಹೇಳಿದರು.
ಅವರು ಇಂದು ಮೀಡಿಯಾ ಹೌಸ್ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಜ್ಯ ವೇದಿಕೆಯಾಗಿದ್ದು, ರಾಜ್ಯಾಧ್ಯಕ್ಷರ ಅಪ್ಪಣೆ ಮೇರೆಗೆ ರಾಜ್ಯ ಉಪಾಧ್ಯಕ್ಷ ಟಿ.ವಿ. ಬಿಂದುಕುಮಾರ್ ಅವರು ಜಿಲ್ಲಾ ಸಮಿತಿಯನ್ನು ರಚಿಸಿದ್ದಾರೆ ಎಂದರು.
ಸಂಘಟನಾ ವೇದಿಕೆಯು ಸಮಾದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ವೀರಭದ್ರೇಶ್ವರ ಜಯಂತಿಯನ್ನು ಯಶಸ್ವಿಯಾಗಿ ರಾಜ್ಯಾದ್ಯಂತ ಆಚರಿಸಿದೆ. ವೀರಭದ್ರೇಶ್ವರ ಪ್ರಶಸ್ತಿಯನ್ನು ಕೂಡ ನೀಡುತ್ತಾ ಬರುತ್ತಿದ್ದು, ಈ ಬಾಋಇ ಪ್ರಭಾಕರ ಕೋರೆಯವರಿಗೆ ನೀಡಲಾಗಿದೆ ಎಂದರು.
ಯುವಕರನ್ನು ಸಂಘಟಿಸುವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ನ.12 ಮತ್ತು 13ರಂದು ಬಹುದೊಡ್ಡ ಕಾರ್ಯಕ್ರಮ ಹಮ್ಮಿಕೊಂಡಿದೆ. 12ರಂದು ಕಾರ್ಯಾಗಾರ, ನ.13ರಂದು ಯುವಸಮಾವೇಶ ನಡೆಯಲಿದೆ. ಜಿಲ್ಲೆಯಿಂದ ಸುಮಾರು 5 ಸಾವಿರ ಯುವಕರು ಮತ್ತು ಮುಖಂಡರು ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದರು.
ರಾಜ್ಯ ಉಪಾಧ್ಯಕ್ಷ ಬಿಂದುಕುಮಾರ್ ಮಾತನಾಡಿ, ಜಿಲ್ಲಾ ಕಾರ್ಯದರ್ಶಿಯಾಗಿ ನವೀನ್ ವಾರದ್, ಉಪಾಧ್ಯಕ್ಷರಾಗಿ ಉಮೇಶ್ ಹಿರೇಮಠ್, ಪ್ರದೀಪ್ ಎಲಿ, ಉಮೇಶ್ ಕೆ.ಬಿ, ಸಹಕಾರ್ಯದರ್ಶಿಯಾಗಿ ದರ್ಶನ್ ಅವರನ್ನು ಆಯ್ಕೆ ಮಾಡಲಾಗಿದೆ. ವೀರಶೈವ ಲಿಂಗಾಯತರನ್ನು ಒಗ್ಗೂಡಿಸಿ ಸಂಘಟಿಸಿ ಸಮಾಜದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಬಿ. ಶಿವರಾಜ್, ನವೀನ್ ವಾರದ್, ಉಮೇಶ್ ಹಿರೇಮಠ್, ಕೆ.ಬಿ. ಉಮೇಶ್, ದರ್ಶನ್ ಗೌರಮ್ಮ, ಗಂಗಾಧರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post