ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ ಎಂದು ಶಾಸಕ ಪ್ರದೀಪ್ ಈಶ್ವರ್ #MLA Pradeep Eshwar ಹೇಳಿದರು.
ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದರ್ ಕೇರಿ, ಪೊಲೀಸ್ ಚೌಕಿ ಫೈಓವರ್ ನಿಂದ ಕಾಶಿಪುರ, ಹಾಲ್ಗೊಳ ವೃತ್ತ, ಗಾಡಿಕೊಪ್ಪ ಪುನಃ ಹಾಲ್ಗೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ ಮುಖ್ಯರಸ್ತೆ, ಟಿಪ್ಪು ನಗರ ಮುಖ್ಯರಸ್ತೆ ಮೂಲಕ ಅಣ್ಣಾನಗರ ಮಿಳಗಟ್ಟ, ಇಂದಿರಾ ಕ್ಯಾಂಟೀನ್ ಮುಂಭಾಗದಿಂದ, ಕೆ.ಎಸ್.ಆರ್.ಟಿ.ಸಿ. ಮುಂಭಾಗದಿಂದ, ಡಬಲ್ ರೋಡ್, ಎನ್.ಟಿ. ರಸ್ತೆ ಬಲಭಾಗದವರೆಗೆ ಹರಕೆರೆ, ಕುರುಬರ ಪಾಳ್ಯದಿಂದ ಸೀಗೇಹಳ್ಳಿ ವೃತ್ತದವರೆಗೆ ನಡೆದ ರೋಡ್ ಷೋನಲ್ಲಿ ಪಾಲ್ಗೊಂಡು ಮಾತನಾಡಿದರು.
ಕರ್ನಾಟಕದ ಚರಿತ್ರೆಯ ಮೊದಲ ಪುಟ ಶಿವಮೊಗ್ಗ ಜಿಲ್ಲೆಯಿಂದ ಆರಂಭವಾಗುತ್ತದೆ. ಇಲ್ಲಿ ಜನ ಸಮಾನ್ಯರಿಗೆ ಸೇವೆ ಒದಗಿಸಲು ಗೀತಕ್ಕ ಉತ್ತಮ ನಾಯಕಿ, ಆದ್ದರಿಂದ ಈ ಭಾರಿ ಗೀತಕ್ಕಗೆ ಮತ ನೀಡಿ ಆಶೀರ್ವದಿಸಿ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ #Geetha Shivarajkumar ಮಾತನಾಡಿ, ಸಮಾಜದಲ್ಲಿ ಬಡತನ, ಹಸಿವು, ಅಸಮಾನತೆಯ ಪಿಡುಗು ನಿವಾರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ದುಡಿಯುತ್ತಿದೆ. ಅದೇ ಉದ್ದೇಶಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ’ ಎಂದರು.
ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಶೋಷಿತ ವರ್ಗದವರನ್ನು ಮುಖ್ಯ ವಾಹಿನಿಗೆ ಕರೆತರುವುದು. ಅದು ಖಂಡಿತ ನೆರವೇರಲಿದೆ. ಅದೇ ರೀತಿ, ಗ್ಯಾರಂಟಿಗಳು ಬಡವರ ಮನೆ ಬಾಗಿಲಿಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ತಲುಪುತ್ತಿವೆ. ಇದಕ್ಕೆ ನ್ಯಾಯ ಒದಗಿಸಲು ಎಲ್ಲರೂ ಕೈ ಜೋಡಿಸಬೇಕು. ಆದ್ದರಿಂದ, ಈ ಭಾರಿ ಮತ ನೀಡಿ ಆಶೀರ್ವದಿಸಿ ಎಂದರು.
Also read: ಸಕ್ಕರೆ ಕಾರ್ಖಾನೆ ಜಾಗ ವಶಪಡಿಸಿಕೊಳ್ಳಲು ಬಿಡಲ್ಲ: ರೈತರಿಗೆ ಮಾಜಿ ಡಿಸಿಎಂ ಈಶ್ವರಪ್ಪ ಭರವಸೆ
ನಟ ದುನಿಯಾ ವಿಜಯ್ #Duniya Vijay ಮಾತನಾಡಿ, ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರು ನೀಡಿದ ಕೊಡುಗೆ ಜನ ಮಾನಸದಲ್ಲಿ ಉಳಿದಿವೆ. ಅದೇ ರೀತಿ, ಗೀತಕ್ಕ ಕೂಡ ಜನಪರ ಆಡಳಿತ ನಡೆಸಿ, ಎಲ್ಲರೂ ಮೆಚ್ಚುವಂತಹ ನಾಯಕಿಯಾಗಿ ಹೊರಹೊಮ್ಮಲಿದ್ದಾರೆ. ಆದ್ದರಿಂದ, ಈ ಭಾರಿ ಒಂದು ಅವಕಾಶ ಕಲ್ಪಿಸಿಕೊಡಿ ಎಂದರು.
ತರಿಕೆರೆ ಶಾಸಕ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.
ನಟ ಶಿವರಾಜಕುಮಾರ, #Shivarajkumar ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ರವಿಕುಮಾರ್, ಕಾಂಗ್ರೆಸ್ ಮುಖಂಡರಾದ ಎನ್.ರಮೇಶ್, ಮರಿಯಪ್ಪ, ಎಚ್.ಸಿ.ಯೋಗೀಶ್, ರೇಖಾ ರಂಗನಾಥ, ಎಚ್.ಪಿ. ಗಿರೀಶ್, ಶರತ್ ಮರಿಯಪ್ಪ ಸೇರಿ ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post