ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವ ಹಿಂದು ಪರಿಷದ್ ಧರ್ಮಪ್ರಸರ ಪ್ರಮುಖ ಕೃಷ್ಣಮೂರ್ತಿ (42) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ತೀವ್ರ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಕೃಷ್ಣಮುರ್ತಿ, ತಮ್ಮ ನೇತ್ರಗಳನ್ನು ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

ಕೃಷ್ಣಮೂರ್ತಿ ಅವರ ಅಕಾಲಿಕ ಸಾವಿನಿಂದ ಕುಟುಂಬ, ಬಂಧುಮಿತ್ರರು ಹಾಗೂ ವಿಶ್ವ ಹಿಂದು ಪರಿಷದ್ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ. ಅವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಅವರ ಧಾರ್ಮಿಕ ಕಳಕಳಿ, ರಾಷ್ಟ್ರೀಯ ಚಿಂತನೆ ಮತ್ತು ಸಮರ್ಪಿತ ಸೇವಾ ಮನೋಭಾವವು ನಗರದ ಹಲವರಲ್ಲಿ ಪ್ರೇರಣೆಯಾಗಿ ಉಳಿದಿದೆ. ಈ ಸಂದರ್ಭ ವಿವಿಧ ಹಿಂದೂ ಸಂಘಟನೆಗಳು, ಸ್ಥಳೀಯ ಸಂಘಸಂಸ್ಥೆಗಳು ಹಾಗೂ ನಾಗರಿಕರು ಶೋಕ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post