ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡಬೇಕು ಎಂಬುದು ಕಾರ್ಯಕರ್ತರ ಬಯಕೆಯಾಗಿದ್ದು, ಅಂತಿಮ ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಹಾಗೂ ಗ್ರಾಮಾಂತರ ಚುನಾವಣಾ ಕಾರ್ಯಾಲಯ ಉದ್ಘಾಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡಬೇಕು ಎಂಬುದು ಕಾರ್ಯಕರ್ತರ ಬಯಕೆಯಾಗಿದೆ. ಈ ಕುರಿತಂತೆ ಮನವಿಯನ್ನು ವರಿಷ್ಠರಿಗೆ ಸಲ್ಲಿಸಲಾಗಿದೆ. ಮುಂದಿನ 24 ಗಂಟೆಯೊಳಗೆ ಇದಕ್ಕೆ ಉತ್ತರ ದೊರೆಯಲಿದೆ ಎಂದರು.
8 ಕ್ಷೇತ್ರಗಳಲ್ಲೂ ಗೆಲುವಿನ ವಿಶ್ವಾಸ
ಇನ್ನು, ಈ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಹಾಗೂ ಜಿಲ್ಲೆಯ 7 ಕ್ಷೇತ್ರಗಳೂ ಸೇರಿದಂತೆ 8 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಐದು ವರ್ಷದಲ್ಲಿ ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳು, ಕಾರ್ಯಕರ್ತರ ಶ್ರಮ ಹಾಗೂ ಉತ್ತಮ ಸಂಘಟನೆಯ ಪರಿಣಾಮವಾಗಿ ಎಲ್ಲ ಎಂಟೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















