ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯದಲ್ಲಿ ಜಾರಿಯಲ್ಲಿರುವ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ನೀಡಿರುವ ಆರೋಪದ ಮೇಲೆ ಜಲಪಾತದ ಅಧಿಕಾರಿಗಳು, ಸಿಬ್ಬಂದಿಗಳ ಮೇಲೆ ಡಿಸಿ ಸೂಚನೆ ಮೇರೆಗೆ ಪೊಲೀಸರ ವಿಶೇಷ ತಂಡ ದಾಳಿ ನಡೆಸಿ, 7 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು ಅಥವಾ ಎರಡನೇ ಡೋಸ್ ಲಸಿಕೆ ಪಡೆದಿರಬೇಕು ಎಂದು ಡಿಸಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದರೆ ಇಲ್ಲಿನ ಭದ್ರತಾ ಸಿಬ್ಬಂದಿಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಿದ್ದರು.
ಜೋಗ ಗೇಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳ ನಿರ್ಲಕ್ಷ್ಯದ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಬಂದಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದ್ದರು. ಅದರಂತೆ ಸಾಗರ ಡಿವೈಎಸ್‌ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ದಾಳಿಗೆ ಸೂಚಿಸಿದ್ದರು.
ಪ್ರವಾಸಿಗರ ರೂಪದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು:
ಪೊಲೀಸರ ವಿಶೇಷ ತಂಡ ಪ್ರವಾಸಿಗರಂತೆ ಜೋಗ ಜಲಪಾತ ವೀಕ್ಷಣೆಗೆ ತೆರಳಿದ್ದರು. ಇವರಿಗೆ ಕೋವಿಡ್ ನೆಗೆಟಿವ್ ವರದಿ ಯಾಗಲಿ, ಲಸಿಕೆ ಪಡೆದ ಬಗ್ಗೆ ದಾಖಲೆಗಳನ್ನಾಗಲಿ ವಿಚಾರಿಸಲಿಲ್ಲ. ನೇರವಾಗಿ ಜಲಪಾತ ವೀಕ್ಷಣೆಗೆ ಕಳುಹಿಸಲಾಗಿತ್ತು. ಕೂಡಲೇ ಸೆಕ್ಯೂರಿಟಿ ಗಾರ್ಡ್ ಮತ್ತು ಅಂಗಡಿ ಮಾಲೀಕರೊಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.
ಜೋಗದ ಸೆಕ್ಯೂರಿಟಿಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳು ಮತ್ತು ಗೈಡ್ ಒಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಚಂದ್ರಶೇಖರ್ ಹಾಗೂ ಹೋಂ ಗಾರ್ಡ್‌ಗಳಾದ ಮಂಜುನಾಥ, ಕೃಷ್ಣಪ್ಪ, ಮಂಜುನಾಥ, ಸೆಕ್ಯೂರಿಟಿ ಗಾರ್ಡ್‌ಗಳಾದ ರಾಕೇಶ, ಪ್ರಭುದಾಸ, ಅಂಗಡಿ ಮಾಲೀಕ ಸಂಜು ಅಲಿಯಾಸ್ ಮಂಜುನಾಥ್ ಎಂಬುವವರ ವಿರುದ್ಧ ಜೋಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post