ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ, ನ್ಯೂ ಹಾಟ್ ವೀಲ್ಹ್ ಸ್ಕೇಟಿಂಗ್ ಸಂಸ್ಥೆಯು ಏ. 10ರ ಬೆಳಿಗ್ಗೆ 10 ಗಂಟೆ 10 ನಿಮಿಷ 10 ಸೆಕೆಂಡಿಗೆ ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಆವರಣದಿಂದ ಆಯೋಜಿಸಿದೆ.
ಬೆಳಿಗ್ಗೆ 9.30ಕ್ಕೆ ನಡೆಯಲಿರುವ ಮತದಾರರ ಜಾಗೃತಿ ಸಭಾ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಷ ಗೌಡ ಉದ್ಘಾಟಿಸಲಿದ್ದಾರೆ. ಸಂಪಾದಕರ ಸಂಘದ ಅಧ್ಯಕ್ಷ ಜಿ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ.

Also read: ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನದ ಸರ, ನಗದು ಕಳ್ಳತನ: ದೂರು ದಾಖಲು
ಕಾರ್ಯಕ್ರಮದಲ್ಲಿ ನಗರಪಾಲಿಕೆಯ ಸ್ವೀಪ್ ಸಮಿತಿ, ಸಂಪಾದಕರ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಸ್ಕೇಟಿಂಗ್ ಸಂಸ್ಥೆಯ ಪದಾಧಿಕಾರಿಗಳು, ಪೋಷಕರು, ಪಟುಗಳು, ಪತ್ರಕರ್ತರು ಸಾರ್ವಜನಿಕರು ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ಸ್ಕೇಟಿಂಗ್ ಪಟುಗಳು 99020 53200 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಕಾರ್ಯಕ್ರಮಕ್ಕೆ ಸರ್ವರನ್ನು ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಕೆ ಗಜೇಂದ್ರ ಸ್ವಾಮಿ, ಸ್ಕೇಟಿಂಗ್ ಸಂಸ್ಥೆಯ ಕಾರ್ಯದರ್ಶಿ ಎಂ ರವಿ ಸ್ವಾಗತಿಸಿದ್ದಾರೆ.












Discussion about this post