ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈರುತ್ಯ ಕ್ಷೇತ್ರದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಈ ಬಾರಿ ಗೆಲ್ಲಿಸುತ್ತಾರೆ ಎಂದು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ #Ayanuru Manjunath ಹೇಳಿದರು.
ಅವರು ಇಂದು ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕಾರ್ಯಪಾಲಕ ಅಭಿಯಂತರ ಕಚೇರಿಯಲ್ಲಿ ಮತದಾನ ಮಾಡಿ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದರು.
ಪದವೀಧರರ ಮತ್ತು ಅತಿಥಿ ಉಪನ್ಯಾಸಕರ ಪರವಾಗಿ ನಾನು ಹೋರಾಟ ಮಾಡುತ್ತಲೇ ಬಂದಿದ್ದೇನೆ. ಕಾರ್ಮಿಕರ ಸಮಸ್ಯೆಗಳನ್ನು ಅರಿತಿದ್ದೇನೆ. ಹಳೆಪಿಂಚಣಿ ಜಾರಿಗೆ, ಒತ್ತಾಯ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿಯೇ ಹಳೆ ಪಿಂಚಣಿ ವ್ಯವಸ್ಥೆ ಮತ್ತು ಉಪನ್ಯಾಸಕರ ಶಿಕ್ಷಕರ ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದೆ. ಇದು ನನಗೆ ಅನುಕೂಲಕರವಾಗಿದೆ ಎಂದರು.
Also read: ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ
ನೈರುತ್ಯ ಪದವೀಧರ ಕ್ಷೇತ್ರದ ಎಲ್ಲಾ ಕಡೆಗಳಲ್ಲಿಯೂ ಮತದಾನ ಬಿರುಸಾಗಿಯೇ ನಡೆದಿದೆ. ಈ ಬಾರಿ ಹೆಚ್ಚಿನ ಮತದಾನವಾಗುವ ನಿರೀಕ್ಷೆ ಇದೆ. ನಾನು ಸೇರಿದಂತೆ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಡಾ.ಕೆ.ಕೆ. ಮಂಜುನಾಥ್‍ಕುಮಾರ್ ಗೆಲ್ಲುವುದು ಖಚಿತ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post