ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇಂಟರ್ ಕಾಲೇಜ್ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಯರಾದ ಪವಿತ್ರ ಪಿ, ಸಂಜನಾ ಎಂ, ಮತ್ತು ಸುಮನ್ ಕೆ ಕ್ರಮವಾಗಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಗಳಿಸಿದ್ದಾರೆ.
ಪವಿತ್ರ ಪಿ 57 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, ಸಂಜನಾ ಎಂ 69 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಸುಮನ್ ಕೆ 105 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಹಾಗೂ ಮಹಿಳಾ ವಿಭಾಗದಲ್ಲಿ ದ್ವಿತೀಯ ಒವರ್‌ಆಲ್ ಚಾಂಪಿಯನ್ ಶಿಪ್ ಪಡೆದಿರುತ್ತಾರೆ. ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟಿನ ಮುಖ್ಯಆಡಳಿತಾಧಿಕಾರಿ ಡಾ. ನಾಗರಾಜ ಹಾಗೂ ಪ್ರಾಂಶುಪಾಲ ಡಾ. ಪ್ರಸನ್ನಕುಮಾರ್ ಶುಭಕೋರಿದ್ದಾರೆ.
Also read: ‘ನೆನಪಿನ ಅಂಕಣ’ ಜೆಎನ್‌ಎನ್‌ಸಿಇ ಹಿರಿಯ ವಿದ್ಯಾರ್ಥಿಗಳ ವಾರ್ತಾ ಪತ್ರಿಕೆ ಬಿಡುಗಡೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post