ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭಾ ಸಾರ್ವತ್ರಿಕ ಚುನಾವಣೆಯ Karnataka Assembly Election ಮತ ಎಣಿಕೆಯು ಮೇ 13 ರಂದು ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯಲಿದ್ದು, ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಸುಗಮ ಸಂಚಾರದ ದೃಷ್ಟಿಯಿಂದ ಅಂದು ತಾತ್ಕಾಲಿಕವಾಗಿ ವಾಹನಗಳ ಸಂಚಾರವನ್ನು ಕೆಳಕಂಡಂತೆ ಬದಲಿ ಮಾರ್ಗದಲ್ಲಿ ಚಲಿಸಲು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ಅಧಿಸೂಚನೆ ಹೊರಡಿಸಿದ್ದಾರೆ.
- ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.
- ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಎಲ್ಲಾ ಬಸ್ಸುಗಳು ಹಾಗೂ ಕಾರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
- ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್ಸುಗಳು ಬಿ.ಹೆಚ್.ರಸ್ತೆ ಮಾರ್ಗವಾಗಿ ಬಸ್‍ಸ್ಟ್ಯಾಂಡ್‍ಗೆ ಹೋಗುವುದು.
- ಹೊನ್ನಾಳಿ ದಾವಣಗೆರೆಯಿಂದ ಬರುವ ಭಾರೀ ವಾಹನ, ಎಲ್ಲಾ ಬಸ್‍ಗಳು 100 ಅಡಿ ರಸ್ತೆ, ವಿನೋಬನಗರ ಮಾರ್ಗವಾಗಿ ಹೋಗುವುದು.
- ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‍ಗಳು ಎಎ ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಹೋಗುವುದು.
- ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು ಭದ್ರಾವತಿ ಎನ್.ಆರ್.ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
- ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ.
- ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು ಮತ್ತು ವಜ್ರ ಮಹೋತ್ಸವ ಕಟ್ಟಡದ ಎದುರು ಪಾರ್ಕಿಂಗ್‍ಗೆ ಅನುಮತಿ ನೀಡಿದೆ.
Also read: ಏನಿದು ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಮಾದರಿ ಮತಗಟ್ಟೆಗಳು? ಇವು ಎಲ್ಲೆಲ್ಲಿ ಇವೆ?
- ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಬಿ.ಹೆಚ್.ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ವಾಹನ ನಿಲುಗಡೆಗೆ ಅನುಮತಿ ನೀಡಿದೆ.
- ಎಂ.ಆರ್.ಎಸ್.ಸರ್ಕಲ್‍ನ ಹತ್ತಿರವಿರುವ ಕೆಇಬಿ ಸಮುದಾಯ ಭವನದ ಹಿಂಭಾಗ ವಾಹನಗಳ ನಿಲುಗಡೆಗೆ ಅನುಮತಿ ನೀಡಿದೆ.
- ಸಾರ್ವಜನಿಕರ ಕಾರು ಮತ್ತು ದ್ವಿಚಕ್ರ ವಾಹನಗಳ ನಿಲುಗಡೆಗೆ ಎಂಆರ್‍ಎಸ್ ನಿಂದ ಎನ್.ಆರ್.ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್‍ಗೆ ಅನುಮತಿ ನೀಡಿದೆ.
- ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ಹತ್ತಿರ ಸಾರ್ವಜನಿಕರ ಎಲ್ಲಾ ವಾಹನಗಳ ನಿಲುಗಡೆಗೆ ಅನುಮತಿ ನೀಡಿದೆ.
- ಎಂ.ಆರ್.ಎಸ್.ಸರ್ಕಲ್ ನಿಂದ ಬಿ.ಹೆಚ್.ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್‍ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇಧಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post