ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ #K S Eshwarappa ಇಂದು ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾವಣೆ ಮಾಡಿದರು.
ಮತದಾನ ಮಾಡಿದ ಬಳಿಕ ಹೇಳಿಕೆ ನೀಡಿದ ಅವರು, ನನ್ನ ವಿರುದ್ಧ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಅಪ್ರಚಾರ ನಡೆಸುತ್ತಿದ್ದಾರೆ. ನಾನು ಈ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂದು ಭಯಗೊಂಡಿರುವ ಅವರು ಈ ರೀತಿ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.

ವಾಪ್ಸಪ್ ಸಂದೇಶ ರವಾನಿಸುವುದರ ಮೂಲಕ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ನನ್ನ ವಿರುದ್ಧ ನಿರಂತರ ಷಡ್ಯಂತ್ರ ಮಾಡಿದ್ದಾರೆ. ನನ್ನ ಬೆಂಬಲ ಬಿಜೆಪಿಗೆ ಎಂದು ಘೋಷಣೆ ಮಾಡಿರುವಂತೆ ವಿಡಿಯೋ ಹಾಗೂ ಸುದ್ಧಿ ಹಾಕುತ್ತಿದ್ದಾರೆ. ಕಾಂಗ್ರೆಸ್ ಗೆ ಯಾರೂ ಮತ ಚಲಾಯಿಸಬೇಡಿ, ನಾನು ನನ್ನ ಮಾತೃ ಪಕ್ಷಕ್ಕೆ ಬೆಂಬಲಿಸುತ್ತಿದ್ದೇನೆ. ನನಗೆ ನನ್ನ ತಪ್ಪಿನ ಅರಿವಾಗಿದೆ. ಹೀಗಾಗಿ ಬಿಜೆಪಿಗೆ ಬೆಂಬಲಿಸುತ್ತಿದ್ದೇನೆ ಎಂಬ ಫೇಕ್ ವಿಡಿಯೋ ವೈರಲ್ ಮಾಡಲಾಗುತ್ತಿದೆ. ಸೋಲುವ ಭಯದಿಂದ ಈ ರೀತಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿರುದ್ಧ ಈಶ್ವರಪ್ಪ ಅಕ್ರೋಶ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post