No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮರ್ಥ ನಾಯಕನನ್ನು ಆರಿಸಲು ಮತದಾನದ ಹಕ್ಕು ಅತ್ಯಂತ ಮಹತ್ವ: ನ್ಯಾ.ಮುಸ್ತಫಾ ಹುಸೇನ್ ಅಭಿಪ್ರಾಯ

ರಾಷ್ಟ್ರೀಯ ಮತದಾರರ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 25, 2022
in ಶಿವಮೊಗ್ಗ
0
ಸಮರ್ಥ ನಾಯಕನನ್ನು ಆರಿಸಲು ಮತದಾನದ ಹಕ್ಕು ಅತ್ಯಂತ ಮಹತ್ವ: ನ್ಯಾ.ಮುಸ್ತಫಾ ಹುಸೇನ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಮ್ಮನ್ನು ಆಳುವ ಒಬ್ಬ ಸಮರ್ಥ ನಾಯಕನನ್ನು ನಾವೇ ಆರಿಸುವ ಮತದಾನದ ಹಕ್ಕು ಅತ್ಯಂತ ಮಹತ್ವವುಳ್ಳದ್ದಾಗಿದೆ. ಆದರೆ ಈ ಸಾಂವಿಧಾನಿಕ ಹಕ್ಕಿನ ಮಹತ್ವದ ಕುರಿತು ಇನ್ನೂ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮುಸ್ತಫಾ ಹುಸೇನ್.ಎಸ್.ಎ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

1950 ರಲ್ಲಿ ಸ್ಥಾಪನೆಯಾದ ಚುನಾವಣಾ ಆಯೋಗ ಅಂದಿನಿಂದ ಇಲ್ಲಿಯವರೆಗೆ ನಮ್ಮ ರಾಷ್ಟ್ರದಲ್ಲಿ ಎಲ್ಲ ಚುನಾವಣೆಗಳನ್ನು ನಡೆಸುತ್ತಾ ಬಂದಿದೆ. 18 ವರ್ಷ ತುಂಬಿದ ಎಲ್ಲ ಯುವಜನತೆಗೆ ಮತದಾನ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಈ ಹಕ್ಕು ಅತ್ಯಂತ ಜವಾಬ್ದಾರಿಯುತ ಮತ್ತು ಮಹತ್ವವುಳ್ಳದ್ದಾಗಿದೆ. ಆದರೆ ಈ ಸಾಂವಿಧಾನಿಕ ಹಕ್ಕಿನ ಮಹತ್ವದ ಕುರಿತು ಇನ್ನೂ ಹೆಚ್ಚಿನ ಜನರಿಗೆ ಅರಿವಿಲ್ಲ ಎಂಬುದು ಇತ್ತೀಚಿನ ಚುನಾವಣೆಯಲ್ಲಿ ಆಗುತ್ತಿರುವ ಮತದಾನದ ಪ್ರಮಾಣದಿಂದ ತೋರುತ್ತಿದೆ ಎಂದರು.

ಚುನಾವಣೆಗಳಲ್ಲಿ ಶೇ.40, ಶೇ.50 ಹೀಗೆ ಕಡಿಮೆ ಮತದಾನ ಆಗುತ್ತಿರುವುದು ಒಂದು ಗಂಭೀರವಾದ ವಿಚಾರ. ಒಬ್ಬ ನಾಯಕನನ್ನು ಆರಿಸುವಲ್ಲಿ ನನ್ನ ಪಾತ್ರ ಏನು ಎಂದು ಅರಿವಾದಲ್ಲಿ, ಒಂದು ಶಿಸ್ತು ಮತ್ತು ಉತ್ತಮ ನಾಯಕತ್ವ ಬರಲಿದೆ. ಆದ್ದರಿಂದ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಾ ಸಿದ್ದವಿದ್ದು, ಸಹಕಾರ ನೀಡಲಿದೆ ಎಂದರು.

ಪ್ರತಿ ಚುನಾವಣೆಯಲ್ಲಿ ನಾವು ಕಡಿಮೆ ಮತದಾನ ಆಗುತ್ತಿರುವುದನ್ನು ಕಾಣುತ್ತಿದ್ದೇವೆ. ಅಂದರೆ ನಮ್ಮ ಹಕ್ಕನ್ನು ನಾವು ಚಲಾಯಿಸುವಲ್ಲಿ ಹಿಂದಿದ್ದೇವೆ, ನಿರ್ಲಕ್ಷ್ಯ ವಹಿಸಿದ್ದೇವೆ ಎಂದರ್ಥ. ಆದ ಕಾರಣ ನಾವೆಲ್ಲ ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕಿದೆ. ಮತದಾನದ ಹಕ್ಕನ್ನು ನಾವು ಜಾಗರೂಕತೆಯಿಂದ ಚಲಾಯಿಸಿದಾಗ ಮಾತ್ರ ಉತ್ತಮ ಆಡಳಿತ ಸಾಧ್ಯವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ. ಆರ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕಾದರೆ ಪ್ರತಿಯೊಬ್ಬ ಪ್ರಜೆಯು ಮತದಾನ ಸೇರಿದಂತೆ ಈ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕೇವಲ ಮತದಾನದ ಹಕ್ಕು ಚಲಾಯಿಸಿದರೆ ಮಾತ್ರ ಸಾಲದು. 18 ವರ್ಷ ತುಂಬಿದ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಬೇಕು. ಬೇರೆ ಪ್ರದೇಶಗಳಿಗೆ ವಲಸೆ ಹೋದವರು, ವರ್ಗಾವಣೆ, ತೀರಿಹೋದವರ ಹೆಸರನ್ನು ಅರ್ಜಿ ನೀಡಿ ಪಟ್ಟಿಯಿಂದ ತೆಗೆಸಬೇಕು. ಹೊಸದಾಗಿ ಊರಿಗೆ ಬಂದವರ, ವಿಳಾಸ ಬದಲಾವಣೆ ಇತರೆಯನ್ನು ಸೇರಿಸಬೇಕು ಎಂದರು.

ಭಾರತ ಚುನಾವಣಾ ಆಯೋಗವು ಚುನಾವಣೆಗಳಿಗೆ ಸಂಬಂಧಿಸಿದ ಪ್ರತಿಯೊಂದು ವಿಚಾರವನ್ನು ಗಮನಿಸುತ್ತಿರುತ್ತದೆ. ಹಾಗೂ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಪ್ರತಿ ನಾಗರೀಕರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಅವಶ್ಯವಾದ ಕ್ರಮಗಳನ್ನು ಸಹ ಕೈಗೊಳ್ಳುತ್ತಿದೆ. ಮೊದಲೆಲ್ಲ ಮತದಾರರ ಪಟ್ಟಿ ಬಗ್ಗೆ ಮಾಹಿತಿಯನ್ನು ಮತಗಟ್ಟೆ ಅಧಿಕಾರಿಗಳು ಮತ್ತು ಇತರೆ ಅಧಿಕಾರಿಗಳ ಬಳಿ ಕೇಳಿ ಪಡೆಯಬೇಕಿತ್ತು. ಆದರೀಗ ಚುನಾವಣಾ ಆಯೋಗ ಆ್ಯಪ್ ಸಿದ್ದಪಡಿಸಿದ್ದು , ಮಾಹಿತಿ ಪಡೆಯುವುದನ್ನು ಸರಳಗೊಳಿಸಿದೆ. ಹಾಗೂ ಯುವ ಮತದಾರರು ಸೇರಿದಂತೆ ಎಲ್ಲರೂ ಮತದಾನ ಚೀಟಿಯನ್ನು ಸುಲಭವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದ್ದು, ಎಲ್ಲರೂ ಇದರ ಉಪಯೋಗ ಪಡೆಯಬೇಕೆಂದರು.

ಎಲ್ಲ ಪ್ರೌಢಶಾಲೆ, ಕಾಲೇಜುಗಳಲ್ಲಿ ಮತದಾನ ಮತ್ತು ಚುನಾವಣೆ ಬಗ್ಗೆ ಅರಿವು ಮೂಡಿಸಲು ಎಲೆಕ್ಟರಲ್ ಲಿಟರಸಿ ಕ್ಲಬ್‍ಗಳನ್ನು ಸ್ಥಾಪಿಸಲಾಗಿದೆ. ಕ್ಯಾಂಪಸ್ ಅಂಬಾಡಿಸರ್‍ಗಳನ್ನು ನೇಮಿಸಲಾಗಿದೆ. ಹಾಗೂ ಚುನಾವಣಾ ಅವ್ಯವಹಾರಗಳ ತಡೆಗಾಗಿ ಚುನಾವಣಾ ಆಯೋಗ ನವೀನವಾದ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ ಎಂದರು.

ಜಿ.ಪಂ ಸಿಇಓ ಎಂ.ಎಲ್. ವೈಶಾಲಿ ಮಾತನಾಡಿ, ಭಾರತ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಎಂದು ಆಚರಿಸುವ ಮೂಲಕ ಮತದಾನ ಕುರಿತು ಜಾಗೃತಿ ಮತ್ತು ಇದರ ಮಹತ್ವವನ್ನು ತಿಳಿಸಲಾಗುತ್ತಿದೆ. ಕೇವಲ ಐಡಿ ಪ್ರೂಫ್‍ಗಾಗಿ ಮತದಾರರ ಚೀಟಿ ಪಡೆಯುವಂತೆ ಆಗಬಾರದು. ನಮ್ಮ ಮತದಾನದ ಹಕ್ಕು ಚಲಾಯಿಸಲು ಅದರ ಸದ್ಬಳಕೆ ಆಗಬೇಕು. ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಸ್ಥಳೀಯ ಸಂಸ್ಥೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ನಾನು ಮತದಾನ ಮಾಡಿದ್ದೇನೆಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಗಣ್ಯರು ಯುವ ಮತದಾರರಿಗೆ ಎಪಿಕ್ ಕಾರ್ಡ್‍ಗಳನ್ನು ವಿತರಿಸಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ, ಚಿತ್ರಕಲೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಹಾಗೂ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಮತಗಟ್ಟೆ ಅಧಿಕಾರಿ ಪಾಲಾಕ್ಷ ಅವರನ್ನು ಗೌರವಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ ಮತದಾನ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಾನಗರಪಾಲಿಕೆ ಆಯುಕ್ತರಾದ ಚಿದಾನಂದ ಎಸ್. ವಟಾರೆ ಸ್ವಾಗತಿಸಿದರು.  ಚುನಾವಣೆ ಶಾಖೆಯ ತಹಶೀಲ್ದಾರ್ ಮಂಜುಳಾ ಭಜಂತ್ರಿ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNational Voter's DayNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿರಾಷ್ಟ್ರೀಯ ಮತದಾರರ ದಿನಾಚರಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ರಾಷ್ಟ್ರೀಯ ಮತದಾರರ ದಿನ ನಿಮಿತ್ತ ಪ್ರತಿಜ್ಞಾ ವಿಧಿ ಬೋಧನೆ…

Next Post

ಪರಪ್ಪನ ಅಗ್ರಹಾರದ ಕೈದಿಗಳಿಗೆ ಮಾದಕ ವಸ್ತು ಲಭ್ಯ ಹಿನ್ನೆಲೆ ಉನ್ನತ ಮಟ್ಟದ ತನಿಖೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಪರಪ್ಪನ ಅಗ್ರಹಾರದ ಕೈದಿಗಳಿಗೆ ಮಾದಕ ವಸ್ತು ಲಭ್ಯ ಹಿನ್ನೆಲೆ ಉನ್ನತ ಮಟ್ಟದ ತನಿಖೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL