ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೌಲ್ಯಾಧಾರಿತ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಶಿವಮೊಗ್ಗ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಜೈನ್ ಪಬ್ಲಿಕ್ ಶಾಲೆಯಲ್ಲಿ ಇಂದು ಸಾಂಪ್ರದಾಯಿಕವಾಗಿ “ವಿದ್ಯಾರಂಭಂ” ಅಕ್ಷರಭ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ವಿಘ್ನ ನಿವಾರಕ ಗಣಪತಿಯನ್ನು ಪ್ರಾರ್ಥಿಸುತ್ತ ವಿದ್ಯೆಯ ಅಧಿದೇವತೆಯಾದ ಶಾರದಾಂಬೆಯನ್ನು ಸ್ಮರಿಸುತ್ತ ಶಾಲೆಯ ಪುಟಾಣಿ ಮಕ್ಕಳಿಗೆ ಶಾರದಾ ದೇವಿಯ ಪೂಜೆಯ ಜೊತೆಗೆ ಅಕ್ಷರಾಭ್ಯಾಸವನ್ನು ನೆರವೇರಿಸಲಾಯಿತು.
ಅಕ್ಷರಾಭ್ಯಾಸ ಕಾರ್ಯಕ್ರಮದ ಭಾಗವಾಗಿ ನಿನ್ನೆ ಕೂಡ್ಲಿ ಶ್ರೀ ಕ್ಷೇತ್ರ “ಶ್ರೀ ಶಾರದಾ ದೇವಿ “ಸನ್ನಿಧಾನದಲ್ಲಿ ಪ್ರತಿ ಮಗುವಿನ ಹೆಸರಿನಲ್ಲಿ ಸಂಕಲ್ಪಮಾಡಿ, ಆ ಪ್ರಸಾದವನ್ನು ಎಲ್ಲಾ ವಿದ್ಯಾರ್ಥಿಗಳಿಗೆ ವಿನಿಯೋಗ ಮಾಡಲಾಯಿತು. ಹಾಗೂ ಪೋಷಕರಿಗೆ ಶಾಲೆಯ ಪರಿಚಯಾತ್ಮಕ ಕಾರ್ಯಕ್ರಮವನ್ನು ನೀಡುವುದರ ಜೊತೆಗೆ ಪ್ರತಿ ಪೋಷಕರಿಗೂ ಗಿಡವನ್ನು ಉಡುಗರೆಯಾಗಿ ನೀಡುವ ಮೂಲಕ ಅತ್ಯಂತ ಅರ್ಥಗರ್ಭಿತವಾಗಿ ವಿದ್ಯಾರಂಭಂ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಪ್ರಿಯದರ್ಶಿನಿ, ಸಂಯೋಜಕರು ದಿವ್ಯ ಶೆಟ್ಟಿ , ಸಿಇಒ ಸುಮಂತ್, ಸೌಲಭ್ಯ ವ್ಯವಸ್ಥಾಪಕರು ವಿಜಯಕುಮಾರ್, ಪೋಷಕರು, ಶಿಕ್ಷಕರು, ಶಿಕ್ಷಕೇತರ ವರ್ಗದವರು ಪಾಲ್ಗೊಂಡಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















