ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪತ್ರಿಕೋದ್ಯಮದಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದ, ನೇರ ನುಡಿಯ ದಿಟ್ಟ ಪತ್ರಕರ್ತ ಚೂಡಾನಾಥ ಅಯ್ಯರ್ (78) ಅವರು ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ತನ್ನ ಪುತ್ರನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಚಿಕ್ಕಮಗಳೂರಿಗೆ ತರಲಾಗುತ್ತಿದ್ದು, ಬಸವನಹಳ್ಳಿಯ ಸ್ವಗೃಹದಲ್ಲಿ ಇಂದು ಬೆಳಗ್ಗೆ ಅವಕಾಶ ಕಲ್ಪಿಸಲಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಸ್ನೇಹಿತರನ್ನು ಅಗಲಿದ್ದಾರೆ.
Also read: ಶಿವಮೊಗ್ಗ: ದುಷ್ಕರ್ಮಿಗಳಿಂದ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ
ಪತ್ರಕರ್ತ ಚೂಡಾನಾಥ ಅಯ್ಯರ್ ಅವರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಾಜ್ಯ ಸಣ್ಣ ಪತ್ರಿಕೆಗಳ ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಮತ್ತು ವಿವಿಧ ಸಂಘ ಸಂಸ್ಥೆಗಳ ಒಡನಾಡಿಯಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಪತ್ರಿಕಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಅವರಿಗೆ ಸಂದಿವೆ.
ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರಾಗಿ ಕೆಲಸ ಮಾಡಿದ್ದ ಚೂಡಾನಾಥ್ ಅಯ್ಯರ್ ರವರು ತುರ್ತು ಪರಿಸ್ಥಿತಿಯ ಸಮಯದಲ್ಲಿ ಜೈಲುವಾಸವನ್ನು ಅನುಭವಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post