ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಳದಲ್ಲಿ ಇಂದು ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣವನ್ನು ದಾಖಲಿಸಿ ದಂಡ ವಿಧಿಸಲಾಯಿತು. ಒಟ್ಟು 16 ಪ್ರಕರಣಗಳನ್ನು ದಾಖಲಿಸಿ,1580 ರೂ ದಂಡವನ್ನು ಸಂಗ್ರಹಿಸಲಾಯಿತು.
ಇದೇ ಸಂದರ್ಭದಲ್ಲಿ ಕೋವಿಡ್ ಸುರಕ್ಷಾ ಕ್ರಮಗಳ ಕುರಿತು ಅರಿವನ್ನು ಮೂಡಿಸಲಾಯಿತು. ಕಾರ್ಯಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ರವಿರಾಜ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post