No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಟಿಯು ಪರೀಕ್ಷೆ | ಜೆಎನ್‌ಎನ್‌ಸಿಇ ಎಂಬಿಎ ವಿದ್ಯಾರ್ಥಿನಿ ಪಾರ್ವತಿ ಸಾಲೇರ ರಾಜ್ಯಕ್ಕೆ ಪ್ರಥಮ

kalpa News by kalpa News
February 9, 2026
in ಶಿವಮೊಗ್ಗ
0
ವಿಟಿಯು ಪರೀಕ್ಷೆ | ಜೆಎನ್‌ಎನ್‌ಸಿಇ ಎಂಬಿಎ ವಿದ್ಯಾರ್ಥಿನಿ ಪಾರ್ವತಿ ಸಾಲೇರ ರಾಜ್ಯಕ್ಕೆ ಪ್ರಥಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ #JNNCE ವಿದ್ಯಾರ್ಥಿನಿ ಪಾರ್ವತಿ ಸಾಲೇರ ರವರು ಎಂಬಿಎ ವಿಭಾಗದಲ್ಲಿ ವಿಟಿಯು ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ನಾಲ್ಕು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಮತ್ತೋರ್ವ ವಿದ್ಯಾರ್ಥಿ ಸಂಜಯ್ ಎಂ.ವಿ ಅವರು ಎಂಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್ ಗಳಿಸಿದ್ದಾರೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ (ಎನ್ಇಎಸ್) ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಅವರು ಸಂತಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಟಿಯಲ್ಲಿಂ ಮಾತನಾಡಿದ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ #Vishveshvaraiah Technical University ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿದ್ದ 25ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಮತ್ತು ಬಂಗಾರದ ಪದಕ ನೀಡಿ ಅಭಿನಂದಿಸಿದ್ದಾರೆ ಎಂದು ತಿಳಿಸಿದರು.
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಪದವಿ ಪಡೆಯುವ ವೇಳೆಯು ಪಾರ್ವತಿ ಸಾಲೇರ ಅವರು ಆರು ಚಿನ್ನದ ಪದಕಗಳನ್ನು ಪಡೆದಿದ್ದರು. ಇದೀಗ ಎಂಬಿಎ ಸ್ನಾತಕೋತ್ತರ ಪದವಿಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಭದ್ರಾವತಿ ಕ್ಷೇತ್ರದ ಶಾಸಕರಾಗಿದ್ದ ಸಾಲೇರ ಸಿದ್ದಪ್ಪ ಅವರ ಮೊಮ್ಮಗಳು. ಅವರ ತಾಯಿ ಐಶ್ವರ್ಯ ಸಾಲೇರ ಕೂಡ ಜೆ.ಎನ್.ಎನ್.ಸಿ.ಇ ಹಿರಿಯ ವಿದ್ಯಾರ್ಥಿಯಾಗಿದ್ದು ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ರ‍್ಯಾಂಕ್ ಪಡೆದಿದ್ದರು ಎಂದು ವಿವರಿಸಿದರು.

ಎನ್ಇಎಸ್ ಚಿನ್ನದ ಪದಕದ ಗರಿ

ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಪಾರ್ವತಿ ಸಾಲೇರ ಅವರಿಗೆ ಸಂಸ್ಥೆಯ ಅಮೃತಮಹೋತ್ಸವದ ಸ್ಮರಣಾರ್ಥವಾಗಿ, ಎನ್ಇಎಸ್ ಅಮೃತಮಹೋತ್ಸವ ಚಿನ್ನದ ಪದಕ ನೀಡಲಾಗುವುದು ಎಂದು ಜಿ.ಎಸ್.ನಾರಾಯಣ ರಾವ್ ಘೋಷಿಸಿದರು. ಫೆಬ್ರವರಿ ಕೊನೆಯ ವಾರದಲ್ಲಿ‌ ನಡೆಯುವ ಐಡಿಯಾ ಲ್ಯಾಬ್ ಉದ್ಘಾಟನಾ ಸಮಾರಂಭದಲ್ಲಿ ರ‍್ಯಾಂಕ್ ವಿಜೇತರನ್ನು ಆಡಳಿತ ಮಂಡಳಿಯಿಂದ ಅಭಿನಂದಿಸಲಾಗುವುದು. ಎನ್ಇಎಸ್ ಅಮೃತಮಹೋತ್ಸವ ಅಂಗವಾಗಿ, ವಿವಿಧ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯಾವುದೇ ವಿಭಾಗದ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯ ಮಟ್ಟದಲ್ಲಿ ಮೊದಲ ರ‍್ಯಾಂಕ್ ಪಡೆದರೆ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾಸಂಸ್ಥೆಗೆ ಅಭಾರಿ

ರ‍್ಯಾಂಕ್ ವಿಜೇತ ವಿದ್ಯಾರ್ಥಿನಿ ಪಾರ್ವತಿ ಸಾಲೇರ ಮಾತನಾಡಿ, ಬಿಇ ಮತ್ತು ಎಂಬಿಎನಲ್ಲಿ ಮೊದಲ ರ‍್ಯಾಂಕ್ ಪಡೆಯಲು ಕಾಲೇಜು ಮತ್ತು ಉಪನ್ಯಾಸಕರಿಂದ ಪೂರಕ ವಾತಾವರಣವಿತ್ತು. ಅದಕ್ಕಾಗಿ ವಿದ್ಯಾಸಂಸ್ಥೆಗೆ ಅಭಾರಿಯಾಗಿದ್ದೇನೆ. ಈಗಾಗಲೇ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಕಂಪನಿಯಲ್ಲಿ ಪ್ರಮುಖ ಹುದ್ದೆಯ ಅವಕಾಶ ದೊರೆತಿದ್ದು, ಇನ್ನಷ್ಟು ಉನ್ನತ ಹೆಜ್ಜೆಗಳ ಕುರಿತಾಗಿ ಯೋಜಿಸಲಿದ್ದೇನೆ ಎಂದು ಹೇಳಿದರು.

ಎನ್ಇಎಸ್ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ಮಾತನಾಡಿ, ಕಾಲೇಜಿನಲ್ಲಿ ನಾವೀನ್ಯತೆ ಹಾಗೂ ಸಂಶೋಧನಾ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. 2025ರಲ್ಲಿ ವಿವಿಧ ವಿಭಾಗಗಳ ಸುಮಾರು 14 ಉಪನ್ಯಾಸಕರು ಪಿಎಚ್.ಡಿ ಪದವಿ ಪಡೆದಿದ್ದು, ಇತ್ತೀಚೆಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪ್ರಮಾಣ ಪತ್ರ ಪಡೆದಿದ್ದಾರೆ. ಪ್ಲೇಸ್ಮೆಂಟ್ ಚಟುವಟಿಕೆಗಳು ವಿದ್ಯಾಸಂಸ್ಥೆಯಲ್ಲಿ ಸಕ್ರಿಯವಾಗಿ ನಡೆಯುತ್ತಿದೆ. ಟಿಸಿಎಸ್, ಐಬಿಎಂ ನಂತಹ ಪ್ರತಿಷ್ಟಿತ ಕಂಪನಿಗಳು ಈಗಾಗಲೇ ಉದ್ಯೋಗವಕಾಶ ನೀಡುವಂತಹ ಚಟುವಟಿಕೆಗಳಲ್ಲಿ ನಿರಂತರವಾಗಿ ನಡೆಯುತ್ತಿದೆ. ದೈನಂದಿನ ತರಗತಿಗಳ ಜೊತೆಯಲ್ಲಿ ಪ್ರಾಯೋಗಿಕ ಆಧಾರಿತ ಕಲಿಕೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ ಎಂದು ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿ, ನ್ಯೂಜೆನ್ ಐಇಡಿಸಿ ಮೂಲಕ ಕೇಂದ್ರ ಸರ್ಕಾರದ ಆರ್ಥಿಕ ಸಹಕಾರದೊಂದಿಗೆ, ವಿದ್ಯಾರ್ಥಿಗಳ ನಾವೀನ್ಯಯುತ ಯೋಚನೆಗಳನ್ನು, ಯೋಜನೆಯಾಗಿ ರೂಪಿಸಿ ಸ್ವಂತ ಕಂಪನಿಗಳನ್ನು ಸ್ಥಾಪಿಸುವಂತೆ ಪ್ರೇರಣೆ ನೀಡುವಂತಹ ಪೂರಕ ವೇದಿಕೆ ನೀಡುವಲ್ಲಿ ಕಾಲೇಜು ಕ್ರಿಯಾಶೀಲವಾಗಿದೆ ಎಂದು ಹೇಳಿದರು.

ಎನ್ಇಎಸ್ ಸಹಕಾರ್ಯದರ್ಶಿ ಡಾ.ಪಿ.ನಾರಾಯಣ್, ಸಂಶೋಧನಾ ಡೀನ್ ಡಾ.ಎಸ್. ವಿ.ಸತ್ಯನಾರಾಯಣ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಜಲೇಶ್ ಕುಮಾರ್, ಪೋಷಕರಾದ ಜ್ಯೋತಿ ಸಾಲೇರ, ಐಶ್ವರ್ಯ ಸಾಲೇರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ, ಸುಭದ್ರ, ಸಂತೋಷ್ ಶಾನಭಾಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: JNNCEKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsVishveshvaraiah Technical Universityಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜುಮಲೆನಾಡು_ಸುದ್ಧಿವಿಶ್ವೇಶ್ವರಯ್ಯ ತಾಂತ್ರಿಕ ವಿವಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಸೃಷ್ಟಿ ಮಣಿಪಾಲ್ – ನ್ಯೂಯಾರ್ಕ್‌ನ FIT ಸಹಯೋಗದೊಂದಿಗೆ “ಬೀಯಿಂಗ್ ಹೈಪರ್ ಹ್ಯೂಮನ್” ಛಾಯಾಗ್ರಹಣ ಪ್ರದರ್ಶನ

Next Post

Union Minister V. Somanna Flagged Off New Demu Train Services Between Dandeli – Alnavar

kalpa News

kalpa News

Next Post
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL