ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೈಸೂರು ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಅವರನ್ನು ಬೆಂಗಳೂರಿನಲ್ಲಿಯೇ ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ತುಘಲಕ್ ನೀತಿಯೂ #Tughluq Policy ಸಹ ಆಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಕಿಡಿ ಕಾರಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದಧ ಬಿಜೆಪಿ ನಾಯಕರು ಬೆಂಗಳೂರಿನಲ್ಲಿಂದು ಮೈಸೂರು ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಬಿ.ವೈ. ವಿಜಯೇಂದ್ರರವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ ಎಂದು ದೂರಿದ್ದಾರೆ.
Also read: ಜುಲೈ 21ರಿಂದ ಕೂಡಲಿ ಶೃಂಗೇರಿ ಮಹಾಸಂಸ್ಥಾನದ ಉಭಯ ಜಗದ್ಗುರುಗಳ ಚಾರ್ತುಮಾಸ

ಕಾಂಗ್ರೆಸ್ ಪಕ್ಷದ ಮುಖಂಡರುಗಳಿಗೆ ಅನುಕೂಲವಾಗುಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದು ಅಕ್ಷಮ್ಯ ಅದೇ ರೀತಿ ಹೋರಾಟ ಹತ್ತಿಕ್ಕುವುದು ಸಹ ಅಕ್ಷಮ್ಯ ಅಪರಾಧ. ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ಸರ್ಕಾರವೋ ಅಥವಾ ತುಘಲಕ್ ನೀತಿಯ ಸರ್ಕಾರವೋ ಎಂಬ ಅನುಮಾನ ಮೂಡಿದೆ ಎಂದು ಕಿಡಿ ಕಾರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post