ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಹೊಸನಗರ ತಾಲೂಕು ಅರಸಾಳಿನವರಾದ ಎನ್.ಡಿ.ಅಕ್ಷತಾ ಪುರುಷೋತ್ತಮ್ ಅವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಜೈವಿಕತಂತ್ರಜ್ಞಾನ ವಿಷಯದಲ್ಲಿ ಪಿಎಚ್ ಡಿ ಪದವಿ ನೀಡಿದೆ.
ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕಾರದ ಡಾ.ನಾಗಶ್ರೀ ಎನ್ ರಾವ್ ಅವರ ಮಾರ್ಗದರ್ಶನದಲ್ಲಿ ಅಕ್ಷತಾ ಸಲ್ಲಿಸಿದ ಪ್ರಬಂಧವನ್ನು ಅಂಗೀಕರಿಸಲಾಗಿದೆ ಎಂದು ವಿಟಿಯು ಕುಲಸಚಿವ ಡಾ.ಬಿ.ಇ.ರಂಗಸ್ವಾಮಿ ತಿಳಿಸಿದ್ದಾರೆ.
ಅರಸಾಳು ಮೂಲದ ಸದ್ಯ ಶಿವಮೊಗ್ಗದಲ್ಲಿ ನೆಲೆಸಿರುವ ಅಂಚೆ ನಿವೃತ್ತ ಅಧಿಕಾರಿ ಎನ್.ದತ್ತಾತ್ರಿ, ಗೃಹಿಣಿ ಉಮಾ ದತ್ತಾತ್ರಿ ಅವರ ಪುತ್ರಿಯಾದ ಅಕ್ಷತಾ ಬೆಂಗಳೂರಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post