No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

kalpa News by kalpa News
April 18, 2026
in ಶಿವಮೊಗ್ಗ
0
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂಸತ್ತಿನಲ್ಲಿ ಶುಕ್ರವಾರ ಮಂಡನೆಯಾದ ನಾರಿಶಕ್ತಿ ವಂದನಾ ಅಧಿನಿಯಮದ Nari Shakti Vandana Act ವಿರುದ್ಧ ಇಂಡಿ (ಐಎನ್‍ಡಿಐಎ) ಒಕ್ಕೂಟ ಮತ ಚಲಾಯಿಸಿದ್ದು, ಇದು ಭಾರತದಲ್ಲಿರುವ ಪ್ರತಿ ಮಹಿಳೆಗೆ ಮಾಡಿದ ಅಪಮಾನ. ಮುಂದಿನ ದಿನಗಳಲ್ಲಿ ಎನ್‍ಡಿಎ ಸರ್ಕಾರವೇ ಈ ಮಹಿಳಾ ಮಸೂದೆಯನ್ನು ಜಾರಿಗೊಳಿಸುವುದು ಶತಃ ಸಿದ್ಧ ಎಂದು ಬಿಜೆಪಿ ಶಪಥ ಮಾಡಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಿಳೆಯರಿಗೆ ರಾಜಕೀಯ ಶಕ್ತಿ ನೀಡಬೇಕು. ಈ ಮೂಲಕ ದೇಶವನ್ನು ಸುಭದ್ರವಾಗಿ ಕಟ್ಟಬೇಕು ಎಂಬುದು ನರೇಂದ್ರಮೋದಿ PM Narendra Modi ನೇತೃತ್ವದ ಸರ್ಕಾರದ ಆಶಯವಾಗಿತ್ತು. ಆದರೆ ಕಾಂಗ್ರೆಸ್ ಈ ಮಸೂದೆಗೆ ಬೆಂಬಲ ನೀಡದೆ ಅಗೌರವ ತೋರಿಸಿದ್ದು ಕಾಂಗ್ರೆಸ್ ತನ್ನಷ್ಟಕ್ಕೆ ತಾನೇ ಬೆತ್ತಲೆಯಾಗಿದೆ. ಕಾಂಗ್ರೆಸ್‍ಗೆ ಮಹಿಳೆಯರ ಶಾಪ ತಟ್ಟದೇ ಬಿಡುವುದಿಲ್ಲ ಎಂದ ಅವರು, ಸಂವಿಧಾನಕ್ಕೆ ಚ್ಯುತಿ  ಬರದಂತೆ ಈ ಮಸೂದೆ ಮಂಡನೆಯಾಗಿದ್ದು, ಇದಕ್ಕೆ ಕಾಂಗ್ರೆಸ್ ದ್ರೋಹ ಬಗೆದಿದೆ ಎಂದು ಟೀಕಾಪ್ರಹಾರ ಮಾಡಿದರು.
ಲಿಂಗಾಧಾರಿತವಾಗಿ ಮೀಸಲಾತಿ ನಿಗಧಿಪಡಿಸಬಹುದೇ ಹೊರತು, ಧರ್ಮಾಧಾರಿತವಾಗಿ ಮೀಸಲಾತಿ ನೀಡಲೇಬಾರದು ಎಂದರು.

ಡಾ.ಬಿ.ಆರ್.ಅಂಬೇಡ್ಕರ್‍ರವರೇ ಸ್ಪಷ್ಟಪಡಿಸಿದ್ದಾರೆ. ಆದರೆ ಧರ್ಮದ ಆಧಾರದಲ್ಲಿ ದೇಶ ವಿಭಜನೆ ಮಾಡಿದ ಕಾಂಗ್ರೆಸ್ ಮುಸಲ್ಮಾನ್ ಮಹಿಳೆಯರಿಗೆ ಮಸೂದೆಯಲ್ಲಿ ಪ್ರತ್ಯೇಕ ಮೀಸಲಾತಿ ಉಲ್ಲೇಖಿಸಿಲ್ಲ ಎಂದು ಅಸಹಕಾರ ತೋರಿ ವಿರೋಧಿಸಿರುವುದು ಕಾಂಗ್ರೆಸ್‍ನ ಸ್ವಭಾವ. ಇಲ್ಲಿಯವರೆಗೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಸಿಎಎ, ತ್ರಿವಳಿ ತಲಾಕ್ ರದ್ಧತಿ, ಜಮ್ಮು-ಕಾಶ್ಮೀರದ 370ನೇ ವಿಧಿ ರದ್ಧತಿ, ವಕ್ಫ್ ತಿದ್ದುಪಡಿ ಕಾಯ್ದೆ, ಮೂರು ಹೊಸ ಕ್ರಿಮಿನಲ್ ಕಾಯ್ದೆ ಸೇರಿದಂತೆ ಈಗ ನಾರಿವಂದನಾ ವಿಧೇಯಕ ಮಂಡಿಸಿದ್ದು ಇವೆಲ್ಲವನ್ನು ಕಾಂಗ್ರೆಸ್ ವಿರೋಧಿಸುತ್ತಲೇ ಬಂದಿದೆ. ಸುಳ್ಳುಸುದ್ಧಿ ಹರಡುವ ಮೂಲಕ ದೇಶದ ಮಹಿಳೆಯರಿಗೆ, ಸಂವಿಧಾನಕ್ಕೆ ಚ್ಯುತಿ ತರುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಇದೊಂದು ಇಂಡಿ ಒಕ್ಕೂಟದ ಕುಕೃತ್ಯ ಎಂದು ಅವರು ಕಿಡಿಕಾರಿದರು.

ನಾರಿಶಕ್ತಿ ವಂದನಾ ವಿಧೇಯಕವನ್ನು ಸೋಲಿಸುವುದರ ಮೂಲಕ ಪ್ರತಿಪಕ್ಷದವರು ಯುದ್ಧ ಗೆದ್ದಿದ್ದೇವೆ ಎಂಬ ಸಂಭ್ರಮದಲ್ಲಿರುವ ಕಾಂಗ್ರೆಸ್‍ಗೆ ಜನರೇ ತಕ್ಕಪಾಠ ಕಲಿಸುತ್ತಾರೆ. ಈ ಹಿಂದೆ ನೆಹರೂ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿದ್ದ ಶ್ರೀಮತಿ ರೇಣುಕಾ ರೇ, ಸರೋಜನಿ ನಾಯ್ಡು ಮೊದಲಾದವರೇ ಮಹಿಳಾ ಮಸೂದೆ ಜಾರಿಗೆ ದಶಕಗಳ ಹೋರಾಟ ನಡೆಸಿದ್ದರು. ಬಳಿಕ 1974ರಲ್ಲಿ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಸಮಿತಿಯೊಂದನ್ನು ರಚಿಸಿ ವರದಿಯೊಂದನ್ನು ತರಿಸಿಕೊಂಡು ಸ್ಥಳೀಯ ಚುನಾವಣೆಗಳಲ್ಲಿ ಮಹಿಳೆಯರಿಗೆ ಪ್ರಾತ್ಯನಿಧ್ಯ ಕೊಡುವಲ್ಲಿಯೂ   ಕಾಂಗ್ರೆಸ್ ವಿಫಲವಾಗಿದೆ.
1993ರಲ್ಲಿ 1974ರ ಕಾಯ್ದೆಗೆ ತಿದ್ದುಪಡಿ ನಿರ್ಣಯ ತರಲಾಗಿತ್ತು. ಆಗಲೂ ಮಹಿಳಾ ಮೀಸಲು ಮಸೂದೆ ಜಾರಿಗೊಳಿಸಲು ಕಾಂಗ್ರೆಸ್ ಪ್ರಯತ್ನಿಸಲಿಲ್ಲ. ತದನಂತರ ಪ್ರಧಾನಿ ಹೆಚ್.ಡಿ.ದೇವೇಗೌಡ ಸರ್ಕಾರದಲ್ಲಿ ಇದಕ್ಕೆ ಪ್ರಯತ್ನ ನಡೆದಿತ್ತು. ಆಗಲೂ ಕಾಂಗ್ರೆಸ್ ಬೆಂಬಲ ನೀಡಿಲ್ಲ. 1999-2004ರ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ನಾಲ್ಕು ಭಾರೀ ಮಹಿಳಾ ಮಸೂದೆ ಮಂಡನೆಯಾದರೂ ಕಾಂಗ್ರೆಸ್ ಅದನ್ನು ವಿರೋಧಿಸುತ್ತಲೇ ಬಂದಿದೆ. 2004-2014ರ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಮಹಿಳೆಯರಿಗೆ ಮೀಸಲು   ನೀಡುವ ಯೋಚನೆಯನ್ನೇ ಮಾಡಲಿಲ್ಲ. 2014-2019ರ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಮಹಿಳಾ ಮೀಸಲಿಗೆ ವಾಗ್ಧಾನ ಮಾಡಿತ್ತು. ಕೊಟ್ಟ ಮಾತಿನಂತೆ ನಡೆದುಕೊಂಡ ಎನ್‍ಡಿಎ ಸರ್ಕಾರ 2021ರಲ್ಲಿ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಅನ್ವಯ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ ಅಂಗೀಕಾರ ಪಡೆದಿತ್ತು. ಈಗ ಮತ್ತೆ ಮಂಡನೆಯಾದ ನಾರಿಶಕ್ತಿ ವಂದನಾ ಅಧಿನಿಯಮ -ಮಹಿಳಾ ಮಸೂದೆಗೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಬೆಂಬಲಿಸದೆ ಅಸಹಕಾರ ತೋರಿಸುವುದರ ಮೂಲಕ ನ್ಯಾಯಾಲಯ ನಿಂದನೆಯನ್ನೂ ಮಾಡಿದೆ ಎಂದು ಹರಿಹಾಯ್ದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಹರಿಕೃಷ್ಣ, ಶಿವರಾಜ್, ಎಂ.ಜೆ. ನಾಗರಾಜ್, ರಶ್ಮೀ ಶ್ರೀನಿವಾಸ್, ಮಂಜುನಾಥ್, ದೀನ್‍ದಯಾಳ್, ಸುರೇಖಾ ಮುರಳೀಧರ್, ನಿರ್ಮಲಾ ಪ್ರಕಾಶ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNari Shakti Vandana ActNews in KannadaNews KannadaPM Narendra ModiShimogaShivamoggaNewsನಾರಿಶಕ್ತಿ ವಂದನಾ ಅಧಿನಿಯಮಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

Next Post

ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

kalpa News

kalpa News

Next Post
ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

ಯಮಹಾ 'ದಿ ಕಾಲ್ ಆಫ್ ದಿ ಬ್ಲೂ' ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL